ಉಡುಪಿ: ಕ್ರಾಂತಿಕಾರಿ ಭೂಸುಧಾರಣೆ ಕಾನೂನಿನ ಮೂಲಕ ಬಡವರಿಗೆ ಆರ್ಥಿಕ ಸ್ವಾತಂತ್ರ್ಯ ನೀಡಿದ ಇಂದಿರಾ ಗಾಂಧಿ ನಮ್ಮ ದೇಶದ ಚರಿತ್ರೆಯಲ್ಲಿ ಎಂದೂ ಮರೆಯಲಾಗದ ವ್ಯಕ್ತಿತ್ವ ಎಂದು ಮಾಜಿ ಸಂಸದ ಜಯಪ್ರಕಾಶ ಹೆಗ್ಡೆ ಹೇಳಿದರು.
ರಾಷ್ಟ್ರದ ಏಕತೆಯ ಶಿಲ್ಪಿ, ಅಜಾತಶತ್ರು ಸರ್ದಾರ್ ವಲ್ಲಭಭಾಯ್ ಪಟೇಲ್ ಅವರು ಗೃಹ ಸಚಿವರಾಗಿ 565ಕ್ಕೂ ಹೆಚ್ಚು ರಾಜ ಸಂಸ್ಥಾನಗಳನ್ನು ಭಾರತ ಒಕ್ಕೂಟದಲ್ಲಿ ವಿಲೀನಗೊಳಿಸಿ, ರಾಷ್ಟ್ರೀಯ ಏಕೀಕರಣಕ್ಕೆ ಭದ್ರ ಬುನಾದಿ ಹಾಕಿದ ಅವರ ದಿಟ್ಟ ನಾಯಕತ್ವ, ಆತ್ಮವಿಶ್ವಾಸ ಮತ್ತು ದೂರದೃಷ್ಟಿ ಎಲ್ಲ ಭಾರತೀಯರಿಗೂ ಸ್ಫೂರ್ತಿದಾಯಕ ಎಂದರು. ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ. ಎ. ಗಪೂರ್, ಮಾಜಿ ಸಚಿವ ವಿನಯಕುಮಾರ್ ಸೊರಕೆ, ನಗರಾಭಿವೃದ್ಧಿ ಪ್ರಾಧಿಕಾರದ ದಿನಕರ ಹೇರೂರು, ಪಕ್ಷದ ಮುಖಂಡರಾದ ಭುಜಂಗ ಶೆಟ್ಟಿ, ಅಶೋಕ್ ಕುಮಾರ್ ಕೊಡವೂರು, ರಮೇಶ್ ಕಾಂಚನ್, ಪ್ರಶಾಂತ ಜತ್ತನ್ನ, ದಿನೇಶ್ ಪುತ್ರನ್, ಬಿ .ನರಸಿಂಹಮೂರ್ತಿ, ಭಾಸ್ಕರ ರಾವ್ ಕಿದಿಯೂರು, ಪ್ರಖ್ಯಾತ್ ಶೆಟ್ಟಿ, ಶಬ್ಬೀರ್ ಅಹ್ಮದ್, ಮಹಾಬಲ ಕುಂದರ್, ಕೀರ್ತಿ ಶೆಟ್ಟಿ, ಡಾ. ಗಣನಾಥ ಎಕ್ಕಾರ್. ಮೀನಾಕ್ಷಿ ಮಾಧವ ಬನ್ನಂಜೆ, ಸಂಧ್ಯಾ ತಿಲಕ್ ರಾಜ್, ಜ್ಯೋತಿ ಪುತ್ರನ್ ಇದ್ದರು.
ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜ್ಯೋತಿ ಹೆಬ್ಬಾರ್ ನಿರ್ವಹಿಸಿದರು, ಗೋಪಿನಾಯ್ಕ ವಂದಿಸಿದರು.