ಜಿಲ್ಲಾ ಕಾಂಗ್ರೆಸ್ ಹಾಗೂ ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಗಳ ಆಶ್ರಯದಲ್ಲಿ ದೇಶದ ಪ್ರಥಮ ಮಹಿಳಾ ಪ್ರಧಾನಮಂತ್ರಿ, ಉಕ್ಕಿನ ಮಹಿಳೆ, ಭಾರತ ರತ್ನ ದಿ. ಇಂದಿರಾ ಗಾಂಧಿ ಅವರ 109ನೇ ಜನ್ಮದಿನಾಚರಣೆಯನ್ನು ಬ್ರಹ್ಮಗಿರಿಯ ಓಸ್ಕರ್ ಸ್ಮಾರಕ ಕಾಂಗ್ರೆಸ್ ಭವನದಲ್ಲಿ ನಡೆಸಲಾಯಿತು.
ಉಡುಪಿ: ಜಿಲ್ಲಾ ಕಾಂಗ್ರೆಸ್ ಹಾಗೂ ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಗಳ ಆಶ್ರಯದಲ್ಲಿ ದೇಶದ ಪ್ರಥಮ ಮಹಿಳಾ ಪ್ರಧಾನಮಂತ್ರಿ, ಉಕ್ಕಿನ ಮಹಿಳೆ, ಭಾರತ ರತ್ನ ದಿ. ಇಂದಿರಾ ಗಾಂಧಿ ಅವರ 109ನೇ ಜನ್ಮದಿನಾಚರಣೆಯನ್ನು ಬ್ರಹ್ಮಗಿರಿಯ ಓಸ್ಕರ್ ಸ್ಮಾರಕ ಕಾಂಗ್ರೆಸ್ ಭವನದಲ್ಲಿ ನಡೆಸಲಾಯಿತು.ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಮಾಲಿನಿ ರೈ ಅವರು ದೀಪ ಪ್ರಜ್ವಲಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಳೆಬೈಲು ಅವರು ಇಂದಿರಾ ಗಾಂಧಿಯವರ ಜನಪರ ಯೋಜನೆಗಳನ್ನು ಸ್ಮರಿಸಿದರು. ಉಡುಪಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಮಮತಾ ಶೆಟ್ಟಿ ಅವರು ಇಂದಿರಾ ಗಾಂಧಿ ಅವರ ಧೀಮಂತ ನಾಯಕತ್ವದ ಕುರಿತು ಮಾತನಾಡಿದರು.
ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಪಕ್ಷದ ನಾಯಕರಾದ ದಿನೇಶ್ ಪುತ್ರನ್, ಮಹಾಬಲ ಕುಂದರ್, ರಮೇಶ್ ಕಾಂಚನ್, ವೆರೋನಿಕಾ ಕರ್ನೇಲಿಯೋ, ಪ್ರಖ್ಯಾತ್ ಶೆಟ್ಟಿ ಅಣ್ಣಯ್ಯ ಶೇರಿಗಾರ್, ಹರೀಶ್ ಕಿಣಿ, ಸುನಿಲ್ ಬಂಗೇರ, ಹಬೀಬ್ ಆಲಿ, ಕೀರ್ತಿ ಶೆಟ್ಟಿ, ಮುರಳಿ ಶೆಟ್ಟಿ, ನರಸಿಂಹಮೂರ್ತಿ, ನಾಗೇಶ್ ಕುಮಾರ್ ಉದ್ಯಾವರ, ದಿಲೀಪ್ ಹೆಗ್ಡೆ, ಬಾಲಕೃಷ್ಣ ಪೂಜಾರಿ, ಚಂದ್ರಿಕಾ ಶೆಟ್ಟಿ, ಸಂಧ್ಯಾ ತಿಲಕ್ರಾಜ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಹಿರಿಯ, ಕಿರಿಯ ನಾಯಕರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು. ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷೆ ಜ್ಯೋತಿ ಹೆಬ್ಬಾರ್ ಸ್ವಾಗತಿಸಿದರು, ಸತೀಶ್ ಕೊಡವೂರು ಕಾರ್ಯಕ್ರಮ ನಿರೂಪಿಸಿದರು. ದಯಾನಂದ್ ಕಿದಿಯೂರು ವಂದಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.