ಬಾಲ್ಯ ವಿವಾಹ ನಡೆದರೆ ಇಲಾಖೆಗೆ ಮಾಹಿತಿ ನೀಡಿ: ಶಿವಲಿಂಗಯ್ಯ

KannadaprabhaNewsNetwork |  
Published : Jul 22, 2025, 01:16 AM IST
ನರಸಿಂಹರಾಜಪುರ ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ  ಡೇ ನಲ್ಮ್ ಯೋಜನೆಯಡಿ ಸ್ವಸಹಾಯ ಸಂಘಗಳ ಒಕ್ಕೂಟದ ಸದಸ್ಯರಿಗೆ ಏರ್ಪಡಿಸಿದ್ದ ತರಬೇತಿ ಕಾರ್ಯಗಾರದಲ್ಲಿ ಕೌಶಲ್ಯಾಭಿವೃದ್ದಿ ತಜ್ಞ ಶಿವಲಿಂಗಯ್ಯ ಮಾತನಾಡಿದರು. | Kannada Prabha

ಸಾರಾಂಶ

ನರಸಿಂಹರಾಜಪುರಬಾಲ್ಯ ವಿವಾಹ ಕಂಡು ಬಂದರೆ ತಕ್ಷಣ ಸಂಬಂಧಪಟ್ಟ ಇಲಾಖೆ ಗಮನಕ್ಕೆ ತರಬೇಕು ಎಂದು ಕೌಶಲ್ಯಾಭಿವೃದ್ಧಿ ತಜ್ಞ ಶಿವಲಿಂಗಯ್ಯ ಕರೆ ನೀಡಿದರು.

ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ವಿವಾಹ ನೋಂದಣಿ ತರಬೇತಿ

ಕನ್ನಡಪ್ರಭ ವಾರ್ತೆ, ನರಸಿಂಹರಾಜಪುರ

ಬಾಲ್ಯ ವಿವಾಹ ಕಂಡು ಬಂದರೆ ತಕ್ಷಣ ಸಂಬಂಧಪಟ್ಟ ಇಲಾಖೆ ಗಮನಕ್ಕೆ ತರಬೇಕು ಎಂದು ಕೌಶಲ್ಯಾಭಿವೃದ್ಧಿ ತಜ್ಞ ಶಿವಲಿಂಗಯ್ಯ ಕರೆ ನೀಡಿದರು.

ಸೋಮವಾರ ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಡೇ ನಲ್ಮ್ ಯೋಜನೆಯಡಿ ಸ್ವಸಹಾಯ ಸಂಘಗಳ ಒಕ್ಕೂಟದ ಸದಸ್ಯರಿಗೆ ವಿವಾಹ ನೋಂದಣಿ ತರಬೇತಿ, ಬಾಲ್ಯ ವಿವಾಹ ನಿಷೇಧ ಬಗ್ಗೆ ಮಾಹಿತಿ ಕಾರ್ಯಕ್ರಮದಲ್ಲಿ ತರಬೇತಿ ನೀಡಿ ಮಾತನಾಡಿದರು.

ಪ್ರತಿ ವಿವಾಹ ನೋಂದಣಿ ಮಾಡಿಸಬೇಕು. ಬಾಲ್ಯ ವಿವಾಹ ತಡೆಗಟ್ಟಬೇಕು. ಮಹಿಳೆಯರು ಸ್ವಸಹಾಯ ಸಂಘಕ್ಕೆ ಸೇರುವುದರಿಂದ ಸಾಮಾಜಿಕ, ಆರ್ಥಿಕವಾಗಿ ಸಮಾಜದಲ್ಲಿ ಸ್ಥಾನಮಾನ ಪಡೆಯಲು ಸಹಕಾರಿಯಾಗಲಿದೆ. ನಗರ ಪ್ರದೇಶಗಳ ಸಮಗ್ರ ಅಭಿವೃದ್ಧಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ನಿರಂತರವಾಗಿ ಪ್ರಯತ್ನ ಮಾಡುತ್ತಿದೆ. ನಗರ ಪ್ರದೇಶ ದಲ್ಲಿ ಸ್ವಾವಲಂಭನೆ ಮತ್ತು ಅಭಿವೃದ್ಧಿಯನ್ನು ಪೂರ್ಣ ಪ್ರಮಾಣದಲ್ಲಿ ಕಾಣಬೇಕಾದರೆ ಬಡತನ ಕಡಿಮೆ ಮಾಡಬೇಕಾಗಿ ರುವುದು ಅನಿವಾರ್ಯ ಎಂದರು.

ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಜುಬೇದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಹಿಳೆಯರು ಆರ್ಥಿಕ ಸಬಲೀಕರಣ ಹೊಂದುವ ಮೂಲಕ ಸಾಮಾಜಿಕ,ಶೈಕ್ಷಣಿಕ ಹಾಗೂ ರಾಜಕೀಯವಾಗಿ ಮುಂದೆ ಬರಬೇಕು. ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಪಟ್ಟಣ ಪಂಚಾಯಿತಿಯಿಂದ ಸ್ವಸಹಾಯ ಸಂಘಗಳ ಒಕ್ಕೂಟ ರಚಿಸಿ ಮಹಿಳೆಯರಿಗೆ ತರಬೇತಿ ನೀಡುತ್ತಾ ವ್ಯಾಪಾರ ವಹಿವಾಟು, ಬ್ಯಾಂಕಿಂಗ್ ವ್ಯವಸ್ಥೆ ಸಂಪೂರ್ಣ ಮಾಹಿತಿ ನೀಡಲಾಗುತ್ತಿದೆ ಎಂದರು.

ಅಧ್ಯಕ್ಷೆ ಭಾನುಮತಿ ಮಾತನಾಡಿ, ಸ್ವಸಹಾಯ ಸಂಘಗಳ ಒಕ್ಕೂಟದ ಮೂಲಕ ಮಹಿಳೆಯರಲ್ಲಿ ಧೈರ್ಯದಿಂದ ಸ್ವಾವಲಂಭಿ ಯಾಗಿ ಬದುಕಲು ಆತ್ಮಸ್ಥೈರ್ಯ ತುಂಬಲಾಗುತ್ತಿದೆ ಎಂದರು. ಈ ಸಂದರ್ಭದಲ್ಲಿ ಪಪಂ ಸದಸ್ಯೆ ಸುರೈಯಾಭಾನು, ಒಕ್ಕೂಟದ ಕಾರ್ಯದರ್ಶಿ ಶಿವರತ್ನಮ್ಮ, ಸಮುದಾಯ ಸಂಘಟಕ ಲಕ್ಷ್ಮಣಗೌಡ ಇದ್ದರು. ತರಬೇತಿಯಲ್ಲಿ ಒಕ್ಕೂಟದ ಪದಾಧಿಕಾರಿಗಳು, ಸದಸ್ಯರು,ಸ್ವಸಹಾಯ ಸಂಘದ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

PREV

Latest Stories

ದಾವಣಗೆರೆಯಲ್ಲಿ ವೀರಶೈವ ಪಂಚಪೀಠಗಳ ಸಮಾಗಮ
ಹವ್ಯಕ ಪ್ರತಿಷ್ಠಾನ ವಾರ್ಷಿಕೋತ್ಸವ ಸಂಪನ್ನ
5 ಪಾಲಿಕೆ ರಚನೆಗೆ ಆಕ್ಷೇಪಣೆ ಸಲ್ಲಿಸಲು ಹಕ್ಕಿದೆ: ಡಿಕೆಶಿ