ಬಜ್ಪೆ ಪೇಟೆಯಲ್ಲಿ ನೂತನವಾಗಿ ನಿರ್ಮಾಣಗೊಂಡ ಇಂದಿರಾ ಕ್ಯಾಂಟೀನ್‌ನ್ನು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಶನಿವಾರ ಉದ್ಘಾಟಿಸಿದರು.
ಮಂಗಳೂರು: ಬಜ್ಪೆ ಪೇಟೆಯಲ್ಲಿ ನೂತನವಾಗಿ ನಿರ್ಮಾಣಗೊಂಡ ಇಂದಿರಾ ಕ್ಯಾಂಟೀನ್‌ನ್ನು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಶನಿವಾರ ಉದ್ಘಾಟಿಸಿದರು.
ಈ ಸಂದರ್ಭ ಮಾತನಾಡಿದ ಅವರು, ಸಾರ್ವಜನಿಕರ ದೀರ್ಘಕಾಲದ ನಿರೀಕ್ಷೆಯಂತೆ ಬಜ್ಪೆಯಲ್ಲಿ ನೂತನವಾಗಿ ಇಂದಿರಾ ಕ್ಯಾಂಟೀನ್ ನಿರ್ಮಾಣಗೊಂಡಿದೆ. ಬಡವರು ಮತ್ತು ಜನಸಾಮಾನ್ಯರಿಗೆ ಅತ್ಯಂತ ಕಡಿಮೆ ದರದಲ್ಲಿ, ಅಚ್ಚುಕಟ್ಟಾದ ಪರಿಸರದಲ್ಲಿ ಗುಣಮಟ್ಟದ ಆಹಾರ ಒದಗಿಸುವುದು ಸರ್ಕಾರದ ಮುಖ್ಯ ಉದ್ದೇಶ. ಬಜ್ಪೆಯ ಈ ಹೊಸ ಕ್ಯಾಂಟೀನ್ ಸಾರ್ವಜನಿಕ ಸೇವೆಗೆ ಲಭ್ಯವಿದ್ದು, ಹಸಿವು ಮುಕ್ತ ಸಮಾಜದತ್ತ ಕಾಂಗ್ರೆಸ್ ಸರ್ಕಾರದ ಮತ್ತೊಂದು ಮಹತ್ವದ ಹೆಜ್ಜೆಯಾಗಿದೆ ಎಂದು ಹೇಳಿದರು.
ಈ ಸಂದರ್ಭ ಕರಾವಳಿ ಅಭಿವೃದ್ದಿ ಮಂಡಳಿ ಅಧ್ಯಕ್ಷ ಎಂ.ಎ. ಗಫೂರ್, ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿಎಂ ಶಹೀದ್, ಜಿಲ್ಲಾಧಿಕಾರಿ ದರ್ಶನ್ ಎಚ್.ವಿ., ಬಜ್ಪೆ ಪಟ್ಟಣ ಪಂಚಾಯ್ತಿ ಅಧ್ಯಕ್ಷ ಲೋಕೇಶ್ ಪೂಜಾರಿ ಮತ್ತಿತರರು ಇದ್ದರು. ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.