ಕನ್ನಡಪ್ರಭ ವಾರ್ತೆ ಬೆಂಗಳೂರು:
ಈ ಕುರಿತು ಯುವ ಕರ್ನಾಟಕ ವೇದಿಕೆ, ಕರ್ನಾಟಕ ವಿಕಾಶ ರಂಗ, ಕರ್ನಾಟಕ ರಕ್ಷಣಾ ವೇದಿಕೆ ಸೇರಿದಂತೆ ಇತರೆ ಕನ್ನಡಪರ ಸಂಘಟನೆಗಳು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸೇರಿದಂತೆ ಇತರರನ್ನು ಭೇಟಿ ಮಾಡಿ ಮನವಿ ಪತ್ರ ನೀಡಲು ಸಿದ್ಧತೆ ನಡೆಸಿವೆ.
ಕನ್ನಡ ನೆಲದಲ್ಲೇ ಕಡೆಗಣನೆ:ಕನ್ನಡ ನೆಲದಲ್ಲಿಯೇ ಸ್ಥಳೀಯ ಕನ್ನಡಿಗರು ಉದ್ಯೋಗ ಪಡೆಯಲು ತೀವ್ರ ಅಡೆತಡೆ ಹಾಗೂ ಕಡೆಗಣನೆ ಎದುರಿಸುತ್ತಿದ್ದಾರೆ. ಖಾಸಗಿ ಕಂಪನಿಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ತರಲು ರಾಜ್ಯ ಸರ್ಕಾರ ತಕ್ಷಣವೇ ಮಧ್ಯಪ್ರವೇಶಿಸಬೇಕು. ನೇಮಕಾತಿ ಪ್ರಕ್ರಿಯೆಯಲ್ಲಿ ಪ್ರಮುಖ ಪಾತ್ರ ವಹಿಸುವ ಮಾನವ ಸಂಪನ್ಮೂಲ ಅಧಿಕಾರಿಗಳು ಮತ್ತು ಅಂತಿಮ ಆಯ್ಕೆ ಪ್ರಕ್ರಿಯೆಯ ಉನ್ನತ ಹುದ್ದೆಗಳಲ್ಲಿ ಕನ್ನಡಿಗರಿಗೆ ಸೂಕ್ತ ಪ್ರಾತಿನಿಧ್ಯ ಸಿಗುವಂತಾಗಬೇಕೆಂದು ಮನವಿಯಲ್ಲಿ ಆಗ್ರಹಿಸುವುದಾಗಿ ಯುವ ಕರ್ನಾಟಕ ವೇದಿಕೆ ರಾಜ್ಯಾಧ್ಯಕ್ಷ ರೂಪೇಶ್ ರಾಜಣ್ಣ ತಿಳಿಸಿದರು.
ಖಾಸಗಿ ಸಂಸ್ಥೆಗಳಲ್ಲಿನ ಒಟ್ಟು ಉದ್ಯೋಗಿಗಳ ಪೈಕಿ ಕನ್ನಡಿಗರ ಪ್ರಮಾಣ ಎಷ್ಟು ಮತ್ತು ನಿರ್ಧಾರ ಕೈಗೊಳ್ಳುವ ಹುದ್ದೆಗಳಲ್ಲಿ ಕನ್ನಡಿಗರ ಪ್ರಾತಿನಿಧ್ಯ ಎಷ್ಟಿದೆ ಎಂಬುದರ ಅಂಕಿ-ಅಂಶಗಳನ್ನು ಸರ್ಕಾರ ಕಲೆಹಾಕಬೇಕು. ನೇಮಕಾತಿ ವೇಳೆ ಕನ್ನಡ ಭಾಷೆ, ಸ್ಥಳೀಯತೆ ಅಥವಾ ಇತರೆ ಅನರ್ಹ ಮಾನದಂಡಗಳನ್ನು ಮುಂದಿಟ್ಟುಕೊಂಡು ತಾರತಮ್ಯ ಮಾಡಲಾಗುತ್ತಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು. ಕನ್ನಡಿಗರೆಂಬ ಕಾರಣಕ್ಕೆ ಉದ್ಯೋಗಾವಕಾಶ ನಿರಾಕರಿಸಲಾಗುತ್ತಿದೆ ಎಂಬ ದೂರುಗಳ ವಿಚಾರಣೆ ಹಾಗೂ ಪರಿಹಾರಕ್ಕಾಗಿ ಪ್ರತ್ಯೇಕ ವ್ಯವಸ್ಥೆ ರೂಪಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸುವುದಾಗಿ ಕನ್ನಡಪ್ರಭಕ್ಕೆ ತಿಳಿಸಿದರು.
ಅರ್ಹ ಸ್ಥಳೀಯ ಅಭ್ಯರ್ಥಿಗಳಿಗೆ ನ್ಯಾಯಸಮ್ಮತ ಉದ್ಯೋಗಾವಕಾಶ ಖಾತರಿಪಡಿಸಲು ಸಮಗ್ರ ನೀತಿ ಹಾಗೂ ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಜಾರಿಗೊಳಿಸಬೇಕು. ಪರಿಶೀಲನೆ ವೇಳೆ ತಾರತಮ್ಯ ಅಥವಾ ನಿಯಮ ಉಲ್ಲಂಘನೆ ಕಂಡುಬಂದರೆ ಅಂತಹ ಕಂಪನಿಗಳ ವಿರುದ್ಧ ಕಾನೂನು ಪ್ರಕಾರ ಕಠಿಣ ಕ್ರಮ ಜರುಗಿಸಬೇಕು ಎಂದು ಕರ್ನಾಟಕ ವಿಕಾಸ ರಂಗ ಆಗ್ರಹಿಸಿದೆ. ----
ಕರ್ನಾಟಕದ ನೆಲದಲ್ಲಿ ಎಲ್ಲರೂ ಗೌರವದಿಂದ ಬದುಕಿ ದುಡಿಯಲಿ ಎಂಬುದೇ ನಮ್ಮ ಆಶಯ. ಆದರೆ, ಹುಟ್ಟಿ ಬೆಳೆದ ನೆಲದಲ್ಲೇ ಕನ್ನಡಿಗರು ಉದ್ಯೋಗಕ್ಕಾಗಿ ಅನ್ಯಾಯ, ಕಡೆಗಣನೆ ಅನುಭವಿಸುವುದನ್ನು ಸಹಿಸಲು ಸಾಧ್ಯವಿಲ್ಲ. ಕನ್ನಡಿಗರ ಉದ್ಯೋಗ ಭಿಕ್ಷೆಯಲ್ಲ, ಅದು ನಮ್ಮ ಹಕ್ಕು ಮತ್ತು ಸ್ವಾಭಿಮಾನದ ಪ್ರಶ್ನೆ. ಸರ್ಕಾರ ನ.1ರಂದು ಕನ್ನಡಿಗರಿಗೆ ಉದ್ಯೋಗ ಖಾತ್ರಿ ಘೋಷಿಸಬೇಕು.
ಕೋಟ್....
- ಪ್ರವೀಣ್ ಕುಮಾರ್ ಶೆಟ್ಟಿ, ರಾಜ್ಯಾಧ್ಯಕ್ಷ, ಕರವೇ.
ಕನ್ನಡಿಗರಿಗೆ ಅನ್ಯಾಯ ಬಗ್ಗೆ
ವರದಿ ಮಾಡಿದ್ದ ‘ಕನ್ನಡಪ್ರಭ’ಖಾಸಗಿ ಕಂಪನಿಗಳಲ್ಲಿ ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸುವ ಕನ್ನಡಿಗರು ರೆಸ್ಯೂಮ್‌ನಲ್ಲಿ ಮಾತೃಭಾಷೆ ಕನ್ನಡ ಎಂದು ಬರೆದಿದ್ದರೆ, ಅಂತಹ ಅಭ್ಯರ್ಥಿಗಳನ್ನು ಕೆಲಸಕ್ಕೆ ತೆಗೆದುಕೊಳ್ಳದೆ ನಿರ್ಲಕ್ಷಿಸುತ್ತಿರುವ ಬಗ್ಗೆ ಅ.24ರಂದು ಕನ್ನಡಪ್ರಭ ಎಲ್ಲರಿಗಿಂತ ಮೊದಲೇ ವರದಿ ಪ್ರಕಟಿಸಿತ್ತು.