ಶಿವಮೊಗ್ಗ: ರಾಜ್ಯ ಸರ್ಕಾರ ಬಜೆಟ್ ನಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಕ್ಷೇತ್ರಕ್ಕೆ ಸಂಬಂಧಿಸಿ ಪ್ರಮುಖ ಅಂಶಗಳನ್ನು ಘೋಷಿಸಿರುವುದು ಸ್ವಾಗತಾರ್ಹ ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ತಿಳಿಸಿದ್ದಾರೆ.
ರಾಜ್ಯಾದ್ಯಂತ ಎಂಎಸ್ಎಂಇಗಳಿಗೆ ಸಹಾಯ ಮಾಡಲು 15 ಕೋಟಿ ರು. ವೆಚ್ಚದಲ್ಲಿ 10 ಕೈಗಾರಿಕಾ ಕ್ಲಸ್ಟರ್ ಗಳನ್ನು ಸ್ಥಾಪಿಸುವುದು. ಪ್ರವಾಸೋದ್ಯಮ ಮತ್ತು ನಾವೀನ್ಯತಗೆ ಒತ್ತು ನೀಡಿರುವುದು. ಬೆಂಗಳೂರಿನಲ್ಲಿ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಲು ಪ್ರಸ್ತಾವನೆ, ಬೆಂಗಳೂರಿನ ದಟ್ಟಣೆ ಕಡಿಮೆ ಮಾಡುವ ಗುರಿಯೊಂದಿಗೆ ಮೈಸೂರನ್ನು ರಾಜ್ಯದ ಎರಡನೇ ಐಟಿ ನಗರವನ್ನಾಗಿ ಅಭಿವೃದ್ಧಿಪಡಿಸಲು ನಿರ್ಧಾರ ಕೈಗೊಂಡಿರುವುದು.
ತಾಂತ್ರಿಕ ತರಬೇತಿ ಮೂಲಸೌಕರ್ಯವನ್ನು ಬಲಪಡಿಸಲು 60 ಕೋಟಿ ರು.ನಲ್ಲಿ 10 ಹೊಸ ಜಿಟಿಟಿಸಿ (ಸರ್ಕಾರಿ ಪರಿಕರ ಕೊಠಡಿ ಮತ್ತು ತರಬೇತಿ ಕೇಂದ್ರ) ಸೌಲಭ್ಯ ಸ್ಥಾಪನೆ ಮಾಡುವುದು. ಕೃಷಿಯಲ್ಲಿ 100 ಕೋಟಿ ರೂ. ಹೂಡಿಕೆಯೊಂದಿಗೆ ಮಿಲ್ಲೆಟ್ ಹಬ್ ಆರಂಭ, ರಾಗಿ ಉತ್ಪನ್ನಗಳನ್ನು ಉತ್ತೇಜಿಸಲು ರಾಗಿ ಹಬ್ ಸ್ಥಾಪನೆ ಮಾಡಲು ಕ್ರಮ ವಹಿಸುವುದು ಉತ್ತಮ ನಿರ್ಧಾರ ಎಂದು ತಿಳಿಸಿದ್ದಾರೆ.