ರಾಮನಗರ: ರಾಮನಗರ ನಗರಸಭೆ ಸದಸ್ಯರನ್ನಾಗಿ ರಾಜ್ಯ ಸರ್ಕಾರವು ನಾಲ್ವರನ್ನು ನಾಮ ನಿರ್ದೇಶನ ಮಾಡಿ ಆದೇಶ ಹೊರಡಿಸಿದ ಬೆನ್ನಹಿಂದೆಯೇ ಕಾಂಗ್ರೆಸ್ ಪಕ್ಷದಲ್ಲಿ ನಿಷ್ಠಾವಂತ ಕಾರ್ಯಕರ್ತರಿಗೆ ಅವಕಾಶ ನೀಡುತ್ತಿಲ್ಲ ಎಂಬ ಅಸಮಾಧಾನ ಮತ್ತೊಮ್ಮೆ ಕೇಳಿ ಬಂದಿದೆ.
ಈಗ ನಗರಸಭೆ ನಾಮನಿರ್ದೇಶಿತ ಸದಸ್ಯರಾಗಿ ನೇಮಕಗೊಂಡವರ ಬಗ್ಗೆ ಯಾರಿಗೂ ತಕರಾರಿಲ್ಲ. ಆದರೆ, ಪಕ್ಷಕ್ಕಾಗಿ ಹಗಲಿರುಳು ದುಡಿದ ನಿಷ್ಠಾವಂತ ಕಾರ್ಯಕರ್ತರು ನಾಮಿನಿ ಸದಸ್ಯರಾಗಲು ಆಕಾಂಕ್ಷಿತರಿದ್ದರು. ಅವರನ್ನು ಕಡೆಗಣಿಸಿರುವುದು ಕಾರ್ಯಕರ್ತರಲ್ಲಿ ಬೇಸರ ಮೂಡಿಸಿದೆ.ಈ ಹಿಂದೆ ಲೋಕಸಭಾ ಚುನಾವಣೆಗೂ ಮುನ್ನ ಜಿಲ್ಲೆಯಲ್ಲಿನ ಆರು ಪ್ರಾಧಿಕಾರಗಳ ಅಧ್ಯಕ್ಷ ಸ್ಥಾನಗಳನ್ನು ಒಕ್ಕಲಿಗ ಸಮುದಾಯಕ್ಕೆ ಸೇರಿದ ಮುಖಂಡರನ್ನೇ ನೇಮಕ ಮಾಡಿದರೆ, ಬೇರೆ ಸಮುದಾಯಗಳ ಮುಖಂಡರನ್ನು ಸದಸ್ಯ ಸ್ಥಾನಗಳಿಗೆ ಸೀಮಿತ ಮಾಡಲಾಗಿತ್ತು.
ಇದು ಪಕ್ಷದಲ್ಲಿನ ಪರಿಶಿಷ್ಟ ಜಾತಿ, ಹಿಂದುಳಿದ ವರ್ಗ, ಅಲ್ಪಸಂಖ್ಯಾತರು ಸೇರಿದಂತೆ ಇತರೆ ವರ್ಗಗಳ ಮುಖಂಡರು - ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿತ್ತು. ಅಲ್ಲದೆ, ಆ ಸಮುದಾಯಗಳ ಮುಖಂಡರು ತಮ್ಮ ನಾಯಕರ ವಿರುದ್ಧವೇ ಆಕ್ರೋಶ ಹೊರ ಹಾಕಿದ್ದರು. ಪ್ರಾಧಿಕಾರಗಳ ಅಧ್ಯಕ್ಷರ ನೇಮಕದಲ್ಲಿ ಒಂದೇ ಸಮುದಾಯದವರನ್ನು ಪರಿಗಣಿಸಿದ್ದು ಲೋಕಸಭಾ ಚುನಾವಣೆ ಫಲಿತಾಂಶದ ಮೇಲೂ ಪರಿಣಾಮ ಬೀರಿದ್ದು ಸುಳ್ಳಲ್ಲ.ಅಲ್ಪಸಂಖ್ಯಾತ ಮುಖಂಡರ ಕಡೆಗಣನೆ:
ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳಿಂದ ದೂರ ಸರಿದಿರುವ ಅಲ್ಪಸಂಖ್ಯಾತರಿಗೆ ಕಾಂಗ್ರೆಸ್ ಪಕ್ಷವೇ ಅನಿವಾರ್ಯ. ಯಾವುದೇ ಚುನಾವಣೆಗಳಾಗಲಿ ಅಲ್ಪಸಂಖ್ಯಾತರು ಕಾಂಗ್ರೆಸ್ ಬಿಟ್ಟು ಬೇರೆ ಪಕ್ಷದವರಿಗೆ ಮತ ಹಾಕುವುದಿಲ್ಲ ಎಂಬ ಭಾವನೆ ಕೈ ನಾಯಕರಲ್ಲಿ ಮೂಡಿದೆ.ಅಲ್ಲದೆ, ರಾಮನಗರ ಕ್ಷೇತ್ರದಲ್ಲಿ ಶಾಸಕರಾಗಿರುವ ಇಕ್ಬಾಲ್ ಹುಸೇನ್ ಕೂಡ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದವರು ಎಂಬ ಕಾರಣದಿಂದಾಗಿ ಸ್ಥಳೀಯ ಸಂಸ್ಥೆಗಳ ನಾಮನಿರ್ದೇಶನಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನಿಷ್ಟರಾಗಿ ದುಡಿದಂತಹ ಅಲ್ಪಸಂಖ್ಯಾತ ಮುಖಂಡರು - ಕಾರ್ಯಕರ್ತರಿಗೆ ಅವಕಾಶ ನೀಡುತ್ತಿಲ್ಲ ಎಂಬ ಮಾತುಗಳು ಕಾಂಗ್ರೆಸ್ ಪಾಳಯದಲ್ಲಿಯೇ ಕೇಳಿ ಬರುತ್ತಿದೆ.
ಬಾಕ್ಸ್............ನಾಲ್ವರು ನಾಮನಿರ್ದೇಶಿತ ಸದಸ್ಯರ ನೇಮಕ
ರಾಮನಗರ: ರಾಮನಗರ ನಗರಸಭೆ ಸದಸ್ಯರನ್ನಾಗಿ ರಾಜ್ಯ ಸರ್ಕಾರವು ನಾಲ್ವರನ್ನು ನಾಮನಿರ್ದೇಶನ ಮಾಡಿ ಆದೇಶ ಹೊರಡಿಸಿದೆ. ಕಾಂಗ್ರೆಸ್ ಮುಖಂಡರಾದ ಬೈರೇಗೌಡ, ನಾಗಮ್ಮ, ಗೋವಿಂದರಾಜು ಹಾಗೂ ಅನ್ನು ವಜೀರ್ ಸಾಬ್ ಅವರನ್ನು ನಗರಸಭೆ ನಾಮನಿರ್ದೇಶಿತ ಸದಸ್ಯರಾಗಿ ನೇಮಕಗೊಂಡಿದ್ದಾರೆ.ಕರ್ನಾಟಕ ಪೌರಸಭೆಗಳ ಅಧಿನಿಯಮ 1964ರ ಪ್ರಕರಣ 11 (1)(ಬಿ) ಅಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಈ ನಾಲ್ವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ರಾಮನಗರ ನಗರಸಭೆಗೆ ಸದಸ್ಯರನ್ನಾಗಿ ನಾಮ ನಿರ್ದೇಶನ ಮಾಡಿ ನಗರಾಭಿವೃದ್ಧಿ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ಟಿ. ಮಂಜುನಾಥ್ ಆದೇಶ ಹೊರಡಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ನಾಮನಿರ್ದೇಶಿತ ಸದಸ್ಯ ಬೈರೇಗೌಡ, ನಗರಸಭೆ ನಾಮನಿರ್ದೇಶಿತ ಸದಸ್ಯರನ್ನಾಗಿ ತಮ್ಮನ್ನು ನೇಮಕ ಮಾಡಿಸಿದ ಪಕ್ಷದ ನಾಯಕರಾದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮಾಜಿ ಸಂಸದ ಡಿ.ಕೆ. ಸುರೇಶ್, ಶಾಸಕ ಇಕ್ಬಾಲ್ ಹುಸೇನ್, ಮಾಜಿ ಶಾಸಕರಾದ ಸಿ.ಎಂ. ಲಿಂಗಪ್ಪ, ಕೆ.ರಾಜು, ಜಿಪಂ ಮಾಜಿ ಅಧ್ಯಕ್ಷ ಕೆ. ರಮೇಶ್, ರಾಮನಗರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎ.ಬಿ. ಚೇತನ್ ಕುಮಾರ್, ಯುವ ಕಾಂಗ್ರೆಸ್ ಸಮಿತಿ ಜಿಲ್ಲಾಧ್ಯಕ್ಷ ಗುರುಪ್ರಸಾದ್ ಅವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು.ನಗರಸಭೆಯಲ್ಲಿ ತಮ್ಮದೇ ಪಕ್ಷ ಆಡಳಿತದಲ್ಲಿರುವುದರಿಂದ ನಗರದ ನಾಗರಿಕರಿಗೆ ಮೂಲ ಸೌಕರ್ಯ ಕಲ್ಪಿಸುವ ಜೊತೆಗೆ ಸಮಗ್ರ ಅಭಿವೃದ್ಧಿಗೆ ಸಹಕಾರಿಯಾಗಲಿದೆ. ಶೀಘ್ರದಲ್ಲಿ ಆಯ್ಕೆಯಾಗಲಿರುವ ಅಧ್ಯಕ್ಷ - ಉಪಾಧ್ಯಕ್ಷರಿಗೆ ಸಂಪೂರ್ಣ ಸಹಕಾರ ನೀಡಿ ನಗರದ ಅಭಿವೃದ್ಧಿಗೆ ಶ್ರಮಿಸುವುದಾಗಿ ಬೈರೇಗೌಡ ಹೇಳಿದರು.
ನಾಮನಿರ್ದೇಶಿತ ಸದಸ್ಯರಾದ ಬೈರೇಗೌಡ, ನಾಗಮ್ಮ, ಗೋವಿಂದರಾಜು ಹಾಗೂ ಅನ್ನು ವಜೀರ್ ಸಾಬ್ ಅವರನ್ನು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಅಭಿನಂದಿಸಿದ್ದಾರೆ.5ಕೆಆರ್ ಎಂಎನ್ 4,5,6,7.ಜೆಪಿಜಿ
4.ಬೈರೇಗೌಡ5.ಗೋವಿಂದರಾಜು
6.ಅನ್ನು ವಜೀರ್ ಸಾಬ್7.ನಾಗಮ್ಮ
8.ನಗರಸಭೆ