ರಾಮನಗರ: ಸ್ವಚ್ಛ ನಗರಗಳ ಪಟ್ಟಿಯಲ್ಲಿ ದೇಶದಲ್ಲೇ ಮೊದಲ ಸ್ಥಾನದಲ್ಲಿರುವ ಮಧ್ಯಪ್ರದೇಶದ ಇಂದೋರ್ ನಗರದ ಅಧ್ಯಯನ ಪ್ರವಾಸದ ಅಂಶಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರಲು ಮುಂದಾಗಿರುವ ರಾಮನಗರ ನಗರಸಭೆ ಇದೀಗ ಫುಡ್ ಸ್ಟ್ರೀಟ್ ಪ್ರಾರಂಭಿಸುವ ಜೊತೆಗೆ ಬಯೋಮೆಥನೇಶನ್ ಘಟಕವನ್ನು ಶುಕ್ರವಾರ ಲೋಕಾರ್ಪಣೆ ಮಾಡಿತು.
ಈ ವೇಳೆ ಮಾತನಾಡಿದ ಕೆ.ಶೇಷಾದ್ರಿ, ಇಂದೋರ್ ನಗರದಲ್ಲಿ ಕೈಗೊಂಡಿದ್ದ ಸ್ವಚ್ಛತೆ ವ್ಯವಸ್ಥೆಯ ಅಧ್ಯಯನದ ಅಂಶಗಳನ್ನು ಉಳಿದಿರುವ ಅಧಿಕಾರದ ಅವಧಿಯಲ್ಲಿ ಸದಸ್ಯರು ಮತ್ತು ಅಧಿಕಾರಿಗಳ ವರ್ಗ ನಾಗರಿಕರ ಸಹಭಾಗಿತ್ವದಲ್ಲಿ ಅನುಷ್ಠಾನಗೊಳಿಸಿ ರಾಮನಗರವನ್ನು ಸ್ವಚ್ಛ ನಗರವನ್ನಾಗಿ ರೂಪಿಸುವ ಭರವಸೆ ನೀಡಿದ್ದೆವೊ ಆ ನಿಟ್ಟಿನಲ್ಲಿ ಹೆಜ್ಜೆ ಇಟ್ಟಿರುವುದಾಗಿ ಹೇಳಿದರು.
45.90 ಲಕ್ಷ ವೆಚ್ಚದಲ್ಲಿ ಫುಡ್ ಸ್ಟ್ರೀಟ್:ಜಿಲ್ಲಾ ಕೇಂದ್ರ ರಾಮನಗರ ವೇಗವಾಗಿ ಬೆಳೆಯುತ್ತಿದ್ದು, ಸಮಗ್ರವಾಗಿ ಅಭಿವೃದ್ಧಿ ಪಡಿಸಿ ಮಾದರಿ ನಗರವನ್ನಾಗಿ ರೂಪಿಸಬೇಕಿದೆ. ಆ ನಿಟ್ಟಿನಲ್ಲಿ ನಗರಸಭೆ ಸದಸ್ಯರು ಹಾಗೂ ಅಧಿಕಾರಿಗಳು ಪಣತೊಟ್ಟು ಶ್ರಮಿಸುತ್ತಿದ್ದೇವೆ. ಇಂದೋರ್ ಅಧ್ಯಯನ ಪ್ರವಾಸದ ಅಂಶಗಳನ್ನು ಹಂತ ಹಂತವಾಗಿ ಅನುಷ್ಠಾನ ಮಾಡುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಿದ್ದೇವೆ ಎಂದು ತಿಳಿಸಿದರು.
10 ವರ್ಷಗಳ ಹಿಂದೆ ಬಯೋಮೆಥನೇಶನ್ ಘಟಕ ಪ್ರಾರಂಭವಾಗಿ ಸ್ಥಗಿತಗೊಂಡಿತ್ತು. ಅದನ್ನು 5.40 ಲಕ್ಷ ವೆಚ್ಚದಲ್ಲಿ ನವೀಕರಿಸಲಾಗಿದೆ. ಇದೀಗ ಹೋಟೆಲ್, ಕಾರಾಗೃಹ ಹಾಗೂ ವಸತಿ ನಿಲಯಗಳಿಂದ ಸಂಗ್ರಹಿಸುವ ಹಸಿ ತ್ಯಾಜ್ಯಗಳನ್ನು ಬಳಸಿಕೊಂಡು ಬಯೋಮೆಥನೇಶನ್ ಘಟಕದಲ್ಲಿ ಇಂಧನ ಉತ್ಪಾದಿಸಿ, ಅದನ್ನು ಬೀದಿ ದೀಪಗಳಿಗೆ ಬಳಕೆ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಆನಂತರ ಬ್ಲಾಕ್ ಸ್ಪಾಟ್ ಗಳಲ್ಲಿ ತ್ಯಾಜ್ಯ ವಿಲೇವಾರಿ ಮಾಡುವುದಕ್ಕೆ ಕಡಿವಾಣ ಹಕಾಲು ವೇಸ್ಟ್ ಟು ಆರ್ಟ್, ವೇಸ್ಟ್ ಟು ವಂಡರ್ ಎಂಬ ವಿನೂತನ ಕಾರ್ಯ ಜಾರಿಗೆ ತರಲಾಯಿತು. ನಗರಸಭೆ ಎಷ್ಟೇ ಕ್ರಮ ವಹಿಸಿದರೂ ವಿದ್ಯಾವಂತ ನಾಗರೀಕರೆ ಎಲ್ಲೆಂದರಲ್ಲಿ ಕಸ ವಿಲೇವಾರಿ ಮಾಡುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.
22 ಟನ್ ಹಸಿ ತ್ಯಾಜ್ಯ ಸಂಗ್ರಹ :
ನಗರಸಭೆಯಲ್ಲಿ ಸಿಬ್ಬಂದಿ ಕೊರತೆಯಿಂದ ಬಯೋಮೆಥನೇಶನ್ ಘಟಕನಿರ್ವಹಣೆ ಸಾಧ್ಯವಾಗಿರಲಿಲ್ಲ. ಈಗ ಪರಿಸರ ಸ್ನೇಹಿ ವಿದ್ಯುತ್ ಉತ್ಪಾದಿಸುತ್ತಿದ್ದು, ಇದನ್ನು ವೈಜ್ಞಾನಿಕವಾಗಿ ನಿರ್ವಹಣೆ ಮಾಡುವುದು ಸವಾಲಿನ ಕೆಲಸವಾಗಿದೆ.
ಈ ವೇಳೆ ನಗರಸಭೆ ಉಪಾಧ್ಯಕ್ಷೆ ಗಿರಿಜಮ್ಮ, ಸ್ಥಾಯಿ ಸಮಿತಿ ಅಧ್ಯಕ್ಷ ಆರೀಫ್, ಸದಸ್ಯರಾದ ಅಜ್ಮತ್, ವಿಜಯ ಕುಮಾರಿ, ಪವಿತ್ರ ಮತ್ತಿತರರು ಹಾಜರಿದ್ದರು.
ರಾಮನಗರ ಟೌನ್‌ನಲ್ಲಿ ಜನರು ಗುಡಿ ಕೈಗಾರಿಕೆ ಅವಲಂಬಿಸಿರುವ ಕಾರಣ ಸ್ವಚ್ಛತೆ ಕಾಪಾಡುವುದು ಸವಾಲಿನ ಕೆಲಸ. ಪ್ರತಿನಿತ್ಯ ಸ್ವಚ್ಛತಾ ಕಾರ್ಯದಲ್ಲಿ ತೊಡಗಿರುವ ಪೌರಕಾರ್ಮಿಕರು ಪರಿಸರ ಸ್ನೇಹಿ ನಗರ ನಿರ್ಮಾಣಕ್ಕೆ ತಮ್ಮದೇ ಆದ ಕೊಡುಗೆ ನೀಡುತ್ತಿದ್ದಾರೆ. ಇದನ್ನು ನಾಗರಿಕರು ಅರ್ಥ ಮಾಡಿಕೊಂಡು ಬದಲಾಗಬೇಕು.
- ಕೆ.ಶೇಷಾದ್ರಿ, ಅಧ್ಯಕ್ಷರು, ನಗರಸಭೆ, ರಾಮನಗರಕೋಟ್ ............
ಕಳೆದ 10 ವರ್ಷಗಳ ಹಿಂದೆ ನಿರ್ಮಾಣಗೊಂಡಿದ್ದ ಬಯೋಮೆಥನೇಶನ್ ಘಟಕ ಸೂಕ್ತ ನಿರ್ವಹಣೆ ಇಲ್ಲದೆ ಸ್ಥಗಿತಗೊಂಡಿತ್ತು. ಈಗ ಅದನ್ನು 5.40 ಲಕ್ಷ ವೆಚ್ಚದಲ್ಲಿ ನವೀಕರಿಸಲಾಗಿದೆ. ಪ್ರತಿನಿತ್ಯ ಒಂದು ಟನ್ ಸಾಮರ್ಥ್ಯದ ಬಯೋ ಗ್ಯಾಸ್‌ನಿಂದ ನಗರಸಭಾ ವ್ಯಾಪ್ತಿಯ ಸುಮಾರು 20 - 30 ಬೀದಿ ದೀಪಗಳು ಪ್ರತಿ ದಿನ ಬೆಳಗುತ್ತವೆ.-ಡಾ.ಜಯಣ್ಣ, ಆಯುಕ್ತರು, ನಗರಸಭೆ, ರಾಮನಗರ
(ಒಂದು ಫೋಟೋ ಪ್ಯಾನಲ್‌ನಲ್ಲಿ ಬಳಸಿ)15ಕೆಆರ್ ಎಂಎನ್ 1,2.ಜೆಪಿಜಿ
1.ರಾಮನಗರದ ಗಾಂಧಿನಗರ ಬಡಾವಣೆಯಲ್ಲಿ ಫುಡ್ ಸ್ಟ್ರೀಟ್ ನ ಶೆಲ್ಟರ್ ನಿರ್ಮಾಣಕ್ಕೆ ನಗರಸಭೆ ಅಧ್ಯಕ್ಷ ಕೆ.ಶೇಷಾದ್ರಿ ಭೂಮಿ ಪೂಜೆ ನೆರವೇರಿಸಿದರು.2.ಬಯೋಮೆಥನೇಶನ್ ಘಟಕ ಪುನರ್ ಪ್ರಾರಂಭಕ್ಕೆ ನಗರಸಭೆ ಅಧ್ಯಕ್ಷ ಕೆ.ಶೇಷಾದ್ರಿ ಚಾಲನೆ ನೀಡಿದರು.