ವಿಜಯನಗರ ಶ್ರೀ ಕೃಷ್ಣದೇವರಾಯ ವಿವಿಯಲ್ಲಿ ಎರಡು ದಿನಗಳ ವಿಜ್ಞಾನ ವಸ್ತು ಪ್ರದರ್ಶನ ಮೇಳಕ್ಕೆ ಚಾಲನೆ
ಕನ್ನಡಪ್ರಭ ವಾರ್ತೆ ಬಳ್ಳಾರಿ
ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿರುವ ಎರಡು ದಿನಗಳ ವಿಜ್ಞಾನ ವಸ್ತು ಪ್ರದರ್ಶನ ಮೇಳವನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿದರು.
ವಿಶ್ವವಿದ್ಯಾಲಯದ ಕುಲಸಚಿವರಾದ ಎಸ್.ಎನ್ ರುದ್ರೇಶ್ ಮಾತನಾಡಿ, ಹೊಸ ಅನ್ವೇಷಣೆಗಳತ್ತ ವಿದ್ಯಾರ್ಥಿಗಳು ಶ್ರಮಿಸಬೇಕು. ಇದರಿಂದ ಪಾಶ್ಚಿಮಾತ್ಯ ದೇಶಗಳಿಗೆ ತೆರಳಿ ಹೆಚ್ಚಿನ ಸಂಶೋಧನೆ ನಡೆಸಲು ಸಾಧ್ಯವಾಗುತ್ತದೆ. ಪ್ರಾಧ್ಯಾಪಕರು ವಿದ್ಯಾರ್ಥಿಗಳನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸುವಂತೆ ಮಾರ್ಗದರ್ಶನ ಮಾಡಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಎಂ. ಮುನಿರಾಜು ಮಾತನಾಡಿ, ಅಮೇರಿಕಾದಲ್ಲಿ ತಂತ್ರಜ್ಞಾನ ಎಷ್ಟೇ ಬೆಳೆದಿದ್ದರು ಅದನ್ನು ನಿರ್ವಹಿಸಲು ಭಾರತೀಯರ ಕೊಡುಗೆ ಅಪಾರವಾಗಿದೆ. ಸಂಶೋಧನೆ ಹಾಗೂ ಅಭಿವೃದ್ಧಿಗೆ ವಿದ್ಯಾರ್ಥಿಗಳು ಹೆಚ್ಚು ಮಹತ್ವ ನೀಡಬೇಕು. ಜಗತ್ತಿನಲ್ಲಿರುವ ನೈಜ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಕೇವಲ ಸಂಶೋಧನೆಯಿAದ ಮಾತ್ರ ಸಾಧ್ಯ. ಸಂಶೋಧನೆ ಮತ್ತು ಅಭಿವೃದ್ಧಿಗೆ ಆದ್ಯತೆ ನೀಡಲು ಮುಂಬರುವ ದಿನಗಳಲ್ಲಿ ಹಲವಾರು ಅಂತರಾಷ್ಟ್ರೀಯ ವಿಶ್ವವಿದ್ಯಾಲಯಗಳೊಂದಿಗೆ ಶೈಕ್ಷಣಿಕ ಒಡಂಬಡಿಕೆಯನ್ನು ಮಾಡಿಕೊಳ್ಳಲಾಗುವುದು ಎಂದು ಹೇಳಿದರು.
ಬಳಿಕ ವಿಜ್ಞಾನ ಪ್ರದರ್ಶನ ಮೇಳಕ್ಕೆ ಗಣ್ಯರು ಚಾಲನೆ ನೀಡಿದರು. ವಿವಿಯ ಎಲ್ಲ ವಿಜ್ಞಾನ ವಿಭಾಗಗಳ ಸಂಶೋಧನಾ ವಿದ್ಯಾರ್ಥಿಗಳು, ಸ್ನಾತಕೋತ್ತರ ವಿದ್ಯಾರ್ಥಿಗಳು ಸಿದ್ಧಪಡಿಸಿರುವ 50ಕ್ಕೂ ಅಧಿಕ ವೈವಿಧ್ಯಮಯ ವಿಜ್ಞಾನ ಪ್ರಯೋಗಗಳ ಪ್ರದರ್ಶನ ನಡೆಯಿತು. ಇದೇ ಸಂದರ್ಭದಲ್ಲಿ ಅಂತರಾಷ್ಟ್ರೀಯ ಗಣಿತ ದಿನ (ವಿಶ್ವ ಪೈ ದಿನ) ವನ್ನು ಗಣಿತಶಾಸ್ತ್ರ ವಿಭಾಗದಲ್ಲಿ ಆಚರಿಸಲಾಯಿತು. ಪ್ರೊ.ತಿಪ್ಪೇರುದ್ರಪ್ಪ ಜೆ ಹಾಗೂ ವಿದ್ಯಾರ್ಥಿನಿ ಐಶ್ವರ್ಯ ಕಾರ್ಯಕ್ರಮ ನಿರ್ವಹಿಸಿದರು. ವಿಶ್ವವಿದ್ಯಾಲಯದ ಬೋಧಕ, ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಪೋಷಕರು ಭಾಗವಹಿಸಿದ್ದರು.