ಸರ್ಕಾರಿ ಜಾಗದಲ್ಲಿ ವಾಸಿಸುತ್ತಿರುವ ಬಡವರಿಗೆ ಅನ್ಯಾಯ: ವಿಶ್ವೇಶ್ವರ ಹೆಗಡೆ ಕಾಗೇರಿ

KannadaprabhaNewsNetwork |  
Published : Sep 22, 2026, 02:15 AM IST
ಪ್ರತಿಭಟನಾ ಸಭೆಯಲ್ಲಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತನಾಡಿದರು. | Kannada Prabha

ಸಾರಾಂಶ

ತಲೆತಲಾಂತರಗಳಿಂದ ಇಂತಹ ಸ್ಥಳಗಳಲ್ಲಿ ವಾಸಿಸುತ್ತಿರುವ ಸಾವಿರಾರು ಕುಟುಂಬಗಳ ವಸತಿ ಹಕ್ಕು ಹಾಗೂ ಆಸ್ತಿಗೆ ಸಂಬಂಧಿಸಿದ ಸ್ಥಳೀಯ ದಾಖಲೆಗಳ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ ಇದೆ.

ಭಟ್ಕಳ: ಅರಣ್ಯ ಭೂಮಿ, ಬೆಟ್ಟ ಭೂಮಿ, ಸರ್ಕಾರಿ ಭೂಮಿ, ಗ್ರಾಂವ್ ಠಾಣಾ ಮುಂತಾದ ಸ್ಥಳಗಳಲ್ಲಿರುವ ಕಟ್ಟಡಗಳ ಆಸ್ತಿ ತೆರಿಗೆ ಸ್ವೀಕಾರಕ್ಕೆ ಸಂಬಂಧಿಸಿದ ಮಾರ್ಗಸೂಚಿಯನ್ನು ಹಿಂಪಡೆಯುವಂತೆ ಆಗ್ರಹಿಸಿ ಭಟ್ಕಳ ಬಿಜೆಪಿ ಮಂಡಳದ ವತಿಯಿಂದ ಶಿರಾಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ರತಿಭಟನೆ ನಡೆಸಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ನೇತೃತ್ವದಲ್ಲಿ ಶಿರಾಲಿ ಗ್ರಾಮ ಪಂಚಾಯಿತಿ ಪಿಡಿಒಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಪ್ರತಿಭಟನಾಕಾರರನ್ನು ಉದ್ದೇಶಿಸಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತನಾಡಿ, ಅರಣ್ಯ ಭೂಮಿ, ಸರ್ಕಾರದ ಹಾಡಿ ಜಾಗ, ಸರ್ಕಾರಿ ಭೂಮಿ ಇವುಗಳಲ್ಲಿ ಮನೆ ಕಟ್ಟಿಕೊಂಡು ಉಳಿದಿರುವವರ ಮನೆಗಳಿಗೆ ಆಸ್ತಿ ತೆರಿಗೆಯನ್ನು ತೆಗೆಯುವಂತೆ ಈಗಿನ ಕಾಂಗ್ರೆಸ್ ಸರ್ಕಾರ ಆದೇಶ ನೀಡಿದೆ.

ಅನಾದಿ ಕಾಲದಿಂದ ವಾಸಿಸುತ್ತಿರುವ ಬಡವರ ಮನೆಗಳಿಗೆ ತೆರಿಗೆಯನ್ನು ಹಾಕದಂತೆ ಈ ಭಂಡ ಕಾಂಗ್ರೆಸ್ ಸರ್ಕಾರ ತೆಗೆದು ಬಡವರನ್ನು ಬೀದಿಗೆ ಹಾಕುವ ಆದೇಶ ಹೊರಡಿಸಿದ್ದಾರೆ. ಆದ್ದರಿಂದ ನಮ್ಮ ಪಕ್ಷ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿ ಆದೇಶವನ್ನು ಹಿಂಪಡೆಯುವವರೆಗೆ ಹೋರಾಟ ನಡೆಸಲಿದ್ದೇವೆ.

ಈಗಿನ ಕಾಂಗ್ರೆಸ್ ಸರ್ಕಾರ ಅ. ೧೩ರಂದು ಆದೇಶ ಹೊರಡಿಸಿದೆ. ಇದರಿಂದ ಅರಣ್ಯ ಭೂಮಿ, ಹಾಡಿ ಜಾಗ ಹಾಗೂ ಸರ್ಕಾರಿ ಜಾಗದಲ್ಲಿ ವಾಸಿಸುತ್ತಿರುವ ಬಡವರಿಗೆ ಇದರಿಂದ ಅನ್ಯಾಯವಾಗುತ್ತಿದೆ. ಮನೆ ತೆರಿಗೆ ತೆಗೆದು ಹಾಕುವುದರಿಂದ ಬಡವರು ವಿವಿಧ ಸೌಲಭ್ಯಗಳಿಂದ ವಂಚಿತರಾಗುತ್ತಾರೆ.

ಕಸ್ತೂರಿ ರಂಗನ್ ವರದಿಯನ್ನು ಆಗಿನ ಕೇಂದ್ರದಲ್ಲಿರುವ ಕಾಂಗ್ರೆಸ್ ಸರ್ಕಾರ ಮಾಡಿ ಬಡವರಿಗೆ ಒಕ್ಕಲೆಬ್ಬಿಸುವ ಹುನ್ನಾರ ನಡೆಸುತ್ತಿದೆ. ತಲೆತಲಾಂತರಗಳಿಂದ ಇಂತಹ ಸ್ಥಳಗಳಲ್ಲಿ ವಾಸಿಸುತ್ತಿರುವ ಸಾವಿರಾರು ಕುಟುಂಬಗಳ ವಸತಿ ಹಕ್ಕು ಹಾಗೂ ಆಸ್ತಿಗೆ ಸಂಬಂಧಿಸಿದ ಸ್ಥಳೀಯ ದಾಖಲೆಗಳ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ ಇದೆ. ಯಾವುದೆ ಕಾರಣಕ್ಕೂ ಬಡವರಿಗೆ ಅವರ ಮನೆಗೆ ತೆರಿಗೆ ಬೀಳುವವರೆಗೆ ಹೋರಾಟ ನಡೆಸಲಿದ್ದೇವೆ ಎಂದರು.ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಹಾಗೂ ನಮ್ಮ ಮನೆ ನಮ್ಮ ಹಕ್ಕು ಆಂದೋಲನದ ತಾಲೂಕು ಸಂಚಾಲಕ ಶ್ರೀಕಾಂತ ನಾಯ್ಕ ಮಾತನಾಡಿ, ಜಿಲ್ಲೆಯಲ್ಲಿ ಅತಿ ಹೆಚ್ಚಿನವರು ಅರಣ್ಯ ಜಾಗ, ಸರ್ಕಾರದ ಹಾಡಿ ಜಾಗದಲ್ಲಿ ವಾಸಿಸುತ್ತಿದ್ದಾರೆ. ಈಗಿನ ಕಾಂಗ್ರೆಸ್ ಸರ್ಕಾರದ ತೆರಿಗೆ ಪಾವತಿ ಹಿಂಪಡೆಯುವ ಆದೇಶದಿಂದ ಬಡವರು ತೀವ್ರ ತೊಂದರೆ ಅನುಭವಿಸುವಂತಾಗಿದೆ. ತಾಲೂಕಿನ ೧೬ ಪಂಚಾಯಿತಿಗಳಲ್ಲಿ ಈ ಆದೇಶ ಹಿಪಡೆಯುವಂತೆ ಆಗ್ರಹಿಸಿ ಪ್ರತಿಭಟನೆ ಮಾಡಲಿದ್ದೇವೆ ಎಂದರು.ಕಾರ್ಯಕ್ರಮದಲ್ಲಿ ಬಿಜೆಪಿ ಮಂಡಲಾಧ್ಯಕ್ಷ ಲಕ್ಷ್ಮೀ ನಾರಾಯಣ ನಾಯ್ಕ, ಪ್ರಮುಖರಾದ ಭಾಸ್ಕರ ದೈಮನೆ, ರಾಜೇಶ ನಾಯ್ಕ, ಸೇರಿದಂತೆ ನೂರಾರು ಮಂದಿ ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮೋದಿ ಜನ್ಮದಿನ: ನಾಳೆ ಬೃಹತ್ ರಕ್ತದಾನ ಶಿಬಿರ
ಸಮಾಜಮುಖಿ ಚಿಂತನೆ, ಅಭಿವೃದ್ಧಿಗೆ ಸದಾಕಾಲ ಮನ್ನಣೆ: ಸಂಸದ ಬೊಮ್ಮಾಯಿ