ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ರಾಜ್ಯ ಬಜೆಟ್‌ನಲ್ಲಿ ಜೈನ ಸಮುದಾಯದ ಯಾವುದೇ ಬೇಡಿಕೆಗಳನ್ನು ಈಡೇರಿಸದೇ ನಿರ್ಲಕ್ಷಿಸಿದ್ದಾರೆ. ಶೀಘ್ರವೇ ಸರ್ಕಾರದ ವಿರುದ್ಧ ಉಗ್ರ ಹೋರಾಟ ಹಮ್ಮಿಕೊಳ್ಳುವುದಾಗಿ ವರೂರು ನವಗ್ರಹ ತೀರ್ಥಕ್ಷೇತ್ರದ ಆಚಾರ್ಯ ಬಜೆಟ್‌ನಲ್ಲಿ ಜೈನ ಸಮಾಜಕ್ಕೆ ಅನ್ಯಾಯ: ಗುಣಧರನಂದಿ ಮಹಾರಾಜ ಹೇಳಿದ್ದಾರೆ.
ನಿಗಮ ಸ್ಥಾಪನೆಯೂ ಇಲ್ಲ
ಈ ಹಿಂದೆಯೇ ಜೈನ ಅಭಿವೃದ್ದಿ ನಿಗಮ ಸ್ಥಾಪನೆ ಅತ್ಯಗತ್ಯತೆ ಕುರಿತು ಸರ್ಕಾರಕ್ಕೆ ಮನವರಿಕೆ ಮಾಡಲಾಗಿತ್ತು. ಇದಕ್ಕೆ ಗೃಹಸಚಿವರಾದಿಯಾಗಿ ಎಲ್ಲರೂ ನಿಗಮ ಸ್ಥಾಪನೆ ಮಾಡುವ ಭರವಸೆ ನೀಡಿದ್ದರು. ಆದರೂ ಬಜೆಟ್‌ನಲ್ಲಿ ಈ ಬಗ್ಗೆ ಪ್ರಸ್ತಾಪಿಸದೇ ಸಮಾಜಕ್ಕೆ ಅನ್ಯಾಯ ಮಾಡಲಾಗಿದೆ ಎಂದರು..ಸರ್ಕಾರದ ಈ ನೀತಿಯನ್ನು ಸಮಾಜವು ತೀವ್ರವಾಗಿ ಖಂಡಿಸುತ್ತದೆ. ತಮ್ಮ ಬೇಡಿಕೆಗಳ ಈಡೇರಿಕೆಗೆ ಈ ವರೆಗೆ ಜೈನ ಸಮುದಾಯ ಶಾಂತಿಯುತ ಹೋರಾಟ ಮಾಡುತ್ತ ಬಂದಿದೆ. ಆದರೆ, ಸರ್ಕಾರದ ನಿರ್ಲಕ್ಷ್ಯದ ಬಗ್ಗೆ ಸಮುದಾಯದ ಜನರಲ್ಲಿ ಬೇಸರ ಮೂಡಿಸಿದೆ. ಶೀಘ್ರವೇ ಜೈನ ಸಮುದಾಯದ ಮುಖಂಡರ ಸಭೆ ನಡೆಸಿ ಮುಂದಿನ ದಿನಗಳಲ್ಲಿ ಉಗ್ರ ಸ್ವರೂಪದ ಹೋರಾಟ ನಡೆಸಲು ರೂಪರೇಷೆಗಳನ್ನು ಸಿದ್ಧಪಡಿಸಲಾಗುವುದು ಎಂದು ಗುಣಧರನಂದಿ ಶ್ರೀಗಳು ಎಚ್ಚರಿಸಿದ್ದಾರೆ.