28, 29ಕ್ಕೆ ಕೈಗಾರಿಕಾ ವಸ್ತುಗಳ ಪ್ರದರ್ಶನ

KannadaprabhaNewsNetwork |  
Published : Oct 27, 2026, 01:45 AM IST
ಪೊಟೋ: 26ಎಸ್‌ಎಂಜಿಕೆಪಿ06 ಶಿವಮೊಗ್ಗದ ಪತ್ರಿಕಾಭವನದಲ್ಲಿ ಸೋಮವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಶಿವಮೊಗ್ಗ -ಭದ್ರಾವತಿ ಕೈಗಾರಿಕಾ ಸಂಘದ ಅಧ್ಯಕ್ಷ ಎಲ್. ಚಂದ್ರಶೇಖರ್ ಮಾತನಾಡಿದರು.  | Kannada Prabha

ಸಾರಾಂಶ

Industrial Goods Exhibition on the 28th and 29th

ಶಿವಮೊಗ್ಗ: ಸ್ಥಳೀಯ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಹೊಸ ಉದ್ಯಮಾವಕಾಶ ಕಲ್ಪಿಸುವ ಉದ್ದೇಶದಿಂದ ಶಿವಮೊಗ್ಗ -ಭದ್ರಾವತಿ ಕೈಗಾರಿಕಾ ಸಂಘದ (ಎಸ್‌ಬಿಐಎ) ವತಿಯಿಂದ ಅ. 28 ಮತ್ತು 29 ರಂದು ಮಾಚೇನಹಳ್ಳಿಯ ಉದ್ಯಮ ಭವನದಲ್ಲಿ ಬೃಹತ್ ವೆಂಡರ್ ಡೆವಲಪ್‌ಮೆಂಟ್ ಕಾರ್ಯಕ್ರಮ ಹಾಗೂ ಕೈಗಾರಿಕಾ ವಸ್ತುಗಳ ಪ್ರದರ್ಶನ ಆಯೋಜಿಸಿದೆ ಎಂದು ಸಂಘದ ಅಧ್ಯಕ್ಷ ಎಲ್. ಚಂದ್ರಶೇಖರ್ ತಿಳಿಸಿದರು. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಎಂಎಸ್‌ಎಂಇ ಇಲಾಖೆ ಹಾಗೂ ವಿವಿಧ ಕೈಗಾರಿಕಾ ಸಂಘಟನೆಗಳ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಲಿದೆ. ಸ್ಥಳೀಯ ಕೈಗಾರಿಕೆಗಳು ತಮ್ಮ ಉತ್ಪನ್ನಗಳು ಮತ್ತು ತಾಂತ್ರಿಕ ಸಾಮರ್ಥ್ಯವನ್ನು ಪ್ರಮುಖ ಖರೀದಿದಾರ ಸಂಸ್ಥೆಗಳಿಗೆ ಪರಿಚಯಿಸಿಕೊಳ್ಳಲು ಇದು ಉತ್ತಮ ವೇದಿಕೆಯಾಗಲಿದೆ ಎಂದರು. ಶಿವಮೊಗ್ಗ ಮತ್ತು ಸುತ್ತಮುತ್ತಲಿನ ಕೈಗಾರಿಕಾ ಪ್ರದೇಶಗಳಲ್ಲಿ ಸುಮಾರು 80 ರಿಂದ 90 ಸಣ್ಣ ಮತ್ತು ಮಧ್ಯಮ ಕೈಗಾರಿಕಾ ಘಟಕಗಳು ಕಾರ್ಯನಿರ್ವಹಿಸುತ್ತಿದ್ದು, 5 ರಿಂದ 6 ಸಾವಿರ ಜನರಿಗೆ ಉದ್ಯೋಗ ಕಲ್ಪಿಸಿವೆ. ಈ ಘಟಕಗಳಿಗೆ ಹೊಸ ಗ್ರಾಹಕರನ್ನು ಪರಿಚಯಿಸುವುದು, ಉತ್ಪಾದನಾ ಸಾಮರ್ಥ್ಯ ಹೆಚ್ಚಿಸುವುದು ಹಾಗೂ ಬೃಹತ್ ಕೈಗಾರಿಕೆಗಳಿಗೆ ಪೂರೈಕೆದಾರರಾಗಿ ಬೆಳೆಯಲು ನೆರವಾಗುವುದು ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಹೇಳಿದರು.

ಕೈಗಾರಿಕಾ ರತ್ನ ಪ್ರಶಸ್ತಿ: ಕೈಗಾರಿಕಾ ಕ್ಷೇತ್ರಕ್ಕೆ ನೀಡಿದ ಕೊಡುಗೆ ಗುರುತಿಸಿ ಜಿಲ್ಲೆಯ ಮೂವರು ಹಿರಿಯ ಉದ್ಯಮಿಗಳಿಗೆ ‘ಕೈಗಾರಿಕಾ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಶಾಂತಲಾ ಗ್ರೂಪ್ ಆಫ್ ಕಂಪನೀಸ್ ಅಧ್ಯಕ್ಷ ರುದ್ರೇಗೌಡ ಎಸ್., ಮಲ್ನಾಡ್ ಗ್ರೂಪ್ ಆಫ್ ಕಂಪನೀಸ್ ಅಧ್ಯಕ್ಷ ಮಧುಕರ್ ಜೋಯಿಸ್ ವೈ.ವಿ. ಹಾಗೂ ಪಿಯರ್ಲೈಟ್ ಲೈನರ್ಸ್ ಪ್ರೈವೇಟ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ರಾಮಪ್ರಸಾದ್ ಎಚ್.ಜಿ. ಅವರನ್ನು ಗೌರವಿಸಲಾಗುವುದು ಎಂದು ತಿಳಿಸಿದರು. ಕೈಗಾರಿಕಾ ಕ್ಷೇತ್ರದ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲು ಜಿಲ್ಲೆಯ ಎಂಜಿನಿಯರಿಂಗ್ ಕಾಲೇಜುಗಳು ಮತ್ತು ಐಟಿಐ ಸಂಸ್ಥೆಗಳಿಗೂ ಆಹ್ವಾನ ನೀಡಲಾಗಿದೆ. ಕೈಗಾರಿಕೋದ್ಯಮಿಗಳು, ಉದ್ಯಮ ಸಂಸ್ಥೆಗಳ ಪ್ರತಿನಿಧಿಗಳು, ಪೂರೈಕೆದಾರರು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.ಗೋಷ್ಠಿಯಲ್ಲಿ ಕೈಗಾರಿಕಾ ಸಂಘದ ಜಿಲ್ಲಾ ಘಟಕ ಅಧ್ಯಕ್ಷ ಬಿ. ಗೋಪಿನಾಥ್, ಎಸ್‌ಬಿಐಎ ಕಾರ್ಯದರ್ಶಿ ಎಸ್. ಎಸ್. ಟಿ. ರಾಜೇಶ್, ಎ.ಎಲ್. ಚಂದ್ರಶೇಖರ್, ಎಚ್. ಎಲ್. ದಿನೇಶ್, ಆಯನೂರು ಸಂತೋಷ್ ಇದ್ದರು.

-------------------

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವಾಲ್ಮೀಕಿ ರಾಮಾಯಣದಿಂದ ಸಮಾಜಕ್ಕೆ ಸಂದೇಶ
ರುದ್ರಭೂಮಿ ಸ್ವಚ್ಛಗೊಳಿಸಿದ ಹಿಂದೂ ಸಂಘಟನೆ ಕಾರ್ಯಕರ್ತರು