ವಿಕಸಿತ ಭಾರತಕ್ಕಾಗಿ ಸ್ವದೇಶಿ ತಂತ್ರಜ್ಞಾನ ಅತ್ಯವಶ್ಯ: ಡಾ.ಜಿ.ಬಿ. ದಾನಶೆಟ್ಟಿ

KannadaprabhaNewsNetwork |  
Published : Mar 01, 2024, 02:21 AM IST
(ಫೋಟೋ 29ಬಿಕೆಟಿ4, ಬಿ. ವಿ. ವಿ. ಎಸ್. ಪಾಲಿಟೆಕ್ನಿಕ್ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ಜಿ. ಬಿ. ದಾನಶೆಟ್ಟಿ ಅವರು ಮಾತನಾಡಿದರು.) | Kannada Prabha

ಸಾರಾಂಶ

ಬಾಘಲಕೋಟೆಯ ಬಿವಿವಿ ಸಂಘದ ಬಸವೇಶ್ವರ ವಿಜ್ಞಾನ ಮಹಾವಿದ್ಯಾಲಯದ ಐ.ಕ್ಯೂ.ಎ.ಸಿ. ಘಟಕದ ಅಡಿಯಲ್ಲಿ ವಿಜ್ಞಾನ ಸಂಘ ಗುರುವಾರ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಹಮ್ಮಿಕೊಂಡಿತ್ತು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಹೀಗೆ ಯಾಕೆ ಎಂದು ಕೇಳಿದವ ವಿಜ್ಞಾನಿಯಾಗುತ್ತಾನೆ. ಕೇಳದವ ಸಾಮಾನ್ಯ ಮನುಷ್ಯನಾಗುತ್ತಾನೆ. ವಿದ್ಯಾರ್ಥಿಗಳು ಯಾವುದನ್ನೂ ಪ್ರಶ್ನಿಸದೆ ಒಪ್ಪಿಕೊಳ್ಳಬಾರದು. ಗುರಿಯಲ್ಲಿ ಅರ್ಜುನ ನಿಷ್ಠೆ ಹೊಂದಿದಾಗ ಮಾತ್ರ ಯಶಸ್ಸು ಲಭಿಸುತ್ತದೆ ಎಂದು ಬಿವಿವಿಎಸ್ ಪಾಲಿಟೆಕ್ನಿಕ್ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಜಿ.ಬಿ. ದಾನಶೆಟ್ಟಿ ಹೇಳಿದರು.

ಬಿವಿವಿ ಸಂಘದ ಬಸವೇಶ್ವರ ವಿಜ್ಞಾನ ಮಹಾವಿದ್ಯಾಲಯದ ಐ.ಕ್ಯೂ.ಎ.ಸಿ. ಘಟಕದ ಅಡಿಯಲ್ಲಿ ವಿಜ್ಞಾನ ಸಂಘ ಹಮ್ಮಿಕೊಂಡ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿ, ಎಲ್ಲರಲ್ಲಿಯೂ ದೇಶಾಭಿಮಾನದ ಅರಿವು ಬಹುಮುಖ್ಯ ಎಂದು ಅಭಿಪ್ರಾಯಪಟ್ಟರು. ಭಾರತ ವಿಶ್ವಗುರುವಾಗಿ ಜಗತ್ತಿನ ಸಂವಿಧಾನ ಬರೆಯುವಷ್ಟು ಎತ್ತರಕ್ಕೆ ಭಾರತ ಸ್ವದೇಶಿ ತಂತ್ರಜ್ಞಾನದಲ್ಲಿ ಬೆಳೆಯಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಎಸ್.ಎಂ. ಗಾಂವಕರ ಮಾತನಾಡಿ, ವಿದ್ಯಾರ್ಥಿಗಳು ಸ್ವದೇಶಿ ನಿರ್ಮಿತ ತಂತ್ರಜ್ಞಾನಗಳ ಬೆಳವಣಿಗೆಯ ಕಡೆ ಮುಖ ಮಾಡಬೇಕೆಂದು ಸಲಹೆ ನೀಡಿದರು.

ಸರ್. ಸಿ. ವಿ. ರಾಮನ್‌ ಕುರಿತು ಹಲವು ಆಸಕ್ತಿದಾಯಕ ಸಂಗತಿಗಳನ್ನು ಹಂಚಿಕೊಂಡರು. ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ವಿವಿಧ ಸರ್ಧೆ ವಿಜೇತರಿಗೆ ಬಹುಮಾನ ಹಾಗೂ ಪ್ರಶಸ್ತಿ ಪತ್ರ ವಿತರಿಸಲಾಯಿತು. ಗೀತಾ ವೈದ್ಯ ಪ್ರಾರ್ಥಿಸಿದರು. ಪ್ರೊ.ಎಸ್.ಆರ್. ದೇಶಪಾಂಡೆ ಸ್ವಾಗತಿಸಿದರು. ಡಾ.ಪಿ.ಐ. ಮಂಡಿ ಪರಿಚಯಿಸಿದರು. ಪೂರ್ಣಿಮಾ ಮುಚಂಡಿ ನಿರೂಪಿಸಿದರು, ಎಂ.ಬಿ. ಮಠ ವಂದಿಸಿದರು. ವೇದಿಕೆಯ ಮೇಲೆ ಐ.ಕ್ಯೂ.ಎ.ಸಿ. ಸಂಯೋಜಕ ಡಾ.ಡಿ.ಎಸ್. ಲಮಾಣಿ, ವಿಜ್ಞಾನ ಸಂಘದ ಕಾಯಾಧ್ಯಕ್ಷ ಡಾ.ಪಿ.ಐ. ಮಂಡಿ ಹಾಗೂ ಹಳೆಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಡಾ.ಬಿ.ಎನ್. ಕಿರಸುರ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಾಳಸಂತೆಯಲ್ಲಿ ಎಲ್ಪಿಜಿ ಸೇಲ್‌ ಮೇಲೆ ನಿಗಾ - ಅಧಿಕಾರಿಗಳಿಗೆ ಸಿಎಸ್‌ ಸೂಚನೆ
ಕುಟುಂಬಕ್ಕೆ ತಿಂಗಳಿಗೆ 1 ಸಿಲಿಂಡರ್‌ : ಸಚಿವ ಕೆ.ಎಚ್. ಮುನಿಯಪ್ಪ