ಮದ್ಯಾನದ ಬಿಸಿಯೂಟ ಕೇವಲ ಕೆಪಿಎಸ್‌ ಪಿಯು ವಿದ್ಯಾರ್ಥಿಗಳಿಗೆ ಸೀಮಿತ

KannadaprabhaNewsNetwork |  
Published : Feb 18, 2026, 01:15 AM IST
ರೈತರಿಗೆ ಸರಿಯಾಗಿ ಪರಿಹಾರ ನೀಡದೆ ಸತಾಯಿಸಿದ ಅಧಿಕಾರಿಯೋರ್ವರು ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತಕ್ಕೆ ಸಿಕ್ಕು ಜೈಲುಪಾಲಾದ ಬಳಿಕ ಜೈಲಿನೆದುರು ಸೋಪು, ಸೊಳ್ಳೆಬತ್ತಿಗಳೊಂದಿಗೆ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದ ರೈತರೋರ್ವರು ಸರ್ಕಾರಕ್ಕೆ ಹಣ ಉಳಿಸಿದ ಅಧಿಕಾರಿ ಆರೋಗ್ಯವಾಗಿರಲಿ ಎಂದು ವ್ಯಂಗ್ಯಭರಿತವಾಗಿ ಹಾರೈಸಿದರು. | Kannada Prabha

ಸಾರಾಂಶ

ಎಐಡಿಎಸ್ಓ ಕರ್ನಾಟಕ ರಾಜ್ಯ ಸಮಿತಿ ತೀವ್ರ ಖಂಡನೆ

ಕನ್ನಡಪ್ರಭ ವಾರ್ತೆ ಚಿತ್ರದುರ್ಗ

ಮಧ್ಯಾಹ್ನದ ಬಿಸಿಯೂಟ ಯೋಜನೆಯನ್ನು ಕೇವಲ ಕರ್ನಾಟಕ ಪಬ್ಲಿಕ್ ಶಾಲೆಗಳ ಪದವಿಪೂರ್ವ ವಿದ್ಯಾರ್ಥಿಗಳಿಗೆ ಮಾತ್ರ ವಿಸ್ತರಿಸಿ, ಇತರೆ ಸರ್ಕಾರಿ ಮತ್ತು ಅನುದಾನಿತ ಪದವಿ ಪೂರ್ವ ಕಾಲೇಜುಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳನ್ನು ಈ ಯೋಜನೆಯಿಂದ ಹೊರಗಿಟ್ಟಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಎಐಡಿಎಸ್ಓ ಕರ್ನಾಟಕ ರಾಜ್ಯ ಸಮಿತಿಯು ತೀವ್ರವಾಗಿ ಖಂಡಿಸುತ್ತದೆ ಎಂದು ಜಿಲ್ಲಾ ಸಂಚಾಲಕ ಈರಣ್ಣ ಕೆ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಶಿಕ್ಷಣ ಎಂಬುದು ಸಾಂವಿಧಾನಿಕ ಹಕ್ಕು ಅದು ಆಯ್ದ ಕೆಲವರಿಗೆ ಮಾತ್ರ ಸೀಮಿತವಾದ ಸೌಕರ್ಯವಲ್ಲ. ಸರ್ಕಾರವೇ ವಿವಿಧ ರೀತಿಯ ಶಿಕ್ಷಣ ಸಂಸ್ಥೆಗಳನ್ನು ನಡೆಸುತ್ತಿರುವಾಗ ಒಂದೇ ರೀತಿಯ ಸಾಮಾಜಿಕ-ಆರ್ಥಿಕ ಹಿನ್ನೆಲೆಯಿಂದ ಬಂದ ವಿದ್ಯಾರ್ಥಿಗಳಲ್ಲಿ ಒಂದು ವರ್ಗಕ್ಕೆ ಮಾತ್ರ ಕಲ್ಯಾಣ ಯೋಜನೆಗಳನ್ನು ನೀಡಿ, ಉಳಿದವರಿಗೆ ನಿರಾಕರಿಸುವುದು ಸ್ಪಷ್ಟ ತಾರತಮ್ಯವಾಗಿದೆ. ಸರ್ಕಾರಿ ಮತ್ತು ಅನುದಾನಿತ ಪಿಯು ಕಾಲೇಜುಗಳಲ್ಲಿ ಕಲಿಯುವ ಬಹುತೇಕ ವಿದ್ಯಾರ್ಥಿಗಳು ಬಡ ಮತ್ತು ಕಾರ್ಮಿಕ ವರ್ಗದ ಕುಟುಂಬಗಳಿಂದ ಬಂದವರಾಗಿದ್ದಾರೆ. ಅವರಿಗೆ ಮಧ್ಯಾಹ್ನದ ಊಟವು ಕೇವಲ ಸೌಲಭ್ಯವಲ್ಲ ಬದಲಿಗೆ ಹಸಿವಿಲ್ಲದೆ ಶಿಕ್ಷಣವನ್ನು ಮುಂದುವರಿಸಲು ಇರುವ ಅತ್ಯಗತ್ಯ ವಾಗಿದೆ.

ಸರ್ಕಾರವು ಸಮಾನತೆಯನ್ನು ಉತ್ತೇಜಿಸುವುದಾಗಿ ಮತ್ತು ಸಾರ್ವಜನಿಕ ಶಿಕ್ಷಣವನ್ನು ಬಲಪಡಿಸುವುದಾಗಿ ಹೇಳಿಕೊಳ್ಳುತ್ತಿದೆ. ಆದರೆ, ಇಂತಹ ಆಯ್ದ ಅನುಷ್ಠಾನವು ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯೊಳಗೆ ಒಂದು ಶ್ರೇಣೀಕೃತ ವ್ಯವಸ್ಥೆಯನ್ನು ಸೃಷ್ಟಿಸುತ್ತದೆ. ಹಣಕಾಸಿನ ಅಥವಾ ತಾಂತ್ರಿಕ ಅಡಚಣೆಗಳಿದ್ದಲ್ಲಿ, ಸರ್ಕಾರವು ಅದನ್ನು ಪಾರದರ್ಶಕವಾಗಿ ಪರಿಹರಿಸಬೇಕೇ ಹೊರತು, ಇಂತಹ ವಿಭಜಿಸುವ ಕ್ರಮಗಳನ್ನು ಅನುಸರಿಸಬಾರದು.

ಸರ್ಕಾರವು ಶಿಕ್ಷಣದಲ್ಲಿ ಸಮಾನ ಅವಕಾಶದ ತತ್ವವನ್ನು ಎತ್ತಿಹಿಡಿಯಬೇಕು ಮತ್ತು ವಿದ್ಯಾರ್ಥಿಯು ಯಾವ ಸಂಸ್ಥೆಯಲ್ಲಿ ಓದುತ್ತಿದ್ದಾನೆ ಎಂಬುದನ್ನು ಲೆಕ್ಕಿಸದೆ, ಅರ್ಹವಿರುವ ಪ್ರತಿಯೊಬ್ಬ ವಿದ್ಯಾರ್ಥಿಗೂ ಸಮಾನ ಬೆಂಬಲ ಸಿಗುವಂತೆ ನೋಡಿಕೊಳ್ಳಬೇಕೆಂದು ಆಗ್ರಹಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಿವಲೀಲಾ ಪಾಟೀಲರಿಗೆ ‘ಸೌಭಾಗ್ಯವತಿ ಸಿಂಧು ಸುಭಾಷ ಮ್ಹಮಾಣೆ ಮಾತೃಶಕ್ತಿ ಪ್ರಶಸ್ತಿ’ ಪ್ರದಾನ
ಅಸಹಜ ಲೈಂಗಿಕ ದೌರ್ಜನ್ಯ ಕೇಸ್‌ : ಸೂರಜ್‌ ರೇವಣ್ಣಗೆ ಕೋರ್ಟ್‌ ಶಾಕ್‌