ಕುಕ್ಕೆ ಸುಬ್ರಹ್ಮಣ್ಯ ಪರಿಸರದಲ್ಲಿ ಸ್ವಾತಂತ್ರ್ಯೋತ್ಸವ

KannadaprabhaNewsNetwork |  
Published : Aug 19, 2026, 02:45 AM IST
 ಕುಕ್ಕೆ ಶ್ರೀ  ಸುಬ್ರಹ್ಮಣ್ಯ ಶಿಕ್ಷಣ ಸಂಸ್ಥೆಯಲ್ಲಿ ಸ್ವಾತಂತ್ರ್ಯೋತ್ಸವ  | Kannada Prabha

ಸಾರಾಂಶ

ನಗರದ ಜಪ್ಪು ವೃತ್ತದ ಸದ್ಭಾವನಾ ವೇದಿಕೆಯ ವತಿಯಿಂದ ಬಿಜೈ ಲಯನ್ಸ್ ಕ್ಲಬ್‌ನ ಸಹಯೋಗದಲ್ಲಿ ಅತ್ತಾವರ ಕಟ್ಟೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು.

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ ಧ್ವಜಾರೋಹಣ ನೆರವೇರಿಸಿದರು ಈ ಸಂದರ್ಭದಲ್ಲಿ ದೇವಳದ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ ಸಹಾಯಕ ಕಾರ್ಯ ನಿರ್ವಹಣಾಧಿಕಾರಿ ಯೇಸುರಾಜ್ ವ್ಯವಸ್ಥಾಪನ ಸಮಿತಿಯ ಸದಸ್ಯರು ಕಚೇರಿ ಸಿಬ್ಬಂದಿ ವರ್ಗದವರು ಭದ್ರತಾ ಸಿಬ್ಬಂದಿ ವರ್ಗದವರು ಹೋಂ ಗಾರ್ಡ್ ಶ್ರೀ ದೇವಳದ ಕಾರ್ಮಿಕರು ಹಾಗೂ ಕ್ಷೇತ್ರಕ್ಕೆ ಬಂದ ಭಕ್ತಾದಿಗಳು ಪಾಲ್ಗೊಂಡಿದ್ದರು. ಸುಬ್ರಮಣ್ಯ ಗ್ರಾಮ ಪಂಚಾಯಿತಿ: ಸುಬ್ರಹ್ಮಣ್ಯ ಗ್ರಾಮ ಪಂಚಾಯಿತಿಯಲ್ಲಿ ಕಾರ್ಯದರ್ಶಿ ಮೋನಪ್ಪ ಡಿ. ಅವರು ಧ್ವಜಾರೋಹಣ ನೆರವೇರಿಸಿದರು. ಮುಖ್ಯ ಅತಿಥಿಯಾಗಿ ಡಾ. ಕೆ ಎಸ್ ಎನ್ ಉಡುಪ ಉಪಸ್ಥಿತರಿದ್ದರು ಈ ಸಂದರ್ಭದಲ್ಲಿ ಶಿವರಾಮ ರೈ ಕೃಷ್ಣಮೂರ್ತಿ ಭಟ್ ವಿಶ್ವ ನಾಥ ನಡುತೋಟ ವೆಂಕಟೇಶ ಎಚ್ ಎಲ್ ರವೀಂದ್ರ ಕುಮಾರ ರುದ್ರಪಾದ ದೀಪಕ್ ಮತ್ತಿತರರಿದ್ದರು.ವಸತಿ ಶಾಲೆ: ಸುಬ್ರಹ್ಮಣ್ಯದ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಯಲ್ಲಿ ಶಾಲಾ ಅಭಿವೃದ್ಧಿ ಹಾಗೂ ಮೇಲೂ ಉಸ್ತುವಾರಿ ಸಮಿತಿ ಸದಸ್ಯ ಗಣೇಶ್ ಧ್ವಜಾರೋಹಣ ನೆರವೇರಿಸಿದರು. ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸದಸ್ಯ ಅಶೋಕ ನೆಕ್ರಾಜೆ ಶಾಲಾ ಮುಖ್ಯ ಶಿಕ್ಷಕಿ ಮಲ್ಲಿಕಾ ಕಾಯಾರ ಶಿಕ್ಷಕ ವೃಂದದವರು ಪೋಷಕ ಕರು ಹಾಗೂ ಮಕ್ಕಳು ಹಾಜರಿದ್ದರು

.

ಕೆ ಎಸ್ ಎಸ್ ಕಾಲೇಜು: ಸ್ಥಳೀಯ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜಿನಲ್ಲಿ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಹರೀಶ ಹಿಂಜಾಡಿ ಧ್ವಜಾರೋಹಣ ನೆರವೇರಿಸಿದರು ಕಾಲೇಜಿನ ಪ್ರಾಂಶುಪಾಲ ಡಾ. ದಿನೇಶ್ ಉಪನ್ಯಾಸಕ ವೃಂದದವರು ಪೋಷಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು. ಎಸ್ ಎಸ್ ಪಿ ಯು ಕಾಲೇಜು: ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಹರೀಶ ಇಂಜಾಡಿ ಅವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ಸೋಮಶೇಖರ ನಾಯಕ್ ಮತ್ತಿತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಆರೋಗ್ಯಕರ ಪರಿಸರ ನಿರ್ಮಿಸುವ ಉದ್ದೇಶದಿಂದ ಲಕ್ಷ ವೃಕ್ಷ ಸಂಕಲ್ಪ
ಸೆ.4, 5ರಂದು ಕೃಷ್ಣ ವಾದಿರಾಜ ಮಠದಲ್ಲಿ ಕೃಷ್ಣ ಜನ್ಮಾಷ್ಟಮಿ