ಇಂದಿರಾ ಕ್ಯಾಂಟೀನ್ ಬಡವರಿಗೆ ವರದಾನ

KannadaprabhaNewsNetwork |  
Published : May 29, 2025, 12:45 AM IST
ದೇವರಹಿಪ್ಪರಗಿ | Kannada Prabha

ಸಾರಾಂಶ

ವಿದ್ಯಾರ್ಥಿಗಳು, ಕೂಲಿ ಕಾರ್ಮಿಕರಿಗೆ ಕಡಿಮೆ ದರದಲ್ಲಿ ಹಸಿವು ನೀಗಿಸಲು ಇಂದಿರಾ ಕ್ಯಾಂಟೀನ್ ಸಹಾಯಕವಾಗಲಿದೆ.

ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ

ಕಡಿಮೆ ದರದಲ್ಲಿ ಆಹಾರ ವಿತರಿಸುವ ಇಂದಿರಾ ಕ್ಯಾಂಟೀನ್‌ ಬಡವರಿಗೆ ವರದಾನವಾಗಿದೆ ಎಂದು ಶಾಸಕ ರಾಜುಗೌಡ ಪಾಟೀಲ ಕುದುರಿಸಾಲವಾಡಗಿ ಹೇಳಿದರು.

ಪಟ್ಟಣದ ಪಶು ಆಸ್ಪತ್ರೆ ಸಮೀಪದ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿ, ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬಡ ಜನತೆಗೆ ಅದರಲ್ಲೂ ವಿದ್ಯಾರ್ಥಿಗಳು, ಕೂಲಿ ಕಾರ್ಮಿಕರಿಗೆ ಕಡಿಮೆ ದರದಲ್ಲಿ ಹಸಿವು ನೀಗಿಸಲು ಇಂದಿರಾ ಕ್ಯಾಂಟೀನ್ ಸಹಾಯಕವಾಗಲಿದೆ. ಕ್ಯಾಂಟೀನ್‌ನಲ್ಲಿ ಗುಣಮಟ್ಟದ ಆಹಾರ ಪೂರೈಕೆ ಜತೆಗೆ ಸ್ವಚ್ಛತೆಗೆ ಆದ್ಯತೆ ನೀಡಲು ಸೂಚಿಸಲಾಗಿದೆ. ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಒಳಿತಾಗುವ ನಿಟ್ಟಿನಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಲಾಗಿದ್ದು ಇದರ ಸದುಪಯೋಗ ಪಡೆದು ಕೊಳ್ಳುವಂತಾಗಬೇಕು. ಪ್ರತಿದಿನ ಬೆಳಗ್ಗೆ 200 ಜನರಿಗೆ ಟಿಫಿನ್, ಮಧ್ಯಾಹ್ನ ಊಟ ಮತ್ತು ರಾತ್ರಿ ಊಟದ ವ್ಯವಸ್ಥೆ ಮಾಡಲಾಗಿದೆ. ಟಿಫಿನ್‌ಗೆ ₹5, ಊಟಕ್ಕೆ ₹10 ನಿಗದಿ ಮಾಡಲಾಗಿದೆ ಎಂದರು.

ಇಂದಿರಾ ಕ್ಯಾಂಟೀನ್ ಉದ್ಘಾಟಿಸಿ ಶಾಸಕ ರಾಜುಗೌಡ ಪಾಟೀಲ ಕುದುರಿಸಾಲವಾಡಗಿ ಕ್ಯಾಂಟೀನ್‌ನಲ್ಲಿ ಸಾರ್ವಜನಿಕರೊಂದಿಗೆ ಉಪಾಹಾರ ಸೇವಿಸಿದರು. ಪಟ್ಟಣದ ಜಡಿಮಠದ ಜಡಿ ಸಿದ್ದೇಶ್ವರ ಶಿವಾಚಾರ್ಯ ಸಾನ್ನಿಧ್ಯ ವಹಿಸಿದ್ದರು.

ಇದೇ ವೇಳೆ ಪಪಂ ಅಧ್ಯಕ್ಷರಾದ ಜಯಶ್ರೀ ಬಸವರಾಜ ದೇವಣಗಾಂವ, ಉಪಾಧ್ಯಕ್ಷರಾದ ರಮೇಶ ಮಸಿಬಿನಾಳ, ಮುಖ್ಯಾಧಿಕಾರಿ ಸುರೇಖಾ ಬಾಗಲಕೋಟ, ಸದಸ್ಯರಾದ ಕಾಸುಗೌಡ ಬಿರಾದಾರ ಜಲಕತ್ತಿ, ಕಾಶಿನಾಥ ಜಮಾದಾರ, ಶಾಂತಯ್ಯ ಜಡಿಮಠ, ಪ್ರಕಾಶ್ ಮಲ್ಹಾರಿ, ಮುಖಂಡರಾದ ಎ.ಡಿ.ಮುಲ್ಲಾ, ಕಾಶಿನಾಥ ವಡ್ಡೋಡಗಿ, ಭಾಸ್ಕರ್ ಗುಡಿಮನಿ, ಮುನ್ನಾ ಮಳಖೇಡ, ವೀರೇಶ ಕುದರಿ, ಸಂಗನಗೌಡ ಬಿರಾದಾರ, ಗುರುರಾಜ ಆಕಳವಾಡಿ, ಬಸವರಾಜ ದೇವಣಗಾಂವ, ಅರವಿಂದ ನಾಯ್ಕೋಡಿ, ಸೋಮು ದೇವೂರ, ಅಬ್ದುಲ್ ಚೌದರಿ, ಕಲ್ಲನಗೌಡ ಪಾಟೀಲ, ಹಣಮಂತ ತಾಂಬೆ, ಪಪಂ ಕಿರಿಯ ಅಭಿಯಂತರ ಗುರುರಾಜ ಬಿರಾದಾರ ಸಿಬ್ಬಂದಿ ಮುತ್ತುರಾಜ ಹಿರೇಮಠ, ಎಸ್.ಎಸ್.ಪೂಜಾರಿ, ವಿದ್ಯಾ ಕ್ಯಾಂಟೀನ್ ವ್ಯವಸ್ಥಾಪಕ ವಿಜ್ಞಾನಕುಮಾರ ಸೇರಿದಂತೆ ಪಪಂ ಸರ್ವ ಸದಸ್ಯರು, ಸಿಬ್ಬಂದಿ ವರ್ಗ ಹಾಗೂ ಪಟ್ಟಣದ ಪ್ರಮುಖರು ಉಪಸ್ಥಿತರಿದ್ದರು.

PREV

Recommended Stories

ಸರ್ಕಾರಿ ಶಾಲೆ ಕುಡಿವ ನೀರಿಗೆ ವಿಷ ಬೆರೆಸಿದ್ದಕ್ಕೆ ಸಿಎಂ ಗರಂ
ಡಾ.ರಾಜ್‌ಕುಮಾರ್‌ರ ನೆಚ್ಚಿನ ಸಹೋದರಿ ನಾಗಮ್ಮ ನಿಧನ