75ನೇ ಗಣರಾಜ್ಯೋತ್ಸವದಲ್ಲಿ ಹೇಳಿಕೆ
ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣಸಮಾನತೆ, ಸೋದರತೆ, ಸಹಿಷ್ಣುತೆಯ ಸಂದೇಶವನ್ನ ಭಾರತ ರತ್ನ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ರವರು ನಮಗೆ ನೀಡಿದ್ದಾರೆ ಎಂದು ಎಂದು ಶಾಸಕ ಸಿ.ಎನ್.ಬಾಲಕೃಷ್ಣ ತಿಳಿಸಿದರು.
ಅವರು ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ೭೫ನೇ ವರ್ಷದ ಗಣರಾಜ್ಯೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ‘ಸಾಮಾಜಿಕ ನ್ಯಾಯದ ಅಡಿಯಲ್ಲಿ ಸರ್ವರಿಗೂ ಸಮಬಾಳು ಸರ್ವರಿಗೂ ಸಮಪಾಲು ಎಂಬ ದೃಷ್ಟಿಯಿಂದ ಈ ದೇಶದಲ್ಲಿ ನಾವೆಲ್ಲರೂ ಜೀವನವನ್ನ ಕಟ್ಟಿಕೊಂಡಿದ್ದೇವೆ. ಸಂವಿಧಾನದ ವ್ಯವಸ್ಥೆಯಲ್ಲಿ ನ್ಯಾಯಾಂಗ, ಕಾರ್ಯಾಂಗ, ಶಾಸಕಾಂಗ ಹಾಗೂ ಪತ್ರಿಕಾ ರಂಗ ನಮ್ಮ ದೇಶದ ಅಭಿವೃದ್ಧಿಯ ಸಂಕೇತವಾಗಿದೆ. ಒಕ್ಕೂಟದ ವ್ಯವಸ್ಥೆಯಲ್ಲಿ ಪ್ರಜಾಸತ್ತಾತ್ಮಕ ರಾಷ್ಟ್ರವಾಗಿ ಬೆಳೆದಿರುವ ಸಂದರ್ಭದಲ್ಲಿ ನಮ್ಮ ದೇಶ ಸಂವಿಧಾನವನ್ನು ಅಳವಡಿಸಿಕೊಂಡ ನಂತರ ಸಾಮಾಜಿಕವಾಗಿ ಶೈಕ್ಷಣಿಕವಾಗಿ ವೈಜ್ಞಾನಿಕವಾಗಿ ಅಭಿವೃದ್ಧಿ ಹೊಂದುತ್ತಿರುವ ದೇಶವಾಗಿದೆ.‘ನಮ್ಮ ದೇಶದ ಬಗ್ಗೆ ನಾವೆಲ್ಲರೂ ಹೆಮ್ಮೆ ಪಡಬೇಕು. ವಿಶ್ವದಲ್ಲೇ ಹತ್ತನೇ ಆರ್ಥಿಕ ಶಕ್ತಿಯಾಗಿ ಬೆಳೆದಿರುವ ದೇಶ ನಮ್ಮ ಭಾರತ, ಮುಂದಿನ ದಿನಗಳಲ್ಲಿ ಐದನೇ ಸ್ಥಾನಕ್ಕೆ ಏರುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ. ಪಂಚ ವಾರ್ಷಿಕ ಯೋಜನೆಗಳ ಮೂಲಕ ನಮ್ಮ ದೇಶ ಎಲ್ಲಾ ರಂಗದಲ್ಲೂ ಅಭಿವೃದ್ಧಿ ಸಾಧಿಸುತ್ತಿದೆ’ ಎಂದರು.
ತಹಸೀಲ್ದಾರ್ ಬಿ. ಎಂ. ಗೋವಿಂದರಾಜು ಧ್ವಜಾರೊಹಣ ನೆರವೇರಿಸಿ ಮಾತನಾಡಿದರು. ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ತಾಲೂಕು ಆಡಳಿತದ ವತಿಯಿಂದ ಗಣ್ಯರು ಅಭಿನಂದಿಸಿದರು. ಶಾಲಾ ಮಕ್ಕಳು ಪಥ ಸಂಚಲನ ನಡೆಸಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.ಡಿವೈಎಸ್‌ಪಿ ರವಿಪ್ರಸಾದ್, ತಾಲೂಕು ಕಾರ್ಯನಿರ್ವಹಣಾಧಿಕಾರಿ ಹರೀಶ್, ಕ್ಷೇತ್ರಶಿಕ್ಷಣಾಧಿಕಾರಿ ದೀಪಾ, ಪುರಸಭಾ ಮುಖ್ಯಾಧಿಕಾರಿ ಹೇಮಂತ್, ಟಿಎಪಿಸಿಎಂಎಸ್ ಅಧ್ಯಕ್ಷ ನಂಜಪ್ಪ, ನೌಕರರ ಸಂಘದ ಅಧ್ಯಕ್ಷ ಮಂಜಪ್ಪ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಚ್. ಎನ್. ಲೋಕೇಶ್ ಇದ್ದರು.ಶಾಸಕ ಬಾಲಕೃಷ್ಣ ಬಲೂನುಗಳನ್ನು ಹಾರಿಬಿಡುವ ಮೂಲಕ 75 ನೇ ಗಣರಾಜ್ಯೋತ್ಸವಕ್ಕೆ ಚಾಲನೆ ನೀಡಿದರು.