ಕನ್ನಡಪ್ರಭ ವಾರ್ತೆ ಚಿತ್ರದುರ್ಗ
ನಗರದ ಜಿಲ್ಲಾ ಪಂಚಾಯಿತಿ ಮಿನಿ ಸಭಾಂಗಣದಲ್ಲಿ ಗುರುವಾರ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಸಹಯೋಗದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ನೀತಿ-2016 (ಪರಿಷ್ಕರಣೆ-2023) ಹಾಗೂ ಮಕ್ಕಳ ರಕ್ಷಣೆ ಕಾಯ್ದೆ ಕುರಿತು ಡಿಪ್ಲೊಮೋ, ಪಾಲಿಟೆಕ್ನಿಕ್, ಐಟಿಐ ಮತ್ತು ಪ್ಯಾರಾಮೆಡಿಕಲ್ ಕಾಲೇಜು ಪ್ರಾಂಶುಪಾಲರಿಗೆ ಆಯೋಜಿಸಿದ್ದ ತರಬೇತಿ ಉದ್ಘಾಟಿಸಿ ಮಾತನಾಡಿದ ಅವರು . ಎಲ್ಲಾ ಶಿಕ್ಷಣ ಸಂಸ್ಥೆಗಳಲ್ಲಿ 18 ವರ್ಷದೊಳಗಿನ ಮಕ್ಕಳ ಸುರಕ್ಷತೆಗಾಗಿ ಜಾರಿಗೆ ತರಲಾಗಿರುವ ಮಕ್ಕಳ ರಕ್ಷಣಾ ನೀತಿ ಕಡ್ಡಾಯವಾಗಿ ಅನುಷ್ಠಾನಗೊಳ್ಳಬೇಕು ಎಂದು ತಾಕೀತು ಮಾಡಿದರು.
ರಾಜ್ಯದ ವಿವಿಧ ಜಿಲ್ಲೆಗಳ ಐಟಿಐ, ಪ್ಯಾರಾಮೆಡಿಕಲ್ ಹಾಗೂ ಪಾಲಿಟೆಕ್ನಿಕ್ ಕಾಲೇಜುಗಳಿಗೆ ಭೇಟಿ ನೀಡಿದಾಗ, ಮಕ್ಕಳ ರಕ್ಷಣಾ ನೀತಿಯ ಬಗ್ಗೆ ಅನೇಕ ಪ್ರಾಂಶುಪಾಲರಿಗೆ ಮಾಹಿತಿಯೇ ಇಲ್ಲದಿರುವುದು ಗಮನಕ್ಕೆ ಬಂದಿದೆ. ಈ ರಕ್ಷಣಾ ನೀತಿಯು ಕೇವಲ ಸರ್ಕಾರಿ ಶಾಲೆಗಳಿಗೆ ಮಾತ್ರವಲ್ಲದೆ, ಅನುದಾನಿತ, ಅನುದಾನರಹಿತ ಸಂಸ್ಥೆಗಳು ಹಾಗೂ ಖಾಸಗಿ ಟ್ಯೂಷನ್ ಕೇಂದ್ರಗಳಿಗೂ ಅನ್ವಯಿಸುತ್ತದೆ. ಪ್ರತಿಯೊಂದು ಶಿಕ್ಷಣ ಸಂಸ್ಥೆಯು ಕಡ್ಡಾಯವಾಗಿ ‘ಮಕ್ಕಳ ರಕ್ಷಣಾ ಸಮಿತಿ''''''''ಯನ್ನು ರಚಿಸಬೇಕು ಎಂದು ತಿಳಿಸಿದರು.ಈ ಹಿಂದೆ ಕೇವಲ ಶಿಕ್ಷಣ ಇಲಾಖೆಗೆ ಸೀಮಿತವಾಗಿದ್ದ ಮಕ್ಕಳ ರಕ್ಷಣಾ ನೀತಿ, ಈಗ ಆಯೋಗದ ಕ್ರಮದಿಂದಾಗಿ 11 ವಿವಿಧ ಇಲಾಖೆಗಳ ಮೂಲಕ 30 ಪುಟಗಳ ಸಮಗ್ರ ಸುತ್ತೋಲೆಯಾಗಿ ಹೊರಬಂದಿದೆ. ಮಕ್ಕಳ ಮೇಲೆ ನಡೆಯುವ ದೌರ್ಜನ್ಯಗಳನ್ನು ತಡೆಗಟ್ಟಲು ಮತ್ತು ಅವರಿಗೆ ಸುರಕ್ಷಿತ ವಾತಾವರಣ ಒದಗಿಸಲು ಅಧಿಕಾರಿಗಳು ಹಾಗೂ ಶಿಕ್ಷಣ ಸಂಸ್ಥೆಗಳು ಸಮನ್ವಯದಿಂದ ಕೆಲಸ ಮಾಡಬೇಕು ಎಂದು ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ನಿರೂಪಣಾಧಿಕಾರಿ ಡಿ.ಮಂಜುನಾಥ್, ಮಕ್ಕಳ ಕಲ್ಯಾಣ ಸಮಿತಿ ಸದಸ್ಯರಾದ ಜಗದೀಶ್, ರಂಗನಾಥ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಎ.ಎಂ.ವೀಣಾ, ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಗೂ ಜಿಲ್ಲೆಯ ಡಿಪ್ಲೊಮೋ, ಪಾಲಿಟೆಕ್ನಿಕ್, ಐಟಿಐ ಮತ್ತು ಪ್ಯಾರಾಮೆಡಿಕಲ್ ಕಾಲೇಜು ಪ್ರಾಂಶುಪಾಲರು ಇದ್ದರು.