ಕನ್ನಡಪ್ರಭ ವಾರ್ತೆ ಅರಸೀಕೆರೆ
ಧ್ವಜಾರೋಹಣ ಮೂಲಕ ಮತಗಟ್ಟೆಗಳ ಮಾಹಿತಿಗೆ ಚಾಲನೆ:
ಅರುಣ್ ಕುಮಾರ್ ಸಿಂಗಾವಿ ಮಾತನಾಡಿ, ಲೋಕಸಭೆ ಚುನಾವಣೆಗೆ ಪೂರಕವಾಗಿ ಅರಸೀಕೆರೆ ವಿಧಾನ ಸಭೆ ಕ್ಷೇತ್ರದಲ್ಲಿರುವ ಮತಗಟ್ಟೆಗಳ ಪರಿಚಯ ಮತ್ತು ಮತದಾರರಿಗೆ ಲಭ್ಯವಿರುವ ವಿಶೇಷ ಸೌಲಭ್ಯಗಳ ಮಾಹಿತಿಯನ್ನು ಇಂದಿನಿಂದ ಮೂರು ದಿನಗಳವರೆಗೆ ನೀಡಲಿದ್ದೇವೆ. ತಾಲೂಕಿನ ಕೇಂದ್ರ ಸ್ಥಾನದಲ್ಲಿ ನಡೆದಿರುವ ಇಂದಿನ ಧ್ವಜಾರೋಹಣ ಕಾರ್ಯಕ್ರಮವು ಪ್ರತಿ ಗ್ರಾಪಂ ವ್ಯಾಪ್ತಿಯಲ್ಲಿ ಸಂಬಂಧಿಸಿದ ಪಿಡಿಒಗಳು ನಡೆಸಲಿದ್ದಾರೆ. ಈ ಕಾರ್ಯಕ್ರಮದ ಮೂಲಕ ಮನೆ ಮನೆಗೆ ತೆರಳಿ ಗುರುತಿನ ಚೀಟಿ ನೀಡುವುದರೊಂದಿಗೆ ಮತದಾನ ಮಾಡಲು ಲಭ್ಯವಿರುವ ವಿಶೇಷ ಸವಲತ್ತುಗಳ ಬಗ್ಗೆ ಮಾಹಿತಿ ನೀಡಲಾಗುತ್ತದೆ ಎಂದರು.ತಹಸೀಲ್ದಾರ್ ರುಕಿಯಾ ಬೇಗಂ ಮಾತನಾಡಿ, ಚುನಾವಣಾ ಆಯೋಗದ ಮಾರ್ಗದರ್ಶನದಂತೆ ಎಲ್ಲ ಇಲಾಖೆಗಳ ಅಧಿಕಾರಿ ಮತ್ತು ಸಿಬ್ಬಂದಿ ಈ ಬಾರಿಯ ಲೋಕಸಭಾ ಚುನಾವಣೆಗೆ ತಮ್ಮನ್ನು ತಾವು ತೊಡಗಿಸಿಕೊಂಡು ಮತದಾನದ ಯಶಸ್ಸಿಗೆ ಕಾರ್ಯಪ್ರವೃತ್ತರಾಗಿದ್ದಾರೆ. ಇವರೆಲ್ಲರ ಸಹಕಾರ ಮತ್ತು ಭಾಗವಹಿಸುವಿಕೆಯಿಂದ ಚುನಾವಣೆಯನ್ನು ಯಶಸ್ವಿಯಾಗಿ ನಡೆಸಲಿದ್ದೇವೆ ಎಂದರು.
ಬಿಇಒ ಮೋಹನ್ ಕುಮಾರ್, ನಗರಸಭೆ ಪೌರಾಯುಕ್ತ ಬಸವರಾಜು, ತಹಸೀಲ್ದಾರ್ ಗ್ರೇಡ್-2 ಪಾಲಾಕ್ಷ , ಶಿರಸ್ತೇದಾರ್ ಗೋಪಾಲಕೃಷ್ಣ , ಶಿವಶಂಕರ್, ನಗರ ಪೊಲೀಸ್ ಠಾಣೆ ಸಬ್ ಇನ್ಸ್ ಪೆಕ್ಟರ್ ಲತಾ, ನಗರಸಭೆ ಆರೋಗ್ಯ ನಿರೀಕ್ಷಕ ಲಿಂಗರಾಜು, ವಿವೇಕಾನಂದ ಶಿಕ್ಷಣ ಮಹಾ ವಿದ್ಯಾಲಯದ ಶಶಿಧರ್, ಜ್ಞಾನಶ್ರೀ ಎಕ್ಸ್ ಪರ್ಟ್ ಪಿಯು ಕಾಲೇಜು ಉಪನ್ಯಾಸಕ ಮಂಜುನಾಥ್ ಪಂಡಿತ್ ಇನ್ನಿತರರು ಉಪಸ್ಥಿತರಿದ್ದರು.