ಬಡವರನ್ನು ಆರ್ಥಿಕವಾಗಿ ಮೇಲೆತ್ತುವ ಕೆಲಸ ಮಾಡಿದ ಇಂದಿರಾ ಗಾಂಧಿ: ಶಾಸಕ ಸಿ.ಪುಟ್ಟರಂಗಶೆಟ್ಟಿ

KannadaprabhaNewsNetwork |  
Published : Nov 20, 2025, 12:30 AM IST
ಬಡವರನ್ನು ಆರ್ಥಿಕವಾಗಿ ಮೇಲೆತ್ತುವ ಕೆಲಸ ಮಾಡಿದ | Kannada Prabha

ಸಾರಾಂಶ

ಇಂದಿರಾ ಗಾಂಧಿ ಅವರು ದೇಶ ಕಂಡ ಸಮರ್ಥ ಪ್ರಧಾನಿ. ದೇಶವನ್ನು ಮುನ್ನಡೆಸುವ ಜೂತೆಗೆ ನೆರೆ ದೇಶಗಳೂಂದಿಗೆ ಉತ್ತಮ ಬಾಂಧವ್ಯ ಹೊಂದಿ, ಅಭಿವೃದ್ದಿಗೆ ಹೆಚ್ಚಿನ ಆದ್ಯತೆ ನೀಡಿದ್ದರು, ಇಂದಿರಾ ಗಾಂಧಿ ಅವರ ಆದರ್ಶ ಮೈಗೂಡಿಸಿಕೂಂಡು ಅವರ ಹಾದಿಯಲ್ಲಿ ಯುವಜನತೆ ಮುನ್ನಡೆಯಬೇಕಾದ ಅವಶ್ಯಕತೆ ಇದೆ .

ಕನ್ನಡಪ್ರಭ ವಾರ್ತೆ, ಚಾಮರಾಜನಗರ

ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ದೀನದಲಿತರು, ಹಿಂದುಳಿದ ವರ್ಗಗಳ ಮಹಿಳೆಯರ ಸರ್ವತೋಮುಖ ಅಭಿವೃದ್ಧಿ ಗಮನದಲ್ಲಿಟ್ಟುಕೊಂಡು ೨೦ ಅಂಶಗಳ ಕಾರ್ಯಕ್ರಮ ಜಾರಿಗೊಳಿಸಿದರು ಎಂದು ಶಾಸಕ ಸಿ.ಪುಟ್ಟರಂಗಶೆಟ್ಟಿ ಬಣ್ಣಿಸಿದರು.

ನಗರದ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಆಯೋಜಿಸಿದ್ದ ಮಾಜಿ ಪ್ರಧಾನಿ ಇಂದಿರಾಗಾಂಧಿ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಇಂದಿರಾಗಾಂಧಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದರು.

ಉಕ್ಕಿನ ಮಹಿಳೆ ಎಂದೇ ಖ್ಯಾತಿ ಪಡೆದಿದ್ದ ಇಂದಿರಾಗಾಂಧಿ ಅವರ ಜನಪರ ಕಾರ್ಯಕ್ರಮಗಳು ಇಂದಿಗೂ ಜನಮಾನಸದಲ್ಲಿ ಉಳಿದಿದೆ ಎಂದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ.ಮರಿಸ್ವಾಮಿ ಮಾತನಾಡಿ, ಇಂದಿರಾ ಗಾಂಧಿ ಅವರು ದೇಶ ಕಂಡ ಸಮರ್ಥ ಪ್ರಧಾನಿ. ದೇಶವನ್ನು ಮುನ್ನಡೆಸುವ ಜೂತೆಗೆ ನೆರೆ ದೇಶಗಳೂಂದಿಗೆ ಉತ್ತಮ ಬಾಂಧವ್ಯ ಹೊಂದಿ, ಅಭಿವೃದ್ದಿಗೆ ಹೆಚ್ಚಿನ ಆದ್ಯತೆ ನೀಡಿದ್ದರು, ಇಂದಿರಾ ಗಾಂಧಿ ಅವರ ಆದರ್ಶ ಮೈಗೂಡಿಸಿಕೂಂಡು ಅವರ ಹಾದಿಯಲ್ಲಿ ಯುವಜನತೆ ಮುನ್ನಡೆಯಬೇಕಾದ ಅವಶ್ಯಕತೆ ಇದೆ ಎಂದು ಹೇಳಿದರು.

ಚುಡಾ ಅಧ್ಯಕ್ಷ ಮಹಮದ್ ಅಸ್ಗರ್‌ಮುನ್ನಾ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬಿ.ಕೆ.ರವಿಕುಮಾರ್, ಜಿಲ್ಲಾ ಕಾಂಗ್ರೆಸ್ ಮಹಿಳಾ ಅಧ್ಯಕ್ಷೆ ನಾಗರತ್ನ, ನಗರಸಭೆ ಮಾಜಿಸದಸ್ಯ ಸ್ವಾಮಿ, ಪ್ರಾಧಿಕಾರದ ಸದಸ್ಯ ಪುಟ್ಟಸ್ವಾಮಿ, ಜಿಪಂ ಮಾಜಿ ಸದಸ್ಯೆ ಕಾವೇರಿ ಶಿವಕುಮಾರ್, ಮಾದಾಪುರ ಗ್ರಾಪಂ ಅಧ್ಯಕ್ಷ ರೂಪೇಶ್, ಎಸ್ಸಿಎಸ್ಟಿ ಜಾಗೃತಿ ಉಸ್ತುವಾರಿ ಸಮಿತಿ ಸದಸ್ಯ ಪಿ.ಸಿದ್ದರಾಜು, ಶಕುಂತಲಾ, ನಾಗಶ್ರೀ, ಭಾಗ್ಯಮ್ಮ, ನಸ್ರುಲಾಖಾನ್, ಮರಿಯಾಲಹುಂಡಿ ಕುಮಾರ್, ಅಕ್ಷಯ್‌ಕುಮಾರ್, ಜಿ. ಡಿಪ್ರಕಾಶ್, ಎಪಿಎಂಸಿ ಮಾಜಿ ಅಧ್ಯಕ್ಷ ನಾಗೇಂದ್ರ, ಅಪ್ಸರ್ ಅಹಮದ್, ಕುಮಾರ್, ರವಿಗೌಡ, ಜಬೀವುಲ್ಲ, ನಾಗಯ್ಯ ನಾಗವಳ್ಳಿ, ಮಹದೇವಯ್ಯ, ಪವನ್, ರಾಮಸಮುದ್ರ ಶಿವಮೂರ್ತಿ. ಪಕ್ಷದ ಕಾರ್ಯಕರ್ತರು ಮುಖಂಡರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರದಿಂದ ಸಮೃದ್ಧಿ - ಸಹಕಾರ ಭಾರತಿಯಿಂದ ಸಹಕಾರ ಕ್ಷೇತ್ರದ ಬಲವರ್ಧನೆ
ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ