- ಬಜೆಟ್ ವಿರೋಧಿಸಿ ಹೊರಗುತ್ತಿಗೆ ನೌಕರರ ಸಂಘ ಪ್ರತಿಭಟನೆ- - - ದಾವಣಗೆರೆ: ರಾಜ್ಯ ಸರ್ಕಾರ ಮಂಡಿಸಿದ ಬಜೆಟ್‌ನಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರಿಗೆ ಗುತ್ತಿಗೆ ಪದ್ಧತಿ ರದ್ದುಪಡಿಸಿ ಪೌರಕಾರ್ಮಿಕರ ಮಾದರಿಯಲ್ಲಿ ನೇರಪಾವತಿ ಜಾರಿಗೊಳಿಸದೇ ರಾಜ್ಯ ಸರ್ಕಾರ ಅನ್ಯಾಯ ಎಸಗಿದೆ ಎಂದು ಕರ್ನಾಟಕ ರಾಜ್ಯ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹೊರಗುತ್ತಿಗೆ ನೌಕರರ ಸಂಘದಿಂದ ಶುಕ್ರವಾರ ಮಹಾನಗರ ಪಾಲಿಕೆ ಆವರಣದಲ್ಲಿ ಪ್ರತಿಭಟನೆ ನಡೆಸಿದರು.
ಹೊರಗುತ್ತಿಗೆ ನೌಕರರ ಸಂಘದ ತೀವ್ರ ಹೋರಾಟದ ಪರಿಣಾಮ ಈ ಬಾರಿಯ ಬಜೆಟ್‌ನಲ್ಲಿ ನೇರಪಾವತಿ ಘೋಷಣೆಗೆ ಅಗತ್ಯ ಪ್ರಸ್ತಾವನೆ ಸಲ್ಲಿಸಲು ಹಣಕಾಸು ಇಲಾಖೆ ಸೂಚನೆ ನೀಡಿತ್ತು. ಅದರಂತೆ ನಗರಾಭಿವೃದ್ಧಿ ಇಲಾಖೆ ಅಗತ್ಯ ಪ್ರಸ್ತಾವನೆ ಸಲ್ಲಿಸಿದ್ದರು. ಗುತ್ತಿಗೆ ಏಜೆನ್ಸಿಗಳ ಲಾಭಿಗೆ ಶರಣಾಗಿರುವ ರಾಜ್ಯ ಸರ್ಕಾರ ಹೊರಗುತ್ತಿಗೆ ನೌಕರರಿಗೆ ವಿಶ್ವಾಸ ದ್ರೋಹ ಎಸಗಿದೆ ಎಂದು ಕಿಡಿಕಾರಿದರು.
ರಾಜ್ಯ ಸರ್ಕಾರ ಎಚ್ಚೆತ್ತು ಗುತ್ತಿಗೆ ಪದ್ಧತಿ ರದ್ದುಗೊಳಿಸಿ, ನೇರಪಾವತಿ ಜಾರಿಗೊಳಿಸಬೇಕು. ತಪ್ಪಿದಲ್ಲಿ ರಾಜ್ಯಾದ್ಯಂತ ಕುಡಿಯುವ ನೀರು, ಸ್ವಚ್ಛತೆ ಕಾರ್ಯಗಳನ್ನು ಬಹಿಷ್ಕರಿಸಿ, ಅನಿರ್ದಿಷ್ಟಾವಧಿ ಮುಷ್ಕರ ನಡೆಸುವುದು ಅನಿವಾರ್ಯ ಎಂದು ಎಚ್ಚರಿಸಿದರು.ಪ್ರತಿಭಟನೆಯಲ್ಲಿ ಹೊರಗುತ್ತಿಗೆ ನೌಕರರು ಇದ್ದರು.
- - - -7ಕೆಡಿವಿಜಿ42.ಜೆಪಿಜಿ:ರಾಜ್ಯ ಬಜೆಟ್‌ನಲ್ಲಿ ಹೊರಗುತ್ತಿಗೆ ನೌಕರರಿಗೆ ಅನ್ಯಾಯ ಖಂಡಿಸಿ ಶುಕ್ರವಾರ ದಾವಣಗೆರೆಯಲ್ಲಿ ರಾಜ್ಯ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹೊರಗುತ್ತಿಗೆ ನೌಕರರ ಸಂಘದಿಂದ ಪ್ರತಿಭಟನೆ ನಡೆಯಿತು.