ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ
ತಾಲೂಕಿನ ಬೂಕನಕೆರೆ ಗ್ರಾಮದ ಸಮುದಾಯ ಭವನದಲ್ಲಿ ನಡೆದ ಜನಸ್ಪಂದನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಜಿಲ್ಲೆಯಲ್ಲಿ ಕ್ರಿಯಾಶೀಲ ಜಿಲ್ಲಾಧಿಕಾರಿ ಹಾಗೂ ತಾಲೂಕಿನಲ್ಲಿ ತಹಸೀಲ್ದಾರ್ ಇದ್ದರೂ ತಾಲೂಕು ಮಟ್ಟದ ಕಂದಾಯ ಇಲಾಖೆಯಲ್ಲಿ ಕೆಲ ಸಿಬ್ಬಂದಿಯಿಂದಾಗುವ ತಪ್ಪುಗಳಿಂದ ಹಲವು ಸಮಸ್ಯೆಗಳು ಉದ್ಭವಿಸಿ ಅಣ್ಣ - ತಮ್ಮಂದಿರಲ್ಲಿ ಆಸ್ತಿ ವ್ಯಾಜ್ಯಗಳು ಉಂಟಾಗುತ್ತಿವೆ ಎಂದರು.
100ಕ್ಕೆ ಶೇ.70 ರಷ್ಟು ಭಾಗದ ಆಸ್ತಿಗಳು ಇನ್ನೂ ಕೂಡ ಪೌತಿ ಖಾತೆಗಳು ಆಗಿಲ್ಲ. ಆಸ್ತಿ ಭಾಗವಾಗದೇ ತಾತ, ಮುತ್ತಾತ ನ ಹೆಸರಿನಲ್ಲೇ ಇರುವುದು, ಕುಟುಂಬದವರು ಒಟ್ಟಿಗೆ ಸೇರಿ ಪೌತಿ ಖಾತೆ ಮಾಡಿಸಿಕೊಳ್ಳದೇ ಇರುವುದು ಮುಂತಾದ ಸಮಸ್ಯೆಗಳ ಪರಿಹಾರಕ್ಕಾಗಿ ಹೆಚ್ಚು ಸಾರ್ವಜನಿಕರು ಸರ್ಕಾರಿ ಕಚೇರಿಗಳಿಗೆ ಅಲೆದಾಡುತ್ತಿದ್ದಾರೆ. ಈ ಒಂದು ಸಮಸ್ಯೆ ಅಕ್ರಮ ಆಸ್ತಿಗಳಿಕೆಗೆ ದಾರಿ ಮಾಡಿಕೊಡಬಹುದು ಎಂದು ಎಚ್ಚರಿಸಿದರು.ಸರ್ಕಾರಿ ಆಸ್ತಿ ರಕ್ಷಿಸುವುದು ಅಧಿಕಾರಿಗಳ ಕರ್ತವ್ಯ. ಸರ್ಕಾರದ ಆಸ್ತಿಗಳ ವ್ಯಾಪ್ತಿಯನ್ನು ಮೊದಲು ಗುರುತು ಮಾಡಿಕೊಳ್ಳುವುದು ಅತ್ಯವಶ್ಯಕ. ರೈತರು, ಸಾರ್ವಜನಿಕರು ನೀಡಿರುವ ಅಹವಾಲುಗಳನ್ನು ಇಲಾಖಾ ಅಧಿಕಾರಿಗಳು ನಿರ್ಲಕ್ಷ್ಯ ಮಾಡದೇ ಶೀಘ್ರವೇ ಸ್ಪಂದಿಸಿ, ಸಮಸ್ಯೆಗಳನ್ನು ನಿಯಮಾನುಸಾರ ಬಗೆಹರಿಸಲು ಮುಂದಾಗಬೇಕು ಎಂದು ಸೂಚಿಸಿದರು.
ಪೌತಿ ಖಾತಾ ಆಂದೋಲನ, ಪಿಂಚಣಿ, ಆರ್.ಟಿ.ಸಿ ತಿದ್ದುಪಡಿ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಗ್ರಾಪಂ ಮಟ್ಟದಲ್ಲಿ ಆಯೋಜಿಸಲಾಗುತ್ತದೆ. ಈ ಬಗ್ಗೆ ಜಾಗೃತಿ ಮೂಡಿಸಬೇಕು. ಇದರಿಂದ ಹೆಚ್ಚು ಜನರು ಭಾಗವಹಿಸಿ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳುತ್ತಾರೆ ಅಭಿಪ್ರಾಯಪಟ್ಟರು.
ರೈತರು ಅಥವಾ ಜನಸಮಾನ್ಯರು ಕರೆ ಮಾಡಿದಾಗ ಜಿಲ್ಲಾಧಿಕಾರಿಗಳು ಸ್ವೀಕರಿಸಿ ಅವರ ಸಮಸ್ಯೆಗಳನ್ನು ಆಲಿಸಿ ಪರಿಹರಿಸುತ್ತಾರೆ. ಒಂದು ವೇಳೆ ಕಾನೂನು ವ್ಯಾಪ್ತಿಯಲ್ಲಿ ಬರದಿದ್ದರೆ ಮನವರಿಕೆ ಮಾಡಿಕೊಡುತ್ತಾರೆ. ಇವರ ಕಾರ್ಯವೈಖರಿ ಶ್ಲಾಘನೀಯ. ಅಧಿಕಾರಿಗಳು ಸಹ ಜನಸಮಾನ್ಯರಿಗೆ ಸ್ಪಂದಿಸಿ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.