ಕ್ರೀಡಾಪಟುಗಳಿಗೆ ವೈಯಕ್ತಿಕ ಧನಸಹಾಯ

KannadaprabhaNewsNetwork |  
Published : Oct 30, 2026, 01:45 AM IST
29ಎಚ್ಎಸ್ಎನ್10 :  | Kannada Prabha

ಸಾರಾಂಶ

ದೆಹಲಿಯಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ವೇಯ್ಟ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ಭಾಗವಹಿಸುತ್ತಿರುವ ಸಿಂಚನಾ ಕೆ. ಎಚ್. ಹಾಗೂ ಕೇರಳದಲ್ಲಿ ನಡೆಯಲಿರುವ ದಕ್ಷಿಣ ವಲಯದ ಪವರ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ಸ್ಪರ್ಧಿಸಲಿರುವ ಗಿರೀಶ್, ನೂತನ ರಾಜ್ ಮತ್ತು ಮನನಾ ಅವರಿಗೆ ವಿಜಯಣ್ಣ ಅವರು ವೈಯಕ್ತಿಕ ಧನಸಹಾಯ ನೀಡಿ, ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡುವಂತೆ ಶುಭ ಹಾರೈಸಿದ್ದಾರೆ. ಕ್ರೀಡಾಪಟುಗಳು ತಮ್ಮ ಪ್ರತಿಭೆಯನ್ನು ರಾಷ್ಟ್ರಮಟ್ಟ ಹಾಗೂ ದಕ್ಷಿಣ ವಲಯದ ವೇದಿಕೆಗಳಲ್ಲಿ ಪ್ರದರ್ಶಿಸಲು ಇಂತಹ ಪ್ರೋತ್ಸಾಹದಾಯಕ ನೆರವು ಸಹಕಾರಿಯಾಗಲಿದೆ. ಸ್ಪರ್ಧೆಗಳಲ್ಲಿ ಯಶಸ್ಸು ಸಾಧಿಸುವುದರ ಜೊತೆಗೆ ಹಾಸನ ಜಿಲ್ಲೆಯ ಕ್ರೀಡಾ ಕ್ಷೇತ್ರದ ಗೌರವವನ್ನು ಹೆಚ್ಚಿಸುವ ವಿಶ್ವಾಸವನ್ನು ಸಂಸ್ಥೆ ವ್ಯಕ್ತಪಡಿಸಿದೆ.

ಕನ್ನಡಪ್ರಭ ವಾರ್ತೆ ಹಾಸನ

ಕ್ರೀಡಾಪಟುಗಳ ಸಾಧನೆಗೆ ಆರ್ಥಿಕ ನೆರವು ಹಾಗೂ ಪ್ರೋತ್ಸಾಹ ಅತ್ಯಗತ್ಯವಾಗಿದ್ದು, ಈ ನಿಟ್ಟಿನಲ್ಲಿ ಹಾಸನ ಪವರ್‌ಲಿಫ್ಟಿಂಗ್ ಸಂಸ್ಥೆಯ ಅಧ್ಯಕ್ಷರಾದ ವಿಜಯಣ್ಣ ಅವರು ಸ್ಪರ್ಧೆಗಳಲ್ಲಿ ಭಾಗವಹಿಸುತ್ತಿರುವ ಜಿಲ್ಲೆಯ ಕ್ರೀಡಾಪಟುಗಳಿಗೆ ವೈಯಕ್ತಿಕವಾಗಿ ಧನಸಹಾಯ ನೀಡಿ ಉತ್ತೇಜನ ನೀಡಿದ್ದಾರೆ.

ದೆಹಲಿಯಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ವೇಯ್ಟ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ಭಾಗವಹಿಸುತ್ತಿರುವ ಸಿಂಚನಾ ಕೆ. ಎಚ್. ಹಾಗೂ ಕೇರಳದಲ್ಲಿ ನಡೆಯಲಿರುವ ದಕ್ಷಿಣ ವಲಯದ ಪವರ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ಸ್ಪರ್ಧಿಸಲಿರುವ ಗಿರೀಶ್, ನೂತನ ರಾಜ್ ಮತ್ತು ಮನನಾ ಅವರಿಗೆ ವಿಜಯಣ್ಣ ಅವರು ವೈಯಕ್ತಿಕ ಧನಸಹಾಯ ನೀಡಿ, ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡುವಂತೆ ಶುಭ ಹಾರೈಸಿದ್ದಾರೆ. ಕ್ರೀಡಾಪಟುಗಳು ತಮ್ಮ ಪ್ರತಿಭೆಯನ್ನು ರಾಷ್ಟ್ರಮಟ್ಟ ಹಾಗೂ ದಕ್ಷಿಣ ವಲಯದ ವೇದಿಕೆಗಳಲ್ಲಿ ಪ್ರದರ್ಶಿಸಲು ಇಂತಹ ಪ್ರೋತ್ಸಾಹದಾಯಕ ನೆರವು ಸಹಕಾರಿಯಾಗಲಿದೆ. ಸ್ಪರ್ಧೆಗಳಲ್ಲಿ ಯಶಸ್ಸು ಸಾಧಿಸುವುದರ ಜೊತೆಗೆ ಹಾಸನ ಜಿಲ್ಲೆಯ ಕ್ರೀಡಾ ಕ್ಷೇತ್ರದ ಗೌರವವನ್ನು ಹೆಚ್ಚಿಸುವ ವಿಶ್ವಾಸವನ್ನು ಸಂಸ್ಥೆ ವ್ಯಕ್ತಪಡಿಸಿದೆ.ಕ್ರೀಡಾಪಟುಗಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ವೈಯಕ್ತಿಕವಾಗಿ ಧನಸಹಾಯ ನೀಡಿದ ವಿಜಯಣ್ಣ ಅವರ ಕ್ರೀಡಾಪರ ಕಾಳಜಿ ಹಾಗೂ ಸಹಕಾರಕ್ಕೆ ಹಾಸನ ಪವರ್‌ಲಿಫ್ಟಿಂಗ್ ಸಂಸ್ಥೆಯ ಪರವಾಗಿ ಧನ್ಯವಾದಗಳನ್ನು ಸಲ್ಲಿಸಲಾಗಿದೆ. ದೆಹಲಿಯಲ್ಲಿ ನಡೆಯುವ ರಾಷ್ಟ್ರಮಟ್ಟದ ವೇಯ್ಟ್‌ಲಿಫ್ಟಿಂಗ್ ಸ್ಪರ್ಧೆ ಹಾಗೂ ಕೇರಳದಲ್ಲಿ ನಡೆಯುವ ದಕ್ಷಿಣ ವಲಯದ ಪವರ್‌ಲಿಫ್ಟಿಂಗ್ ಸ್ಪರ್ಧೆಗಳಲ್ಲಿ ಭಾಗವಹಿಸುತ್ತಿರುವ ಸಿಂಚನಾ ಕೆ.ಎಚ್., ಗಿರೀಶ್, ನೂತನರಾಜ್ ಮತ್ತು ಮನನಾ ಅವರು ಉತ್ತಮ ಪ್ರದರ್ಶನ ನೀಡಿ ವಿಜೇತರಾಗಿ, ಹಾಸನ ಜಿಲ್ಲೆ ಹಾಗೂ ಸಂಸ್ಥೆಗೆ ಕೀರ್ತಿ ತರಲಿ ಎಂದು ಸಂಸ್ಥೆಯ ಅಧ್ಯಕ್ಷರು, ಕಾರ್ಯದರ್ಶಿಗಳು ಮತ್ತು ಎಲ್ಲಾ ಪದಾಧಿಕಾರಿಗಳು ಹೃತ್ಪೂರ್ವಕ ಶುಭಾಶಯಗಳನ್ನು ಕೋರಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೇಪ್‌ ಮಾಡಿದ್ದಕ್ಕಾಗಿ ಅಪಹರಣ ಮೂಲಕ ಪ್ರತೀಕಾರ
ಉತ್ತರ ಪಾಲಿಕೆಯಲ್ಲಿ 18 ಜಂಕ್ಷನ್‌ ಗುರುತು