ಕನ್ನಡಪ್ರಭ ವಾರ್ತೆ ಇಳಕಲ್ಲ
ಜಿಲ್ಲಾ ಆಡಳಿತ, ಜಿಲ್ಲಾ ನಗರಾಭಿವೃದ್ಧಿ ಕೋಶ ಬಾಗಲಕೋಟೆ ಹಾಗೂ ನಗರಸಭೆ ಅವರ ಕಾರ‍್ಯಾಲಯದ ಸಹಯೋಗದಲ್ಲಿ ನಗರದ ಪೊಲೀಸ್ ಠಾಣೆ ಪಕ್ಕದಲ್ಲಿ ನಿರ್ಮಿಸಲಾದ ನೂತನ ಇಂದಿರಾ ಕ್ಯಾಂಟೀನ್ ಕಟ್ಟಡದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು. ಇಳಕಲ್ಲ ನಗರದ ಬಡಜನತೆಯ ಬಹುದಿನಗಳ ಕನಸು ಇಂದು ಈಡೇರಿದಂತಾಯಿತು ಎಂದು ಹೇಳಿದರು.
ಇಳಕಲ್ಲ ಶ್ರೀಮಠದ ಪೂಜ್ಯ ಗುರುಮಹಾಂತ ಶ್ರೀಗಳು ಸಾನ್ನಿಧ್ಯ ವಹಿಸಿ ಮಾತನಾಡಿ, ಇಂದು ನಾವು ದೇಶದಲ್ಲಿ ಅಪರಾಧ ಮುಕ್ತ ಜಗತ್ತು ನಿರ್ಮಿಸಬೇಕಾದರೆ ಅದಕ್ಕೂ ಮೊದಲು ಹಸಿವು ಮುಕ್ತ ಸಮಾಜ ನಿರ್ಮಾಣ ಮಾಡಿದಲ್ಲಿ ಮಾತ್ರ ಸಾಧ್ಯ. ಇಂತಹ ಕಾರ್ಯವನ್ನು ಇಂದು ಇಂದಿರಾ ಕ್ಯಾಂಟೀನ್ ಮಾಡುತ್ತಿದೆ ಎಂದು ಹೇಳಿದರು.ಈ ಸಂದರ್ಭದಲ್ಲಿ ನಗರಸಭೆ ಕಾರ್ಯಾಲಯದ ವತಿಯಿಂದ ಶಾಸಕ ವಿಜಯಾನಂದ ಕಾಶಪ್ಪನವರಿಗೆ ಶಾಲು ಹೊದಿಸಿ ಗೌರವಿಸಲಾಯಿತು.
ಕಾಂಗ್ರೆಸ್ ಮುಖಂಡರಾದ ವೆಂಕಟೇಶ ಸಾಕಾ, ಅರುಣ ಬಿಜ್ಜಲ, ಶರಣಪ್ಪ ಆಮದಿಹಾಳ, ಎಸ್.ಜಿ. ರಾಮಗಿರಿಮಠ, ನಗರಸಭೆ ಅಧ್ಯಕ್ಷೆ ಸುಧಾರಾಣಿ ಸಂಗಮ, ಉಪಾಧ್ಯಕ್ಷೆ ಕಾಳಮ್ಮ ಜಕ್ಕಾ ಸೇರಿದಂತೆ ನಗರಸಭೆ ಸದಸ್ಯರು, ಯೋಜನಾ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಚಿಂಚಮಿ, ಬೂತ್ ಮಟ್ಟದ ಅಧ್ಯಕ್ಷರು ಹಾಗೂ ಸದಸ್ಯರು, ಕಾರ್ಯಕರ್ತರು, ಬ್ಲಾಕ್ ಕಾಂಗ್ರೆಸ್, ವಿದ್ಯಾರ್ಥಿ ಕಾಂಗ್ರೆಸ್, ಯುವ ಕಾಂಗ್ರೆಸ್, ಮಹಿಳಾ ಕಾಂಗ್ರೆಸ್ ಸೇರಿದಂತೆ ವಿವಿಧ ಮುಂಚೂಣಿ ಘಟಕಗಳ ಅಧ್ಯಕ್ಷರು ಮತ್ತು ಸದಸ್ಯರು ಪಾಲ್ಗೊಂಡಿದ್ದರು.