ಕನ್ನಡಪ್ರಭ ವಾರ್ತೆ ಸೋಮವಾರಪೇಟೆ
ಇನ್ನರ್ ವೀಲ್ ಆಫ್ ಸೋಮವಾರಪೇಟೆ ಗೋಲ್ಡ್ ಪದಗ್ರಹಣ ಕಾರ್ಯಕ್ರಮ ಬುಧವಾರ ಚೌಡ್ಲು ಕೃಷಿ ಪತ್ತಿನ ಸಹಕಾರ ಸಂಘದ ಸಮುದಾಯ ಭವನದಲ್ಲಿ ನಡೆಯಿತು.ಜಿಲ್ಲಾ ಸಂಯೋಜಕಿ ಪೂರ್ಣಿಮಾ ರವಿ ನೂತನ ಸಾಲಿನ ಅಧ್ಯಕ್ಷೆ ಸಂಗೀತಾ ದಿನೇಶ್ ಮತ್ತು ತಂಡದವರಿಗೆ ಪದಗ್ರಹಣ ನೆರವೇರಿಸಿ ಮಾತನಾಡಿ, ಕಳೆದ 101 ವರ್ಷಗಳಿಂದ ಸಂಸ್ಥೆ ಹತ್ತು ಹಲವು ಸಮಾಜಮುಖಿ ಕೆಲಸಗಳನ್ನು ಮಾಡಿಕೊಂಡು ಬರುತ್ತಿದೆ ಎಂದರು.
ಮಳೆ ನೀರು ಸಂಗ್ರಹ, ಶಿಕ್ಷಣ, ಸ್ಯಾನಿಟೇಷನ್, ಆರೋಗ್ಯ ಸೇರಿದಂತೆ ಹಲವು ಯೋಜನೆಗಳನ್ನು ಕೇಂದ್ರ ಸಮಿತಿ ಹಮ್ಮಿಕೊಂಡಿದ್ದು, ಎಲ್ಲ ಸಂಸ್ಥೆಗಳು ಯೋಜನೆಗಳನ್ನು ಈಡೇರಿಸುವ ಜವಾಬ್ದಾರಿ ಹೊಂದಿವೆ. ಗ್ರಾಮಗಳನ್ನು ದತ್ತು ತೆಗೆದುಕೊಳ್ಳುವ ಮೂಲಕ ಅವುಗಳಿಗೆ ಮೂಲಭೂತ ಸೌಕರ್ಯ ಸೇರಿದಂತೆ ಗ್ರಾಮದ ಅಭಿವೃದ್ಧಿಗೆ ಶ್ರಮಿಸಬೇಕು. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸದಸ್ಯರನ್ನು ಸಂಸ್ಥೆಗೆ ಸೇರ್ಪಡೆಗೊಳಿಸಿಕೊಳ್ಳುವ ಮೂಲಕ ಸಾಮಾಜಿಕ ಕಾರ್ಯ ಮಾಡಬೇಕೆಂದರು.ನೂತನ ಸಾಲಿನ ಅಧ್ಯಕ್ಷೆ ಸಂಗೀತಾ ದಿನೇಶ್ ಮಾತನಾಡಿ, ಯಾವುದೇ ಕೆಲಸಗಳನ್ನು ಇಷ್ಟಪಟ್ಟು ಮಾಡಿದಲ್ಲಿ ಮಾತ್ರ ಯೋಜನೆಗಳು ಯಶಸ್ವಿಯಾಗುವುದು. ಮನುಷ್ಯ ನಿಸ್ವಾರ್ಥ ಸೇವೆ ಮಾಡಿದಲ್ಲಿ ಅವರು ಉನ್ನತ ಸ್ಥಾನಕ್ಕೆ ತಲುಪಲು ಸಾಧ್ಯ. ಮುಂದಿನ ದಿನಗಳಲ್ಲಿ ಕುಟುಂಬದ ಸಹಕಾರದೊಂದಿಗೆ ಸಂಸ್ಥೆಯ ಯೋಜನೆಗಳನ್ನು ಸಫಲ ಮಾಡುವುದಾಗಿ ಹೇಳಿದರು
ಕಾರ್ಯದರ್ಶಿ ಸುಮಲತಾ ಪುರುಷೋತ್ತಮ್, ಐಪಿಪಿ ಸಂಧ್ಯಾರಾಣಿ, ಉಪಾಧ್ಯಕ್ಷೆ ತನ್ಮಯಿ ಪ್ರವೀಣ್, ಖಜಾಂಚಿ ಸೌಮ್ಯ ಸತೀಶ್, ಪದಾಧಿಕಾರಿಗಳಾದ ಅಮೃತಾ ಕಿರಣ್, ಸವಿತಾ ರಾಜು, ಲತಾ ನಾಗೇಶ್, ಲತಾ ಮಂಜು, ಆಶಾ ಮೋಹನ್ ಅಧಿಕಾರ ಸ್ವೀಕರಿಸಿದರು. ಹಿಂದಿನ ಸಾಲಿನ ಅಧ್ಯಕ್ಷೆ ಸಂದ್ಯಾರಾಣಿ ಇದ್ದರು.ಮೈಸೂರಿನ ಇನ್ನರ್ ವೀಲ್ ಸಂಸ್ಥೆಯ ನಂದಿನಿ ಪ್ರಭು ಮತ್ತು ಸುಮತಿ ಅವರನ್ನು ಸನ್ಮಾನಿಸಲಾಯಿತು. ಅಂಗವಿಕಲ ವಿದ್ಯಾರ್ಥಿ ಮತ್ತು ಹೃದಯ ರೋಗದಿಂದ ಬಳಲುತ್ತಿದ್ದ ವಿದ್ಯಾರ್ಥಿಗೆ ಸಹಾಯಧನ ನೀಡಲಾಯಿತು.