ಕನ್ನಡಪ್ರಭ ವಾರ್ತೆ ಮೈಸೂರು
ಮೈಸೂರು ತಾಲೂಕಿನ ಕಡಕೊಳದಲ್ಲಿರುವ ಕೆಇಬಿ ಎಂಜಿನಿಯರ್ಸ್ ಅಸೋಸಿಯೇಷನ್ ಸಭಾಂಗಣದಲ್ಲಿ ಆಯೋಜಿಸಿರುವ ತರಬೇತಿ ಕಾರ್ಯಕ್ರಮದಲ್ಲಿ ಮೊದಲ ದಿನ ವಿದ್ಯುತ್ ವಿತರಣಾ ವ್ಯವಸ್ಥೆ, ಟ್ರಾನ್ಸ್ ಫಾರ್ಮರ್ ನಿರ್ವಹಣೆ, ಸುರಕ್ಷತಾ ಕ್ರಮಗಳು ಹಾಗೂ ವಿದ್ಯುತ್ ಕಳ್ಳತನ ತಡೆಗಟ್ಟಲು ಅನುಸರಿಸಬೇಕಾದ ಕ್ರಮಗಳು ಸೇರಿದಂತೆ ಇತರೆ ಪ್ರಮುಖ ವಿಷಯಗಳ ಕುರಿತಂತೆ ಸಂಪನ್ಮೂಲ ವ್ಯಕ್ತಿಗಳು ಪ್ರಾತ್ಯಕ್ಷಿಕೆ ಹಾಗೂ ವಿಡಿಯೋಗಳ ಮೂಲಕ ಸಂಬಂಧಿಸಿದ ಅಧಿಕಾರಿಗಳು ತರಬೇತಿ ನೀಡಿದರು.
ಸೆಸ್ಕ್ ತರಬೇತಿ ಶಾಖೆ ಉಪ ಪ್ರಧಾನ ವ್ಯವಸ್ಥಾಪಕಿ ಎಂ.ವೈ. ಹೇಮಾ ಮಾತನಾಡಿ, ಪವರ್ ಮ್ಯಾನ್ ಗಳು ಗ್ರಾಹಕರು ಹಾಗೂ ಸೆಸ್ಕ್ ನಡುವಿನ ಸಂಪರ್ಕದ ಸೇತುವೆಯಾಗಿರುತ್ತಾರೆ. ಹೀಗಾಗಿ, ಅವರು ಗ್ರಾಹಕರೊಂದಿಗೆ ಸಂಯಮ, ಸಹನೆ, ಸೌಹಾರ್ದತೆಯಿಂದ ನಡೆದುಕೊಂಡು, ಅಡಚಣೆರಹಿತ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ ಮಾಡುವುದಕ್ಕೆ ಮೊದಲ ಆದ್ಯತೆ ನೀಡಬೇಕಿದೆ ಎಂದರು.ಆದ್ದರಿಂದ ಕರ್ತವ್ಯದಲ್ಲಿ ಯಾವುದೇ ತಪ್ಪುಗಳು ಸಂಭವಿಸಿದಾಗ ಅದನ್ನು ಸರಿಪಡಿಸಲು ವಿಳಂಬ ಮಾಡಬಾರದು. ಅದರಲ್ಲೂ ಜೀವಕ್ಕೆ ಹಾನಿಯಾಗುವಂತಹ ತಪ್ಪು ಮಾಡದಂತೆ ಹೆಚ್ಚಿನ ಎಚ್ಚರಿಕೆ ವಹಿಸಬೇಕು. ಗ್ರಾಹಕರಿಗೆ ಸ್ಪರ್ಧಾತ್ಮಕ ದರದಲ್ಲಿ ಗುಣಮಟ್ಟದ ತಡೆರಹಿತ ವಿದ್ಯುತ್ ಒದಗಿಸುವುದು ಸೆಸ್ಕ್ ಪ್ರಮುಖ ಧ್ಯೇಯವಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸೇರಿದಂತೆ ವಿವಿಧ ಸಂಸ್ಥೆಗಳು ಹಾಗೂ ಮುಖ್ಯವಾಗಿ ಗ್ರಾಹಕರ ಸಹಕಾರದೊಂದಿಗೆ ಈ ಗುರಿ ಸಾಧಿಸಲು ನಿರಂತರವಾಗಿ ಕಾರ್ಯ ನಿರ್ವಹಿಸಬೇಕಿದೆ ಎಂದು ಹೇಳಿದರು.
ವಿವಿಧ ವಿಷಯಗಳ ತರಬೇತಿ:
ಸೆಸ್ಕ್ ತರಬೇತಿ ಶಾಖೆಯ ಸಹಾಯಕ ಪ್ರಧಾನ ವ್ಯವಸ್ಥಾಪಕಿ ಎನ್. ಜ್ಯೋತಿ, ಕೆಇಬಿ ಎಂಜಿನಿಯರ್ಸ್ ಅಸೋಸಿಯೇಷನ್ ತರಬೇತಿ ಸಂಸ್ಥೆಯ ಪ್ರಾಂಶುಪಾಲ ಜೆ.ಬಿ. ಯೋಗೇಗೌಡ ಮೊದಲಾದವರು ಇದ್ದರು.