ಭಾರತೀಯ ಸಂಸ್ಕೃತಿಯು ಕಲೆಯನ್ನು ಉಳಿಸುತ್ತಿದೆ

KannadaprabhaNewsNetwork |  
Published : Jun 22, 2025, 01:18 AM IST
20ಎಚ್ಎಸ್ಎನ್19 :  | Kannada Prabha

ಸಾರಾಂಶ

ಬೆಂಗಳೂರಿನ ಜಿಲ್ಲಾ ನ್ಯಾಯಾಧೀಶರಾದ ಗಣಪತಿ ಗುರುಸಿದ್ಧ ಬಾದಾಮಿ ಮಾತನಾಡಿ, ೨೦೧೭ರಲ್ಲಿ ಸ್ಥಾಪಿತವಾದ ರಾಷ್ಟ್ರೀಯ ಶಾಸ್ತ್ರೀಯ ನೃತ್ಯ ಅಕಾಡೆಮಿಯಲ್ಲಿ ವಿಶ್ವದಾದ್ಯಂತ ೨೪ ಸಾವಿರ ಕಲಾವಿದರ ಸದಸ್ಯತ್ವವನ್ನು ಹೊಂದಿದೆ. ಶಾಸ್ತ್ರೀಯ ನೃತ್ಯಗಳನ್ನು ಪ್ರೋತ್ಸಾಹಿಸಿ ಬೆಳೆಸುವ ಉದ್ದೇಶದಿಂದ ಭಾರತೀಯ ಸಂಸ್ಕೃತಿಯಲ್ಲಿ ವಿಶೇಷ ಸ್ಥಾನಮಾನ ಹೊಂದಿರುವ ೮ ವಿಧದ ಶಾಸ್ತ್ರೀಯ ನೃತ್ಯಗಳನ್ನು ಒಂದೆಡೆಗೆ ಸೇರಿಸಿ ನೃತ್ಯವನ್ನು ಕಲಿಯುತ್ತಿರುವ, ಕಲಿತಿರುವ ವೇದಿಕೆ ವಂಚಿತ ಕಲಾವಿದರಿಗಾಗಿ ಇಂತಹ ಕಾರ್ಯಕ್ರಮ ನಡೆಸಿಕೊಂಡು ಬರುತ್ತಿರುವುದು ಶ್ಲಾಘನೀಯ ಎಂದರು.

ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣ

ಪಟ್ಟಣದ ನ್ಯಾಷನಲ್ ಕ್ಲಾಸಿಕಲ್ ಡ್ಯಾನ್ಸ್ ಅಕಾಡೆಮಿ ವತಿಯಿಂದ ಇತ್ತೀಚೆಗೆ ಬೆಂಗಳೂರಿನ ಜ್ಞಾನಸೌಧ ಆಡಿಟೋರಿಯಂನಲ್ಲಿ ೬೭ನೇ ರಾಷ್ಟ್ರೀಯ ನೃತ್ಯೋತ್ಸವ ಕಾರ್ಯಕ್ರಮ ನಡೆಯಿತು.

ಬೆಂಗಳೂರಿನ ಜಿಲ್ಲಾ ನ್ಯಾಯಾಧೀಶರಾದ ಗಣಪತಿ ಗುರುಸಿದ್ಧ ಬಾದಾಮಿ ಮಾತನಾಡಿ, ೨೦೧೭ರಲ್ಲಿ ಸ್ಥಾಪಿತವಾದ ರಾಷ್ಟ್ರೀಯ ಶಾಸ್ತ್ರೀಯ ನೃತ್ಯ ಅಕಾಡೆಮಿಯಲ್ಲಿ ವಿಶ್ವದಾದ್ಯಂತ ೨೪ ಸಾವಿರ ಕಲಾವಿದರ ಸದಸ್ಯತ್ವವನ್ನು ಹೊಂದಿದೆ. ಶಾಸ್ತ್ರೀಯ ನೃತ್ಯಗಳನ್ನು ಪ್ರೋತ್ಸಾಹಿಸಿ ಬೆಳೆಸುವ ಉದ್ದೇಶದಿಂದ ಭಾರತೀಯ ಸಂಸ್ಕೃತಿಯಲ್ಲಿ ವಿಶೇಷ ಸ್ಥಾನಮಾನ ಹೊಂದಿರುವ ೮ ವಿಧದ ಶಾಸ್ತ್ರೀಯ ನೃತ್ಯಗಳನ್ನು ಒಂದೆಡೆಗೆ ಸೇರಿಸಿ ನೃತ್ಯವನ್ನು ಕಲಿಯುತ್ತಿರುವ, ಕಲಿತಿರುವ ವೇದಿಕೆ ವಂಚಿತ ಕಲಾವಿದರಿಗಾಗಿ ಇಂತಹ ಕಾರ್ಯಕ್ರಮ ನಡೆಸಿಕೊಂಡು ಬರುತ್ತಿರುವುದು ಶ್ಲಾಘನೀಯ ಎಂದರು.

ಭಾರತದ ರಾಜ್ಯಗಳಾದ ಕೇರಳ, ತಮಿಳುನಾಡು, ಆಂಧ್ರ ಪ್ರದೇಶ, ಮಧ್ಯಪ್ರದೇಶ, ಉತ್ತರ ಪ್ರದೇಶ, ತೆಲಂಗಾಣ, ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಿಂದ ಭರತನಾಟ್ಯ ಕಲಾವಿದರುಗಳು ೫ರಿಂದ ೬೦ ವರ್ಷದ ವಯಸ್ಸಿನ ೧೮೦ಕ್ಕೂ ಹೆಚ್ಚು ಪ್ರತಿಭಾವಂತ ಕಲಾವಿದರು ಭಾಗವಹಿಸಿ ತಮ್ಮ ಕಲೆಯನ್ನು ಅತ್ಯುತ್ತಮ ಪ್ರದರ್ಶನ ನೀಡಲು ಆಗಮಿಸಿರುವ ಎಲ್ಲಾ ಕಲಾವಿದರಿಗೆ ಅಭಿನಂದನೆಗಳನ್ನು ತಿಳಿಸಿದರು.

ಈ ನೃತ್ಯೋತ್ಸವ ಕಾರ್ಯಕ್ರಮ ಕೇವಲ ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟಕ್ಕೆ ಸೀಮಿತವಾಗದೆ ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ಇಂತಹ ನೃತ್ಯೋತ್ಸವಗಳು ಪ್ರಸಿದ್ಧ ಸ್ಥಳಗಳಲ್ಲಿ ನಡೆಸುವಂತೆ ಅಕಾಡೆಮಿ ಮುಖ್ಯಸ್ಥರಿಗೆ ತಿಳಿಸಿದರು. ಭಾಗವಹಿಸಿದ ಎಲ್ಲಾ ಕಲಾವಿದರಿಗೆ ನಾಟ್ಯಪ್ರಿಯ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಲಾಯಿತು. ರಾಷ್ಟ್ರೀಯ ನೃತ್ಯ ಅಕಾಡೆಮಿಯ ಅಧ್ಯಕ್ಷೆ ಕೆ. ಆರ್‌. ಅನಿತಾ ಪ್ರಕಾಶ್, ಆಯೋಜನೆ ಕಾರ್ಯದರ್ಶಿ ಸ್ವಾತಿ ಪಿ ಭಾರದ್ವಾಜ್ ಸೇರಿದಂತೆ ಇತರರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶೇ.11ರಷ್ಟು ಟೊಯೋಟಾ ಕಾರುಗಳು ರಾಜ್ಯದಲ್ಲೇ ಸೇಲ್‌
ರಾಜ್ಯದಲ್ಲಿ 2 ದಿನ ಮೋಡಕವಿದ ವಾತಾವರಣ, ಮಳೆ