ನೀರಾವರಿ ವಿಚಾರದಲ್ಲಿ ಬಯಲುಸೀಮೆಗೆ ಅನ್ಯಾಯ

KannadaprabhaNewsNetwork |  
Published : Dec 02, 2023, 12:45 AM IST
ಎತ್ತಿನಹೊಳೆ ಯೋಜನೆ ಅನುಷ್ಠಾನ ಕುರಿತಂತೆ ಸದನದಲ್ಲಿ ಗಮನ ಸೆಳೆಯಲು ಒತ್ತಾಯಿಸಿ ಶಾಸಕ ಧೀರಜ್ ಮುನಿರಾಜ್ ಅವರಿಗೆ ಮನವಿ ಸಲ್ಲಿಸಲಾಯಿತು. | Kannada Prabha

ಸಾರಾಂಶ

ದೊಡ್ಡಬಳ್ಳಾಪುರ: ಬೆಳಗಾವಿಯಲ್ಲಿ ನಡೆಯಲಿರುವ ರಾಜ್ಯ ವಿಧಾನಸಭೆಯ ಚಳಿಗಾಲದ ಅಧಿವೇಶನದಲ್ಲಿ ಬಯಲು ಸೀಮೆ ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ನೀರುಣಿಸುವ ಉದ್ದೇಶದ ನೀರಾವರಿ ಯೋಜನೆಗಳ ಅನುಷ್ಠಾನದ ಕುರಿತು ಸರ್ಕಾರದ ಗಮನ ಸೆಳೆಯುವಂತೆ ಶಾಶ್ವತ ನೀರಾವರಿ ಹೋರಾಟ ಸಮಿತಿಯಿಂದ ಶಾಸಕ ಧೀರಜ್‌ ಮುನಿರಾಜು ಅವರಿಗೆ ಮನವಿ ಸಲ್ಲಿಸಲಾಯಿತು.

ದೊಡ್ಡಬಳ್ಳಾಪುರ: ಬೆಳಗಾವಿಯಲ್ಲಿ ನಡೆಯಲಿರುವ ರಾಜ್ಯ ವಿಧಾನಸಭೆಯ ಚಳಿಗಾಲದ ಅಧಿವೇಶನದಲ್ಲಿ ಬಯಲು ಸೀಮೆ ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ನೀರುಣಿಸುವ ಉದ್ದೇಶದ ನೀರಾವರಿ ಯೋಜನೆಗಳ ಅನುಷ್ಠಾನದ ಕುರಿತು ಸರ್ಕಾರದ ಗಮನ ಸೆಳೆಯುವಂತೆ ಶಾಶ್ವತ ನೀರಾವರಿ ಹೋರಾಟ ಸಮಿತಿಯಿಂದ ಶಾಸಕ ಧೀರಜ್‌ ಮುನಿರಾಜು ಅವರಿಗೆ ಮನವಿ ಸಲ್ಲಿಸಲಾಯಿತು.

ನೀರಾವರಿ ಯೋಜನೆಗಳ ಅನುಷ್ಠಾನದಲ್ಲಿ ಬಯಲು ಸೀಮೆ ಜಿಲ್ಲೆಗಳಿಗೆ ವಂಚನೆಯಾಗುತ್ತಲೇ ಬರುತ್ತಿದೆ. ನ್ಯಾಯಬದ್ಧವಾಗಿ ದೊರೆಯಬೇಕಿರುವ ಯಾವುದೇ ನೀರಾವರಿ ಯೋಜನೆಗಳು ಇಲ್ಲಿನ ಜನರಿಗೆ ಲಭ್ಯವಾಗಿಲ್ಲ. ಈ ಭಾಗದಿಂದ ಆಯ್ಕೆಯಾಗಿ ಹೋಗಿರುವ ಚುನಾಯಿತ ಜನಪ್ರತಿನಿಧಿಗಳಲ್ಲಿನ ಇಚ್ಚಾಶಕ್ತಿ ಕೊರತೆಯಿಂದಾಗಿಯೇ ಬಯಲು ಸೀಮೆ ಜಿಲ್ಲೆಗಳು ನೀರಾವರಿ ಯೋಜನೆಗಳಿಂದ ವಂಚನೆಗೆ ಒಳಗಾಗಲು ಕಾರಣವಾಗಿದೆ ಎಂದು ಶಾಶ್ವತ ನೀರಾವರಿ ಹೋರಾಟ ಸಮಿತಿಯ ಮುಖಂಡರು ಆರೋಪಿಸಿದರು.

ಇನ್ನಾದರೂ ಈ ತಾರತಮ್ಯವನ್ನು ಸರಿಪಡಿಸಲು ಪಕ್ಷಾತೀತವಾಗಿ ಎಲ್ಲರೂ ಪ್ರಾಮಾಣಿಕ ಪ್ರಯತ್ನ ನಡೆಸಬೇಕು. ಈ ದಿಸೆಯಲ್ಲಿ ಬಯಲು ಸೀಮೆ ಜಿಲ್ಲೆಗಳ ಎಲ್ಲಾ ಚುನಾಯಿತ ಜನಪ್ರತಿನಿಧಿಗಳು ಈ ಭಾಗದ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ನೀರಾವರಿ ಯೋಜನೆಗಳ ತುರ್ತು ಅನುಷ್ಟಾನಕ್ಕಾಗಿ ಒಮ್ಮತದಿಂದ ಪ್ರಯತ್ನಿಸಬೇಕು ಎಂದು ಮನವಿ ಮಾಡಿದರು.

ಮುಖಂಡರಾದ ಕೆ.ಸುಲೋಚನಮ್ಮ, ಸಂಜೀವ್‌ನಾಯ್ಕ, ಡಿ.ಪಿ.ಅಂಜನೇಯ, ಪರಮೇಶ್, ಮುತ್ತೇಗೌಡ, ತಿಮ್ಮಣ್ಣ,ವಸಂತ್‌, ರೋಹಿತ್, ಮುನಿಪಾಪಯ್ಯ ಮತ್ತಿತರರು ಮನವಿ ಸಲ್ಲಿಕೆಯ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದರು. ಬಾಕ್ಸ್‌...........

ಪ್ರಾಮಾಣಿಕ ಪ್ರಯತ್ನ: ಶಾಸಕರ ಭರವಸೆ

ಮನವಿ ಸ್ವೀಕರಿಸಿ ಮಾತನಾಡಿದ ಶಾಸಕ ಧೀರಜ್‌ ಮುನಿರಾಜು, ಬಯಲು ಸೀಮೆ ಜಿಲ್ಲೆಗಳಿಗೆ ಎತ್ತಿನಹೊಳೆ ಸೇರಿದಂತೆ ಇತರೆ ಯೋಜನೆ ಮೂಲಕ ನೀರು ಒದಗಿಸಲು ಪ್ರಯತ್ನ ನಡೆಸಲಾಗುತ್ತಿದೆ. ಸರ್ಕಾರದ ಮುಂದೆ ಇರುವ ನೀರಾವರಿ ಯೋಜನೆಗಳನ್ನು ತ್ವರಿತ ಅನುಷ್ಠಾನಗೊಳಿಸಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು ಎಂದರು.ಫೋಟೋ-

1ಕೆಡಿಬಿಪಿ2- ಎತ್ತಿನಹೊಳೆ ಯೋಜನೆ ಅನುಷ್ಠಾನ ಕುರಿತಂತೆ ಸದನದಲ್ಲಿ ಗಮನ ಸೆಳೆಯಲು ಒತ್ತಾಯಿಸಿ ಶಾಸಕ ಧೀರಜ್ ಮುನಿರಾಜ್ ಅವರಿಗೆ ಮನವಿ ಸಲ್ಲಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ