ರಾಮನಗರ: ಸರ್ಕಾರಿ ಜಮೀನುಗಳಲ್ಲಿ 25 -30 ವರ್ಷಗಳಿಂದ ಸಾಗುವಳಿ ಮಾಡುತ್ತಿರುವ ಸಾಗುವಳಿದಾರರ ಸಾವಿರಾರು ಅರ್ಜಿಗಳನ್ನು ಈ ಹಿಂದೆ ಶಾಸಕರಾಗಿದ್ದ ಕುಮಾರಸ್ವಾಮಿ ಹಾಗೂ ಅನಿತಾ ಕುಮಾರಸ್ವಾಮಿ ಸಮರ್ಪಕವಾಗಿ ವಿಲೇವಾರಿ ಮಾಡದೆ ಅನ್ಯಾಯ ಮಾಡಿದ್ದಾರೆ ಎಂದು ರಾಮನಗರ ಕ್ಷೇತ್ರ ಶಾಸಕ ಇಕ್ಬಾಲ್ ಹುಸೇನ್ ಟೀಕಿಸಿದರು.
ಸರ್ಕಾರಿ ಜಮೀನುಗಳಲ್ಲಿನ ಅನಧಿಕೃತ ಸಾಗುವಳಿಯನ್ನು ಸಕ್ರಮಗೊಳಿಸುವಂತೆ ಕೋರಿ ಕರ್ನಾಟಕ ಭೂ ಕಂದಾಯ ಕಾಯ್ದೆಯ ನಮೂನೆ 50 ಮತ್ತು ನಮೂನೆ 53ರಲ್ಲಿ ಸಲ್ಲಿಕೆಯಾಗಿರುವ ಅರ್ಜಿಗಳ ಪೈಕಿ ಸುಮಾರು 2 ಸಾವಿರಕ್ಕೂ ಅಧಿಕ ಅರ್ಜಿಗಳು ವಿಲೇವಾರಿಯಾಗಿಲ್ಲ. ಇನ್ನು ನಮೂನೆ 57ರ ಅಡಿಯಲ್ಲಿ 2499 ಅರ್ಜಿಗಳು ಬಂದಿದ್ದು, ಇದರಲ್ಲಿ 1564 ಅರ್ಜಿಗಳು ತಿರಸ್ಕೃತವಾಗಿವೆ. ಬಾಕಿ ಉಳಿದಿರುವ 935 ಅರ್ಜಿಗಳ ಪೈಕಿ 355 ಅರ್ಜಿಗಳು ಜಿಲ್ಲಾಕಾರಿಗಳಿಗೆ ರವಾನೆಯಾಗಿದ್ದರೆ, 580 ಅರ್ಜಿಗಳು ಬಾಕಿ ಉಳಿದಿವೆ ಎಂದು ಹೇಳಿದರು.
ನಾನು ಮೊದಲ ಬಾರಿ ಬಗರ್ ಹುಕುಂ ಸಾಗುವಳಿಯ ಸಭೆ ನಡೆಸಿದಾಗ ಈ ಎಲ್ಲ ಸಾಗುವಳಿ ಅರ್ಜಿಗಳನ್ನು ಪುನರ್ ಪರಿಶೀಲನೆಯ ನೆಪವೊಡ್ಡಿ ತಡೆ ಹಿಡಿದಿರುವುದು ಗಮನಕ್ಕೆ ಬಂದಿದೆ. ಅಲ್ಲದೆ, ಈ ಹಿಂದೆ ಶಾಸಕರಾಗಿದ್ದ ಕುಮಾರಸ್ವಾಮಿ ಮತ್ತು ಅನಿತಾ ಕುಮಾರಸ್ವಾಮಿರವರು ಬಗರ್ ಹುಕುಂ ಸಾಗುವಳಿ ಸಭೆಗಳನ್ನೇ ನಡೆಸದೆ ಲೋಪ ಎಸಗಿದ್ದಾರೆ ಎಂದು ದೂರಿದರು.ಶಾಸಕರಾಗಿದ್ದಾಗ ಕುಮಾರಸ್ವಾಮಿರವರು 14 ವರ್ಷಗಳಲ್ಲಿ 3ರಿಂದ 4 ಸಭೆ ನಡೆಸಿದ್ದರೆ, 2 ಸಭೆಯಲ್ಲಿ ಮಾತ್ರ ಸಹಿ ಹಾಕಿದ್ದಾರೆ. 2018-19ರಲ್ಲಿ ಶಾಸಕರಾಗಿದ್ದ ಅನಿತಾ ಕುಮಾರಸ್ವಾಮಿ 5 ವರ್ಷಗಳ ಅವಧಿಯಲ್ಲಿ 1 ಬಾರಿ ಮಾತ್ರ ಸಭೆ ನಡೆಸಿ, 7 ಮಂದಿಗೆ ಸಾಗುವಳಿ ಚೀಟಿ ವಿತರಣೆ ಮಾಡಿದ್ದಾರೆ. ಈ ಕಾರಣದಿಂದಾಗಿಯೇ ಅಧಿಕಾರಿಗಳು ಪುನರ್ ಪರಿಶೀಲನೆಯ ನೆಪವೊಡ್ಡಿ ಸಾವಿರಾರು ಸಾಗುವಳಿ ಅರ್ಜಿಗಳನ್ನು ಬಾಕಿ ಉಳಿಸಿಕೊಂಡಿದ್ದಾರೆ ಎಂದು ಆರೋಪಿಸಿದರು.
ಸಾಗುವಳಿಗಾಗಿ ನಮೂನೆ 50, ನಮೂನೆ 53 ಹಾಗೂ ನಮೂನೆ 57ರಲ್ಲಿ ಸಲ್ಲಿಕೆಯಾಗಿರುವ ಎಲ್ಲ ಅರ್ಜಿಗಳನ್ನು ಪುನರ್ ಪರಿಶೀಲನೆ ನಡೆಸಿ ತ್ವರಿತವಾಗಿ ವಿಲೇವಾರಿ ಮಾಡಲಾಗುವುದು. ಇದಕ್ಕಾಗಿ ಸ್ಥಳ ಪರಿಶೀಲನೆ ನಡೆಸಿ ವಸ್ತು ಸ್ಥಿತಿ ಅರಿಯುವ ಕೆಲಸ ಮಾಡುತ್ತೇವೆ ಎಂದು ಇಕ್ಬಾಲ್ ಹುಸೇನ್ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಕೋಟ್ .....
-ಇಕ್ಬಾಲ್ ಹುಸೇನ್ , ಶಾಸಕರು, ರಾಮನಗರ ಕ್ಷೇತ್ರ
ಭೂ ಕಂದಾಯ ಕಾಯ್ದೆಯಲ್ಲಿ ಏನಿದೆ ?
ಪ್ರಾಥಮಿಕ ಹಂತದ ಪರಿಶೀಲನೆ ಪೂರ್ಣಗೊಳಿಸಿ ಅರ್ಜಿಗಳನ್ನು ಬಗರ್ ಹುಕುಂ ಸಮಿತಿಯ ಮುಂದೆ ಮಂಡಿಸಬೇಕು. ಸಮಿತಿಯು ಗುರುತಿಸಿದ ಅರ್ಜಿಗಳನ್ನು ಜಿಲ್ಲಾಧಿಕಾರಿಗಳು ಪುರಸ್ಕರಿಸಬೇಕು. ಹಾಗೊಂದು ವೇಳೆ ಅನರ್ಹ ಅರ್ಜಿಗಳಿದ್ದರೆ ಅಂತಹ ಅರ್ಜಿದಾರರ ವಶದಲ್ಲಿರುವ ಜಮೀನುಗಳನ್ನು ಸರ್ಕಾರದ ಸ್ವಾಧೀನಕ್ಕೆ ತೆಗೆದುಕೊಳ್ಳಲು ಅಗತ್ಯ ಕ್ರಮ ಕೈಗೊಳ್ಳಬೇಕು. ಅನಧಿಕೃತ ಸಾಗುವಳಿಯನ್ನು ಬಗರ್ ಹುಕುಂ ಅಡಿಯಲ್ಲಿ ಸಕ್ರಮಗೊಳಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿ ತಿರಸ್ಕೃತವಾದರೆ ಅಂತಹ ಜಮೀನುಗಳನ್ನು ಸರ್ಕಾರದ ಸ್ವಾಧೀನಕ್ಕೆ ಪಡೆಯಬೇಕು ಎಂಬ ಅಂಶ ಭೂ ಕಂದಾಯ ಕಾಯ್ದೆಯಲ್ಲೇ ಇದೆ.
ಬಾಕ್ಸ್ ................
ನಮೂನೆ - 57ರ ಅರ್ಜಿಗಳ ವಿವರಹೋಬಳಿಸ್ವೀಕೃತ ಅರ್ಜಿಗಳುತಿರಸ್ಕೃತ ಅರ್ಜಿಗಳುಬಾಕಿ ಅರ್ಜಿಗಳು
ಕಸಬಾ1449957492ಕೈಲಾಂಚ1050607443
ಒಟ್ಟು2499156493525ಕೆಆರ್ ಎಂಎನ್ 1.ಜೆಪಿಜಿ
ರಾಮನಗರ ತಾಲೂಕು ಆಡಳಿತ ಕಚೇರಿ ಸಭಾಂಗಣದಲ್ಲಿ ಶಾಸಕ ಇಕ್ಬಾಲ್ ಹುಸೇನ್ ಅಧ್ಯಕ್ಷತೆಯಲ್ಲಿ ಬಗರ್ ಹುಕುಂ ಸಾಗುವಳಿ ಸಮಿತಿ ಸಭೆ ನಡೆಯಿತು.