ರಾಜ್ಯಾದ್ಯಂತ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಮಾಹಿತಿ ಪ್ರದರ್ಶನ

KannadaprabhaNewsNetwork |  
Published : Jun 05, 2025, 12:51 AM IST
ಬೆಳಗಾವಿ ಕೇಂದ್ರ ಬಸ್‌ ನಿಲ್ದಾಣದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಬೆಳಗಾವಿ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಆಯೋಜಿಸಲಾಗಿರುವ ರಾಜ್ಯ ಸರಕಾರದ ಅಭಿವೃದ್ಧಿ ಕಾರ್ಯಗಳ ಕುರಿತ ಮಾಹಿತಿ ಪ್ರದರ್ಶನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಬುಧವಾರ ಚಾಲನೆ ನೀಡಿದರು. | Kannada Prabha

ಸಾರಾಂಶ

ಗ್ಯಾರಂಟಿ ಯೋಜನೆಗಳು ಮಾತ್ರವಲ್ಲದೇ ಸರ್ಕಾರದ ಇತರೆ ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಲು ರಾಜ್ಯಾದ್ಯಂತ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಮಾಹಿತಿ ಪ್ರದರ್ಶನ ಆಯೋಜಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಗ್ಯಾರಂಟಿ ಯೋಜನೆಗಳು ಮಾತ್ರವಲ್ಲದೇ ಸರ್ಕಾರದ ಇತರೆ ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಲು ರಾಜ್ಯಾದ್ಯಂತ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಮಾಹಿತಿ ಪ್ರದರ್ಶನ ಆಯೋಜಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಕರ್ನಾಟಕ ಸರ್ಕಾರ 2 ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಸಾಧನಾ ಸಂಭ್ರಮದ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಬುಧವಾರ ಆಯೋಜಿಸಲಾಗಿರುವ ರಾಜ್ಯ ಸರ್ಕಾರದ ಅಭಿವೃದ್ಧಿ ಕಾರ್ಯಗಳ ಕುರಿತ ಮಾಹಿತಿ ಪ್ರದರ್ಶನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳು ಮತ್ತು ಇತರೆ ಅಭಿವೃದ್ಧಿ ಕಾರ್ಯಗಳಿಗೆ ಸರ್ಕಾರವು ಸಾಕಷ್ಟು ಖರ್ಚು ಮಾಡಿದೆ. ಈ ಕುರಿತು ಜನರಿಗೆ ಮಾಹಿತಿಯನ್ನು ನೀಡುವ ಅಗತ್ಯವಿದೆ. ಪ್ರತಿ ಜಿಲ್ಲೆಗಳಲ್ಲಿ ಉಸ್ತುವಾರಿ ಸಚಿವರು ಈ ಕೆಲಸವನ್ನು ಮಾಡಲಿದ್ದಾರೆ ಎಂದು ತಿಳಿಸಿದರು.ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪ ನಿರ್ದೇಶಕ ಗುರುನಾಥ ಕಡಬೂರ ಮಾತನಾಡಿ, ಸರ್ಕಾರದ ಯೋಜನೆಗಳ ಬಗ್ಗೆ ಜನಜಾಗೃತಿ ಮೂಡಿಸಲು ರಾಜ್ಯದ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಮಾಹಿತಿ ಪ್ರದರ್ಶನ ಏರ್ಪಡಿಸಲಾಗಿದೆ ಎಂದು ತಿಳಿಸಿದರು.ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಆಸಿಫ್(ರಾಜು) ಸೇಠ್, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬೆಳಗಾವಿ ವಿಭಾಗೀಯ ನಿಯಂತ್ರಣಾಧಿಕಾರಿ ರಾಜೇಶ್ ಹುದ್ದಾರ ಉಪಸ್ಥಿತರಿದ್ದರು.ಗ್ಯಾರಂಟಿ ಯೋಜನೆಗಳು ಮತ್ತು ಇತರೆ ಅಭಿವೃದ್ಧಿ ಕಾರ್ಯಗಳಿಗೆ ಸರ್ಕಾರವು ಸಾಕಷ್ಟು ಖರ್ಚು ಮಾಡಿದೆ. ಈ ಕುರಿತು ಜನರಿಗೆ ಮಾಹಿತಿಯನ್ನು ನೀಡುವ ಅಗತ್ಯವಿದೆ. ಪ್ರತಿ ಜಿಲ್ಲೆಗಳಲ್ಲಿ ಉಸ್ತುವಾರಿ ಸಚಿವರು ಈ ಕೆಲಸವನ್ನು ಮಾಡಲಿದ್ದಾರೆ.

-ಸತೀಶ ಜಾರಕಿಹೊಳಿ, ಜಿಲ್ಲಾ ಉಸ್ತುವಾರಿ ಸಚಿವರು.

ಸರ್ಕಾರದ ಯೋಜನೆಗಳ ಬಗ್ಗೆ ಜನಜಾಗೃತಿ ಮೂಡಿಸಲು ರಾಜ್ಯದ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಮಾಹಿತಿ ಪ್ರದರ್ಶನ ಏರ್ಪಡಿಸಲಾಗಿದೆ.

-ಗುರುನಾಥ ಕಡಬೂರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪ ನಿರ್ದೇಶಕರು.ಜೂ.10 ರವರೆಗೆ ಮಾಹಿತಿ ಪ್ರದರ್ಶನ

ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಜ್ಯೋತಿ, ಶಕ್ತಿ, ಗೃಹಲಕ್ಷ್ಮಿ, ಯುವನಿಧಿ ಯೋಜನೆಗಳ ಅನುಷ್ಠಾನ ಕುರಿತ ಅಂಕಿ-ಅಂಶಗಳು, ಯೋಜನೆಯ ಮಾಹಿತಿ, ಫಲಾನುಭವಿಗಳ ಛಾಯಾಚಿತ್ರ/ಅನಿಸಿಕೆಗಳನ್ನು ಪ್ರದರ್ಶಿಸಲಾಗುವುದು. ಇದಲ್ಲದೇ ಮುಖ್ಯಮಂತ್ರಿಗಳ ಜತೆ ಸೆಲ್ಫಿ ತೆಗೆದುಕೊಳ್ಳಲು ಅನುಕೂಲವಾಗುವಂತೆ ಸಾರ್ವಜನಿಕರಿಗಾಗಿ ನಾಲ್ಕು ಸೆಲ್ಫಿ ಪಾಯಿಂಟ್ ಕೂಡ ಸ್ಥಾಪಿಸಲಾಗುವುದು. ಜೂ.4 ರಿಂದ 10 ರವರೆಗೆ ಮಾಹಿತಿ ಪ್ರದರ್ಶನ ನಡೆಯಲಿದೆ. ಸಾರ್ವಜನಿಕರಿಗೆ ಮುಕ್ತ ಪ್ರವೇಶವಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಮಾಹಿತಿ ಪ್ರದರ್ಶನವನ್ನು ವೀಕ್ಷಿಸಬೇಕು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪ ನಿರ್ದೇಶಕ ಗುರುನಾಥ ಕಡಬೂರ ಕೋರಿದ್ದಾರೆ.

PREV

Recommended Stories

ಸರ್ಕಾರಿ ಶಾಲೆ ಕುಡಿವ ನೀರಿಗೆ ವಿಷ ಬೆರೆಸಿದ್ದಕ್ಕೆ ಸಿಎಂ ಗರಂ
ಡಾ.ರಾಜ್‌ಕುಮಾರ್‌ರ ನೆಚ್ಚಿನ ಸಹೋದರಿ ನಾಗಮ್ಮ ನಿಧನ