ತರೀಕೆರೆಯಲ್ಲಿ ಮಾಜಿ ಪ್ರಧಾನಿ ಇಂದಿರಾಗಾಂಧಿ ಪುಣ್ಯಸ್ಮರಣೆ
ಕನ್ನಡಪ್ರಭ ವಾರ್ತೆ, ತರೀಕೆರೆಮಾಜಿ ಪ್ರಧಾನ ಮಂತ್ರಿ ಶ್ರೀಮತಿ ಇಂದಿರಾ ಗಾಂಧಿ ಅನೇಕ ಚನಮುಖಿ ಯೋಜನೆಗಳನ್ನು ಜಾರಿಗೆ ತಂದ ದಿಟ್ಟ ಮಹಿಳೆ ಎಂದು ತರೀಕೆರೆ ನಗರಕಾಂಗ್ರೆಸ್ ಅಧ್ಯಕ್ಷ ಟಿ.ಎಸ್.ಪ್ರಕಾಶ್ ವರ್ಮ ಹೇಳಿದ್ದಾರೆ.ಅವರು, ಶನಿವಾರ ತರೀಕೆರೆ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಪಕ್ಷದ ಕಾರ್ಯಾಲಯದಲ್ಲಿ ನಡೆದ ಮಾಜಿ ಪ್ರಧಾನ ಮಂತ್ರಿ ಇಂದಿರಾ ಗಾಂಧಿ 41ನೇ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಉಕ್ಕಿನ ಮಹಿಳೆ ಎಂದೇ ಪ್ರಖ್ಯಾತರಾಗಿದ್ದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ಹಸಿರು ಕ್ರಾಂತಿ, ಬ್ಯಾಂಕ್ ರಾಷ್ಟ್ರೀಕರಣ, ಗರೀಬಿ ಹಟಾವೋ ಇತ್ಯಾದಿ ಅನೇಕ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಕ್ಕೆ ತಂದರು. ಸಂಸತ್ ನಲ್ಲಿ ಅಟಲ ಬಿಹಾರಿ ವಾಜಪೇಯ ಅವರು ಕೂಡ ಇಂದಿರಾ ಗಾಂಧಿಯವರ ದಿಟ್ಟತನ ಪ್ರಶಂಸಿಸಿದಾರೆ. ದೇಶದಾದ್ಯಂತ 20 ಅಂಶಗಳ ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತಂದರು. ನೆರೆಯ ಬಾಂಗ್ಲಾ ದೇಶವನ್ನು ಹುಟ್ಟುಹಾಕಿದರು, ಮಾಜಿ ಪ್ರಧಾನ ಮಂತ್ರಿ ಇಂದಿರಾ ಗಾಂಧಿಯವರ ಆದರ್ಶಗಳನ್ನು ಪಾಲಿಸೋಣ, ಕಾಂಗ್ರೆಸ್ ಪಕ್ಷವನ್ನು ಸದೃಢವಾಗಿ ಕಟ್ಟಿ ಬೆಳೆಸೋಣ ಎಂದು ಹೇಳಿದರು.ಪುರಸಭೆ ಅಧ್ಯಕ್ಷ ವಸಂತಕುಮಾರ್ ಮಾತನಾಡಿ ಮಾಜಿ ಪ್ರಧಾನ ಮಂತ್ರಿ ಇಂದಿರಾ ಗಾಂಧಿ ದೇಶಕ್ಕೆ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ದೇಶದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಹಳ ಒಳ್ಳೆಯ ಇತಿಹಾಸ ಇದೆ ಎಂದು ಹೇಳಿದರು.ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮನೋಜ್ ಶಿವನಿ, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಉಪಾಧ್ಯಕ್ಷ ಸಮೀವುಲ್ಲಾ ಷರೀಫ್, ಮಹಿಳಾ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ಪರ್ವಿನ್ ತಾಜ್, ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಅನಿಲ್ ಕುಮಾರ್, ಪುರಸಭೆ ಸದಸ್ಯರಾದ ಪರಮೇಶ್, ಟಿ. ದಾದಾಪೀರ್, ಪುರಸಭೆ ನಾಮಿನಿ ಸದಸ್ಯ ಅದಿಲ್ ಪಾಷ, ಪುರಸಭಾ ಮಾಜಿ ಅಧ್ಯಕ್ಷರಾದ ಟಿ.ಎಸ್.ಧರ್ಮರಾಜ್, ಹೇಮಲತಾ ರೇವಣ್ಣ, ಲಕ್ಷ್ಮಿಬಾಯಿ, ಒಬಿಸಿ ಅಧ್ಯಕ್ಷ ಟಿ.ಶ್ರೀನಿವಾಸ್, ಪ್ರಚಾರ ಸಮಿತಿ ಅಧ್ಯಕ್ಷ ಪರುಶುರಾಮ್, ಟಿ.ವಿ.ಗಿರಿರಾಜ್, ಮಹಮದ್ ಇರ್ಷಾದ್ ಮಾತನಾಡಿದರು.ಪುರಸಭೆ ಸದಸ್ಯರಾದ ಕುಮಾರಪ್ಪ, ಪಾರ್ವತಮ್ಮ, ತರೀಕೆರೆ ಬ್ಲಾಕ್ ಕಾಂಗ್ರೆಸ್ ಸಮಿತಿ ಎಸ್.ಸಿ.ಸೆಲ್ ಅಧ್ಯಕ್ಷ ಬಿ.ಜಿ.ಗೌರೀಶ್, ಶಾಂತಿಪುರ ರವಿ ಪಕ್ಷದ ಪದಾದಿಕಾರಿಗಳು, ಕಾರ್ಯಕರ್ತರು ಭಾಗವಹಿಸಿದ್ದರು.31ಕೆಟಿಆರ್.ಕೆ.1ಃ ತರೀಕೆರೆಯಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿತಿಯಿಂದ ಮಾಜಿ ಪ್ರಧಾನ ಮಂತ್ರಿ ಶ್ರೀಮತಿ ಇಂದಿರಾ ಗಾಂಧಿ ಅವರ 41ನೇ ಪುಣ್ಯತಿಥಿ ಕಾರ್ಯಕ್ರಮ ನಡೆಯಿತು.