ಕನ್ನಡಪ್ರಭ ವಾರ್ತೆ ಕುಂದಾಪುರ
ಅವರು ಮಂಗಳವಾರ ಇಲ್ಲಿನ ಶಾಸ್ತ್ರಿ ಸರ್ಕಲ್ ಬಳಿಯ ಆರ್.ಎನ್.ಶೆಟ್ಟಿ ಸಭಾಭವನದಲ್ಲಿ ನಡೆದ ಕುಂದಾಪುರ ತಾಲೂಕು ಜನಸ್ಪಂದನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜನಸ್ಪಂದನ ಕಾರ್ಯಕ್ರಮದಲ್ಲಿ ನೀಡಿರುವ ಅಹವಾಲುಗಳನ್ನು ಇಲಾಖೆಯ ಅಧಿಕಾರಿಗಳು ನಿರ್ಲಕ್ಷ್ಯ ವಹಿಸದೇ ಶೀಘ್ರದಲ್ಲಿಯೇ ಸ್ಪಂದಿಸಿ, ಸಮಸ್ಯೆಗಳನ್ನು ನಿಯಮಾನುಸಾರ ಬಗೆಹರಿಸಲು ಮುಂದಾಗಬೇಕು ಎಂದವರು ಸೂಚನೆ ನೀಡಿದರು.ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮಾತನಾಡಿ, ಜನಸ್ಪಂದನ ಕಾರ್ಯಕ್ರಮದ ಬಗ್ಗೆ ಹೆಚ್ಚಿನ ಪ್ರಚಾರ ಕೈಗೊಂಡಲ್ಲಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ತಮ್ಮ ಸಮಸ್ಯೆಗಳನ್ನು ಇತ್ಯರ್ಥಪಡಿಸಲು ಅನುಕೂಲವಾಗುತ್ತದೆ. ಜೊತೆಗೆ ಇಲಾಖೆಗಳಲ್ಲಿ ನಿತ್ಯ ಸಾರ್ವಜನಿಕರ ಕೆಲಸವನ್ನು ಸುಗಮವಾಗಿ ಆಗುವ ರೀತಿಯಲ್ಲಿ ಆಗಬೇಕು ಎಂದ ಅವರು, ಕೆಲವೊಮ್ಮೆ ಪಹಣಿ ಬದಲಾವಣೆಗೆ ವರ್ಷಗಟ್ಟಲೇ ಕಾಯುವಂತಹ ಪರಿಸ್ಥಿತಿ ಇದೆ. ಅವುಗಳು ಕಾಲಮಿತಿಯೊಳಗೆ ಆಗಬೇಕು ಎಂದರು.
ಈ ಜನಸ್ಪಂದನಾ ಕಾರ್ಯಕ್ರಮದಲ್ಲಿ ವಿದ್ಯುತ್ ಸಮಸ್ಯೆ, ಜಮೀನಿನ ಅಳತೆ ವಿಳಂಬ, ರಸ್ತೆ ಸಮಸ್ಯೆ, ಮಳೆಯ ನೀರು ಸರಿಯಾಗಿ ಹರಿದು ಹೋಗದಿರುವ ಬಗ್ಗೆ ಸೇರಿದಂತೆ ಹಲವಾರು ಸಮಸ್ಯೆಗಳ ಕುರಿತು ಸುಮಾರು 69 ಅರ್ಜಿಗಳು ಸಲ್ಲಿಕೆಯಾಗಿದ್ದವು.
ಕಾರ್ಯಕ್ರಮದಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ, ಸಹಾಯಕ ಕಮೀಷನರ್ ರಶ್ಮಿ, ತಹಸೀಲ್ದಾರ್ ಶೋಭಾಲಕ್ಷ್ಮಿ, ವಿವಿಧ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.