ಕನ್ನಡಪ್ರಭ ವಾರ್ತೆ ಉಡುಪಿ
ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಶಕ್ತಿಯನ್ನು ತುಂಬಿದಾಗ ಮಾತ್ರ ಸಂವಿಧಾನದ ಸಮಾನತೆಯ ಆಶಯ ಈಡೇರುತ್ತದೆ. ಅದಕ್ಕಾಗಿ ರಾಜ್ಯದಲ್ಲಿ ಪಂಚ ಗ್ಯಾರಂಟಿಗಳನ್ನು ಜಾರಿಗೆ ತರಲಾಯಿತು. ಶಕ್ತಿ ಯೋಜನೆಯಡಿ ಇದುವರೆಗೆ 365.42 ಕೋಟಿ ಮಹಿಳೆಯರು, ಪ್ರತಿತಿಂಗಳು ಗೃಹಲಕ್ಷ್ಮೀ ಗ್ಯಾರಂಟಿಯಡಿ 1.22 ಕೋಟಿ, ಗೃಹಜ್ಯೋತಿ ಯೋಜನೆಯಡಿ 1.63 ಕೋಟಿಗೂ ಅಧಿಕ ಕುಟುಂಬಗಳು, ಅನ್ನಭಾಗ್ಯ ಯೋಜನೆಯಡಿ 1.19 ಕೋಟಿ ಪಡಿತರ ಚೀಟಿದಾರರು, ಯುವನಿಧಿ ಯೋಜನೆಯಡಿ1.65 ನಿರುದ್ಯೋಗಿ ಯುವಕರು ಲಾಭ ಪಡೆಯುತ್ತಿದ್ದಾರೆ ಎಂದು ಸಚಿವರು ಹೇಳಿದರು.ಜಿಲ್ಲೆಗಳಲ್ಲಿ ಕಂದಾಯ ಇಲಾಖೆಯಲ್ಲಿ ಶೇ.30 ರಷ್ಟು ಅನೇಕ ದಾಖಲೆಗಳೇ ಇಲ್ಲ ಎಂಬ ದೂರು ಇದೆ. ಆದ್ದರಿಂದ ಇರುವ ದಾಖಲೆಗಳನ್ನು ತಹಸೀಲ್ದಾರ್‌ಗಳ ಕಚೇರಿಯಲ್ಲಿ ಡಿಜಿಟಲೀಕರಣ ಮಾಡುವ ಭೂಸುರಕ್ಷಾ ಯೋಜನೆಗೆ ರಾಜ್ಯಾದ್ಯಂತ ಚಾಲನೆ ನೀಡಲಾಗಿದೆ ಎಂದರು.
ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ, ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ನಗರಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ, ಎಸ್ಪಿ ಡಾ. ಅರುಣ್ ಕೆ., ಕರಾವಳಿ ಕಾವಲು ಪೊಲೀಸ್ ಅಧೀಕ್ಷಕ ಮಿಥುನ್ ಎಚ್.ಎನ್., ಕಾರ್ಕಳ ವನ್ಯಜೀವಿ ಡಿ.ಎಫ್.ಒ. ಶಿವರಾಮ ಎಂ. ಬಾಬು, ಜಿಲ್ಲಾ ಮಟ್ಟದ ಅಧಿಕಾರಿಗಳು, ಸಾರ್ವಜನಿಕರು, ವಿದ್ಯಾರ್ಥಿಗಳು ಹಾಗೂ ಮತ್ತಿತರರು ಇದ್ದರು.