ಹಸಿವು ರಾಜ್ಯಕ್ಕಾಗಿ ಇಂದಿರಾ ಕ್ಯಾಂಟೀನ್‌

KannadaprabhaNewsNetwork |  
Published : May 28, 2025, 01:54 AM IST
ಅಪ್ಪಾಜಿ | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಜನಪರ ಆಡಳಿತ ನಡೆಸುತ್ತಿದ್ದು, ಇಂದಿರಾ ಕ್ಯಾಂಟೀನ್‌ ಮೂಲಕ ಹಸಿವು ಮುಕ್ತ ರಾಜ್ಯವಾಗಬೇಕೆಂಬ ಉದ್ದೇಶ ಹೊಂದಲಾಗಿದೆ. ಜನರು ಸದುಪಯೋಗ ಪಡೆಸಿಕೊಳ್ಳಬೇಕು ಎಂದು ಶಾಸಕ ಹಾಗೂ ಕೆಎಸ್‌ಡಿಎಲ್‌ ಅಧ್ಯಕ್ಷ ಸಿ.ಎಸ್.ನಾಡಗೌಡ(ಅಪ್ಪಾಜಿ) ಹೇಳಿದರು.

ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಜನಪರ ಆಡಳಿತ ನಡೆಸುತ್ತಿದ್ದು, ಇಂದಿರಾ ಕ್ಯಾಂಟೀನ್‌ ಮೂಲಕ ಹಸಿವು ಮುಕ್ತ ರಾಜ್ಯವಾಗಬೇಕೆಂಬ ಉದ್ದೇಶ ಹೊಂದಲಾಗಿದೆ. ಜನರು ಸದುಪಯೋಗ ಪಡೆಸಿಕೊಳ್ಳಬೇಕು ಎಂದು ಶಾಸಕ ಹಾಗೂ ಕೆಎಸ್‌ಡಿಎಲ್‌ ಅಧ್ಯಕ್ಷ ಸಿ.ಎಸ್.ನಾಡಗೌಡ(ಅಪ್ಪಾಜಿ) ಹೇಳಿದರು.

ಪಟ್ಟಣದ ಪುರಸಭೆಯಿಂದ ಬಸವೇಶ್ವರ ವೃತ್ತದ ಬಳಿ ತೆರೆದಿರುವ ಇಂದಿರಾ ಕ್ಯಾಂಟೀನ್‌ನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕಳೇದ 2017ರ ನಮ್ಮ ಸರ್ಕಾರದ ಅವಧಿಯಲ್ಲಿಯೇ ರಾಜ್ಯದ ಎಲ್ಲ ಜಿಲ್ಲೆ ಹಾಗೂ ತಾಲೂಕು ಕೇಂದ್ರಗಳಲ್ಲಿ ಇಂದಿರಾ ಕ್ಯಾಂಟೀನ್‌ ತೆರೆಯಬೇಕೆಂದು ಉದ್ದೇಶವಿತ್ತು. ಆದರೆ, ಕೆಲವೇಡೆ ಇಂದಿರಾ ಕ್ಯಾಂಟೀನ ಸ್ಥಾಪಿಸಲಾಯಿತು ಆದರೆ ಕೆಲವು ಕಡೆಗಳಲ್ಲಿ ಸ್ಥಾಪಿಸಬೇಕು ಎನ್ನುವಷ್ಟರಲ್ಲಿಯೇ ನಮ್ಮ ಸರ್ಕಾರ ಅಸ್ತಿತ್ವ ಕಳೆದುಕೊಂಡು ಬಿಜೆಪಿ ಅಧಿಕಾರಕ್ಕೆ ಬಂತು. ಬಿಜೆಪಿ ಸರಕಾರ ಇಂದಿರಾ ಕ್ಯಾಂಟೀನ್ ಪ್ರಾರಂಭಿಸುವಲ್ಲಿ ಇಚ್ಚಾಸಕ್ತಿ ತೋರಲಿಲ್ಲ. ಇದರಿಂದ ರಾಜ್ಯದಲ್ಲಿ ಮತ್ತೆ ನಮ್ಮ ಸರ್ಕಾರವೇ ಅಧಿಕಾರಕ್ಕೆ ಬರಬೇಕಾದ ಸ್ಥಿತಿ ಬಂದೊದಗಿತು. ಸದ್ಯ ಎಲ್ಲೆಲ್ಲಿ ಇಂದಿರಾ ಕ್ಯಾಂಟೀನ್‌ ನೆನಗುದಿಗೆ ಬಿದ್ದಿವೆ ಅಲ್ಲಲ್ಲಿ ಕ್ಯಾಂಟೀನ್‌ ಸ್ಥಾಪಿಸುವಂತೆ ಸೂಚನೆ ಇದೆ. ಸಧ್ಯ ಮುದ್ದೇಬಿಹಾಳ, ತಾಳಿಕೋಟಿ, ನಾಲತವಾಡ ಪಟ್ಟಣಗಳಲ್ಲಿ ಇಂದಿರಾ ಕ್ಯಾಂಟೀನ್‌ ಪ್ರಾರಂಭಿಸಲಾಗಿದೆ ಎಂದರು.ಪ್ರತಿ ದಿನ 750 ಜನಕ್ಕೆ ಊಟ, ಉಪಹಾರ ನೀಡುವ ನಿರ್ಧಾರ ಕೈಗೊಂಡಿದೆ. ಈ ಕಾರಣದಿಂದಲೇ ಜನರು ಈ ಬಾರಿ ಕಾಂಗ್ರೆಸ್‌ನ್ನು ಅಧಿಕಾರಕ್ಕೆ ಬರುವಂತೆ ಆಶಿರ್ವದಿಸಿದ್ದಾರೆ. ಪ್ರಸ್ತುತ ಶೈಕ್ಷಣಿಕ ವರ್ಷ ಪ್ರಾರಂಭಗೊಳ್ಳುತ್ತಿದ್ದು, ಮತಕ್ಷೇತ್ರದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಹಾಗೂ ಶಿಕ್ಷಣ ಪಡೆದುಕೊಳ್ಳಲು ಗ್ರಾಮೀಣ ಪ್ರದೇಶದಿಂದ ಆಗಮನಿಸುವ ವಿದ್ಯಾರ್ಥಿಗಳಿಗೆ ವಸತಿ ನಿಲಯಗಳಲ್ಲಿ ಯಾವುದೇ ತೊಂದರೆಯಾಗದಂತೆ ಎಲ್ಲ ಸೌಲಭ್ಯಗಳನ್ನು ಒದಗಿಸುವಲ್ಲಿ ನಮ್ಮ ಸರ್ಕಾರ ಸಿದ್ದವಾಗಿದೆ ಎಂದು ಹೇಳಿದರು.ಈ ವೇಳೆ ತಹಸೀಲ್ದಾರ್‌ ಬಲರಾಮ ಕಟ್ಟಿಮನಿ, ಪುರಸಭೆ ಅಧ್ಯಕ್ಷ ಮೈಬೂಬ ಗೊಳಸಂಗಿ, ಉಪಾಧ್ಯಕ್ಷೆ ಪ್ರೀತಿ ದೇಗಿನಾಳ, ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ತಾಲೂಕು ಬ್ಲಾಕ್ ಕಾಂಗ್ರೆಸ್‌ ಘಟಕದ ಅಧ್ಯಕ್ಷ ಗುರು ತಾರನಾಳ, ಕೆಪಿಸಿಸಿ ಸದಸ್ಯ ಬಾಪುರಾಯ ದೇಸಾಯಿ, ಉದ್ಯಮಿ ರಾಯನಗೌಡ ತಾತರಡ್ಡಿ, ಮುಖಂಡರಾದ ಶರಣು ಸಜ್ಜನ, ಸಂಗನಗೌಡ ಬಿರಾದಾರ(ಜಿಟಿಸಿ), ಸತೀಶ ಓಸ್ವಾಲ್, ನಾಗಭೂಷಣ ನಾವದಗಿ, ಗಣೇಶ ಅನ್ನಗೋನಿ, ಪಿಂಟು ಸಾಲಿಮನಿ, ಉದ್ಯಮಿ ಸದಾನಂದ ಮಠ, ಸುಧೀರ ನಾವದಗಿ, ತಾಲೂಕಾ ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲಬುರ್ಗಿ, ಸಿ.ಬಿ.ಅಸ್ಕಿ, ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ, ವೈ.ಎಚ್.ವಿಜಯಕರ, ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ರಫೀಕ ಶಿರೋಳ, ಸಂತೋಷ ನಾಯ್ಕೋಡಿ, ಸ್ಥಾಯಿ ಸಮಿತಿ ಅಧ್ಯಕ್ಷ ಯಲ್ಲಪ್ಪ ನಾಯಕಮಕ್ಕಳ, ರಾಜೇಂದ್ರಗೌಡ ರಾಯಗೊಂಡ, ಸಂಗಣ್ಣ ಮೇಲಿನಮನಿ, ಹುಸೇನ ಮುಲ್ಲಾ, ಮುತ್ತಣ್ಣ ಕಡಿ ಸೇರಿದಂತೆ ಹಲವರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರು : ನಗರದ ವಿವಿಧೆಡೆ ನಾಳೆ ವಿದ್ಯುತ್ ವ್ಯತ್ಯಯ-ಎಲ್ಲೆಲ್ಲಿ ?
ಸಾಮಾಜಿಕ ಜಾಲತಾಣ ಮೇಲೆ ಕಣ್ಣಿಡಲು ಸರ್ಕಾರಿ ಸಾಫ್ಟ್‌ವೇರ್‌