ಬ್ರೀಫ್‌....ಹೋಂಸ್ಟೇ, ರೆಸಾರ್ಟ್‌ಲ್ಲಿ ಮಾಹಿತಿ ಫಲಕಕಡ್ಡಾಯ:ಡಿಸಿ ಆದೇಶ

KannadaprabhaNewsNetwork |  
Published : Aug 08, 2026, 01:45 AM IST
46 | Kannada Prabha

ಸಾರಾಂಶ

Shivamogga: Owners of all homestays, hotels, resorts, and other accommodation facilities in the district are mandatorily required to register their establishments on the Karnataka Tourism Department's official website (http://portal.karnatakatourisum.org). Additionally, Deputy Commissioner Prabhulinga Kavalikatti has directed that information boards be compulsorily installed to ensure the safety, security, and availability of emergency assistance for tourists.

ಶಿವಮೊಗ್ಗ: ಜಿಲ್ಲೆಯಲ್ಲಿರುವ ಎಲ್ಲಾ ಹೋಂಸ್ಟೇ, ಹೋಟೆಲ್, ರೆಸಾರ್ಟ್ ಹಾಗೂ ಇತರೆ ವಸತಿ ಘಟಕಗಳ ಮಾಲೀಕರು ತಮ್ಮ ಸಂಸ್ಥೆಗಳನ್ನು ಕರ್ನಾಟಕ ಪ್ರವಾಸೋದ್ಯಮ ಇಲಾಖೆಯ ಅಧಿಕೃತ ವೆಬ್‌ಸೈಟ್‌ನಲ್ಲಿ http://portal.karnatakatourisum.org ಕಡ್ಡಾಯವಾಗಿ ನೋಂದಾಯಿಸಿಕೊಳ್ಳಬೇಕು. ಜೊತೆಗೆ ಪ್ರವಾಸಿಗರ ಸುರಕ್ಷತೆ, ಭದ್ರತೆ ಮತ್ತು ತುರ್ತು ನೆರವಿನ ಹಿತದೃಷ್ಟಿಯಿಂದ ಮಾಹಿತಿ ಫಲಕಗಳನ್ನು ಕಡ್ಡಾಯವಾಗಿ ಅಳವಡಿಸುವಂತೆ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದ್ದಾರೆ. ಸಿಂಗಲ್ ಎಮರ್ಜೆನ್ಸಿ ಹೆಲ್ಪ್ ಲೈನ್-112, ನ್ಯಾಷನಲ್ ಟೂರಿಸ್ಟ್ ಹೆಲ್ಪ್ ಲೈನ್ -1800-11-1363/1363, ವುಮೆನ್ ಸೇಫ್ಟಿ ಹೆಲ್ಪ್ ಲೈನ್-181, ಚೈಲ್ಡ್ ಹೆಲ್ಪ್ ಲೈನ್-1098, ಸಮೀಪದ ಆಸ್ಪತ್ರೆ/ ಪ್ರಾಥಮಿಕ ಆರೋಗ್ಯ ಕೇಂದ್ರದ ಸಂಪರ್ಕ ಮಾಹಿತಿ, ಸಹಾಯಕ/ಉಪನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ, ಶಿವಮೊಗ್ಗ-08182-251444, ಜಿಲ್ಲಾಧಿಕಾರಿಗಳ ಕಚೇರಿ-08182-271101, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ-08182-221010/1077, ಗ್ರಾಮ ಪಂಚಾಯಿತಿ/ ನಗರ ಸ್ಥಳೀಯ ಸಂಸ್ಥೆ ಹಾಗೂ ಸಖಿ ಒನ್ ಸ್ಟಾಪ್ ಸೆಂಟರ್-08182-223055 ಈ ಎಲ್ಲಾ ಮಾಹಿತಿ ಫಲಕಗಳನ್ನು ಎಲ್ಲಾ ವಸತಿ ಘಟಕಗಳಲ್ಲಿ ಸ್ಪಷ್ಟವಾಗಿ ಕಾಣುವ ಸ್ಥಳಗಳಲ್ಲಿ ಕಡ್ಡಾಯವಾಗಿ ಅಳವಡಿಸಿ, ಪ್ರವಾಸಿಗರ ಸುರಕ್ಷತೆ, ಭದ್ರತೆ ಹಾಗೂ ತುರ್ತು ಸಂದರ್ಭಗಳಲ್ಲಿ ಅಗತ್ಯ ನೆರವು ದೊರೆಯುವಂತೆ ಕ್ರಮ ವಹಿಸಬೇಕು. ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಕಚೇರಿ, ಪ್ರವಾಸೋದ್ಯಮ ಇಲಾಖೆ, ‘ಎ’ ಬ್ಲಾಕ್, 3ನೇ ತಿರುವು, ಗೋಪಾಲಗೌಡ ಬಡಾವಣೆ, ಶಿವಮೊಗ್ಗ, ದೂ.ಸಂ.: 08182-251444 ನ್ನು ಸಂಪರ್ಕಿಸಬಹುದೆಂದು ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೆರಗೋಡು ಕಾಲೇಜಿನಲ್ಲಿ ಸಹಪಠ್ಯ ಚಟುವಟಿಕೆಗಳ ಉದ್ಘಾಟನೆ
ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಪರಿವರ್ತನೆಗಾಗಿ ಪಾದಯಾತ್ರೆ