ಮುಂಬರುವ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳಲ್ಲಿ ಒಳಮೀಸಲಾತಿ ಕಡ್ಡಾಯವಾಗಿ ಜಾರಿಗೊಳಿಸಬೇಕು. ಇಲ್ಲದಿದ್ದರೆ ಕಾನೂನು ಹಾಗೂ ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ರಾಜ್ಯ ಸಾಮಾಜಿಕ ನ್ಯಾಯ ಪರ ವಕೀಲರ ವೇದಿಕೆ ಅಧ್ಯಕ್ಷ ಎಸ್. ಅರುಣ್ಕುಮಾರ್ ಅವರು ಸರ್ಕಾರವನ್ನು ಒತ್ತಾಯಿಸಿದರು.
ರಾಜ್ಯ ಸಾಮಾಜಿಕ ನ್ಯಾಯ ಪರ ವಕೀಲರ ವೇದಿಕೆ ಅಧ್ಯಕ್ಷ ಎಸ್. ಅರುಣ್ಕುಮಾರ್ ಸರ್ಕಾರಕ್ಕೆ ಎಚ್ಚರಿಕೆ
ಒಳ ಮೀಸಲು ಜಾರಿ ಮಾಡದಿದ್ದರೆ ಕಾನೂನು, ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ಹೇಳಿಕೆ
ಕನ್ನಡಪ್ರಭ ವಾರ್ತೆ ಚಾಮರಾಜನಗರ
ಮುಂಬರುವ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳಲ್ಲಿ ಒಳಮೀಸಲಾತಿ ಕಡ್ಡಾಯವಾಗಿ ಜಾರಿಗೊಳಿಸಬೇಕು. ಇಲ್ಲದಿದ್ದರೆ ಕಾನೂನು ಹಾಗೂ ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ರಾಜ್ಯ ಸಾಮಾಜಿಕ ನ್ಯಾಯ ಪರ ವಕೀಲರ ವೇದಿಕೆ ಅಧ್ಯಕ್ಷ ಎಸ್. ಅರುಣ್ಕುಮಾರ್ ಅವರು ಸರ್ಕಾರವನ್ನು ಒತ್ತಾಯಿಸಿದರು.
ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಭಾಂಗಣದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗಳಿಗೆ ರಾಜ್ಯ ಸರ್ಕಾರವು ಇತ್ತೀಚೆಗಷ್ಟೇ ವರ್ಗವಾರು ಮೀಸಲಾತಿ ಪಟ್ಟಿ ಬಿಡುಗಡೆ ಮಾಡಿದೆ. ಇಲ್ಲಿ ಒಳಮೀಸಲಾತಿ ಜಾರಿಗೊಳಿಸಿ ಮಾದಿಗ ಜನಾಂಗಕ್ಕೆ ನ್ಯಾಯ ಸಿಗುವಂಂತೆ ಮಾಡಬೇಕು ಎಂದು ಅಗ್ರಹಿಸಿದರು,
ಸಮಾದಿಗ ಸೇರಿದಂತೆ ಪರಿಶಿಷ್ಟ ಜಾತಿ ಯುವಕರು ರಾಜಕೀಯವಾಗಿ ಬೆಳೆಯಲು ಒಳಮೀಸಲಾತಿ ಅಗತ್ಯವಾಗಿದೆ. ಆದ್ದರಿಂದ, ರಾಜ್ಯಾದ್ಯಂತ ಎಲ್ಲಾ 31 ಜಿಲ್ಲೆಗಳ ಸಮಾಜದ ವಕೀಲರು ಮತ್ತು ಹೋರಾಟಗಾರರು ಅಕ್ಟೋಬರ್ 19ರ ಒಳಗಾಗಿ ಸಂಬಂಧಪಟ್ಟ ಅಧಿಕಾರಿಗಳಿಗೆ ಒಳಮೀಸಲಾತಿ ಜಾರಿಗೆ ತರಬೇಕು ಎಂದು ಒತ್ತಾಯಿಸಿ ತಕರಾರು ಅರ್ಜಿ ಸಲ್ಲಿಸಲಿದ್ದಾರೆ ಎಂದು ಹೇಳಿದರು.
ಸರ್ಕಾರ ಮೀಸಲಾತಿ ಅಂತಿಮ ಪಟ್ಟಿ ಹೊರಡಿಸುವ ಮುನ್ನ ಒಳಮೀಸಲಾತಿಯನ್ನು ಅದರಲ್ಲಿ ಜೋಡಿಸಿಯೇ ಪ್ರಕಟಿಸಬೇಕು ಎಂದು ಆಗ್ರಹಿಸಿದರು,
ಕಾಂಗ್ರೆಸ್ ಸರ್ಕಾರ ಒಳಮೀಸಲಾತಿಯನ್ನು ಸಮರ್ಪಕವಾಗಿ ಜಾರಿಮಾಡದೆ ರಾಜಕೀಯ ಒತ್ತಡಗಳಿಗೆ ಮಣಿದು ಮಾದಿಗ ಮತ್ತು ಇತರೆ ಸಮುದಾಯಗಳಿಗೆ ಅನ್ಯಾಯ ಮಾಡುತ್ತಿದೆ. ಇದಕ್ಕೆ ಸಿದ್ದರಾಮಯ್ಯ ಹೇಳಿದ ಹೇಳಿಕೆಗಳೇ ಗೊಂದಲ ಮೂಡಿಸುತ್ತಿವೆಂದು ಆರೋಪಿಸಿದರು.
ಮುಂಬರುವ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳಲ್ಲಿ ಒಳಮೀಸಲಾತಿಯನ್ನು ಜಾರಿಗೆತಂದು ಮಾದಿಗ ಸಮಾಜಕ್ಕೆ ನ್ಯಾಯಯುತ ರಾಜಕೀಯ ಪ್ರಾತಿನಿಧ್ಯ ನೀಡಬೇಕು. ಒಳಮೀಸಲಾತಿ ಜಾರಿಗೆ ತರುವ ಕುರಿತು ಅ.19ರೊಳಗೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ರಾಜ್ಯದಾದ್ಯಂತ ತೀವ್ರ ಸ್ವರೂಪದ ಕಾನೂನು ಹೋರಾಟದ ಜೊತೆಗೆ ಬೀದಿಗಿಳಿದು ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ಚಾಮರಾಜನಗರ ಜಿಲ್ಲೆಯ 28 ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಲ್ಲಿ 8ಎಸ್ಸಿಗೆ ಮೀಸಲಾಗಿದ್ದು, ಅದರಲ್ಲಿ 2ನ್ನು ಮಾದಿಗ ಸಮುದಾಯಕ್ಕೆ ಬಿಟ್ಟುಕೊಡಬೇಕು, ಅದೇ ರೀತಿ ತಾ.ಪಂ.ನ 83 ಕ್ಷೇತ್ರಗಳಲ್ಲೂ ಒಳಮೀಸಲಾತಿ ಜಾರಿಗೊಳಿಸಬೇಕು. ಇಲ್ಲದಿದ್ದರೆ ಶಾಸಕರ ಮನೆ ಮುಂದೆ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.
ಮಾದಿಗ ಮತ್ತು ಅದರ ಉಪಸಮುದಾಯಗಳಿಗೆ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸೂಕ್ತ ರಾಜಕೀಯ ಪ್ರಾತಿನಿಧ್ಯ ಸಿಗುತ್ತಿಲ್ಲ. ಒಳಮೀಸಲಾತಿಯನ್ನು ಅನ್ವಯಿಸದೆಯೇ ಚುನಾವಣೆ ನಡೆಸಲು ಮುಂದಾದರೆ ಮುಂಬರುವ ಚುನಾವಣೆಗಳಲ್ಲಿ ಇಡೀ ಮಾದಿಗ ಸಮಾಜವು ಸರ್ಕಾರಕ್ಕೆ ತಕ್ಕ ಪಾಠ ಕಲಿಸಲಿದೆ ಮತ್ತು ಉಗ್ರ ಹೋರಾಟ ರೂಪಿಸಲಿದೆ ಎಂದು ಎಚ್ಚರಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ಎಂ.ಆರ್. ಸುರೇಂದ್ರಕುಮಾರ್, ಉಪಾಧ್ಯಕ್ಷ ರಾದದಾಸಯ್ಯ, ಮಾಳಪ್ಪ.ಕುರ್ಕಿ, ಲಕ್ಷ್ಮಿನಾರಾಯಣ, ಮಲ್ಲು ಇದ್ದರು.---------
15ಸಿಎಚ್ಎನ್51
ಚಾಮರಾಜನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಭಾಂಗಣದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಸಾಮಾಜಿಕ ನ್ಯಾಯ ಪರ ವಕೀಲರ ವೇದಿಕೆ ಅಧ್ಯಕ್ಷ ಎಸ್. ಅರುಣ್ಕುಮಾರ್ ಮಾತನಾಡಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.