ಕನ್ನಡಪ್ರಭ ವಾರ್ತೆ ಬಂಗಾರಪೇಟೆ
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಇನ್ನು ಮೂರು ತಿಂಗಳಲ್ಲಿ ಇಂದಿರಾ ಕ್ಯಾಂಟಿನ್ ಆರಂಭಿಸಿ ವಿದ್ಯಾರ್ಥಿಗಳಿಗೆ ಅಗ್ಗದ ದರದಲ್ಲಿ ಟಿಫನ್, ಊಟ ನೀಡುವ ವ್ಯವಸ್ಥೆ ಕಲ್ಪಿಸಲಾಗವುದು ಎಂದು ಶಾಸಕ ಎಸ್.ಎನ್.ನಾರಾಯಣಸ್ವಾಮಿ ಭರವಸೆ ನೀಡಿದರು.ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಸಾಂಸ್ಕೃತಿಕ, ಕ್ರೀಡಾ,ಎನ್.ಎಸ್‌ಎಸ್, ಎನ್‌ಎಸ್‌ಎಸ್ ರೋವರ್ಸ್ ಮತ್ತು ರೇಂಜರ್ಸ್,ರೆಡ್ ಕ್ರಾಸ್ ಇತರ ಸಮಿತಿಗಳ ಉದ್ಘಾಟಿಸಿ ಮಾತನಾಡಿ, ಈ ಕಾಲೇಜಿನಲ್ಲಿ ವ್ಯಾಸಂಗ ಮಾಡುವವರು ಬಹುತೇಕರು ಗ್ರಾಮೀಣ ಭಾಗದಿಂದ ಬರುವ ವಿದ್ಯಾರ್ಥಿಗಳಾಗಿದ್ದು ಅವರಿಗೆ ಅನುಕೂಲವಾಗಲೆಂದು ಕಾಲೇಜಿನ ಆವರಣದಲ್ಲಿ ಇಂದಿರಾ ಕ್ಯಾಂಟಿನ್ ತೆರೆಯಲಾಗುವುದು ಎಂದರು.ಕಾಲೇಜಿಗೆ ಬಸ್ ವ್ಯವಸ್ಥೆ
ಅಲ್ಲಿ ೫ ರು.ಗಳಿಗೆ ತಿಂಡಿ, ೧೦ರೂ.ಗೆ ಊಟ ಕಲ್ಪಿಸಲಾಗುವುದು. ಇದಲ್ಲದೆ ಕಾಲೇಜಿಗೆ ಬಸ್ ನಿಲ್ದಾಣದಿಂದ ಬಂದು ಹೋಗಲು ಬಸ್‌ನ ವ್ಯವಸ್ಥೆ ಸಹ ಕಲ್ಪಿಸಲಾಗುವುದು. ವಿದ್ಯಾರ್ಥಿಗಳು ಓದುವ ಸಮಯದಲ್ಲಿ ಕೆಟ್ಟ ಚಟಗಳಿಗೆ ದಾಸರಾಗದೆ ಲಭ್ಯವಿರುವ ಅವಕಾಶಗಳನ್ನು ಬಳಸಿಕೊಂಡು ಓದಿ ಸಮಾಜದಲ್ಲಿ ಉನ್ನತ ಸ್ಥಾನ ಮಾನಗಳನ್ನು ಪಡೆದು ಸ್ವಾವಲಂಭಿಗಳಾಬೇಕೆಂದು ತಿಳಿಸಿದರು.೩೦೦ ವಿದ್ಯಾರ್ಥಿಗಳಿಂದ ಆರಂಭವಾದ ಕಾಲೇಜಿನಲ್ಲಿ ಇಂದು ೧೫೦೦ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಖಾಸಗಿ ಕಾಲೇಜಿಗಿಂತಲೂ ಯಾವುದಕ್ಕೂ ಕಡಿಮೆ ಇಲ್ಲದಂತೆ ಸೌಲಭ್ಯಗಳನ್ನು ಸರ್ಕಾರ ಒದಗಿಸಲಾಗಿದೆ ಮುಂದೆಯೂ ಅಗತ್ಯವಿರುವ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ಭರವಸೆ ನೀಡಿದರು.
ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿತಾಲೂಕಿನಲ್ಲಿಯೂ ಪ್ರತಿಭಾವಂತ ವಿದ್ಯಾರ್ಥಿಗಳಿದ್ದು ಅವರು ಐಎಎಸ್, ಕೆಎಎಸ್ ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿಗಾಗಿ ಬೆಂಗಳೂರಿಗೆ ಹೋಗುತ್ತಾರೆ. ಅವರಿಗೆ ಇಲ್ಲೆ ತರಬೇತಿ ನೀಡಲು ಈ ವರ್ಷದಿಂದಲೇ ಕೋಚಿಂಗ್ ಆರಂಭಿಸಲಾಗುವುದು ಎಂದು ಭರವಸೆ ನೀಡಿದರು.
ಈ ವೇಳೆ ಕಾಲೇಜಿನ ಪ್ರಾಂಶುಪಾಲೆ ಶಕುಂತಲ, ಪುರಸಭೆ ಅಧ್ಯಕ್ಷ ಗೋವಿಂದ, ಉಪಾಧ್ಯಕ್ಷ ಚಂದ್ರವೇಣಿಮಂಜುನಾಥ್, ಮಾಜಿ ಯೋಧ ಕಿಶೋರ್, ವೇಣುಗೋಪಾಲ್, ಸತೀಶ್, ದೇವರಾಜಪ್ಪ, ಬಾಲಾಜಿ, ಮುನಿಸ್ವಾಮಿಗೌಡ, ಡಾಃಮಂಜುಳಾ, ರಂಗಸ್ವಾಮಿ,ಅ.ನಾ.ಹರೀಶ್ ಇತರರು ಇದ್ದರು. .