ಸೈಬರ್ ಫೊರೆನ್ಸಿಕ್ಸ್: ಡಿಜಿಟಲ್ ಡಿಟೆಕ್ಟಿವ್ ವರ್ಕ್’ ಕುರಿತ ರಾಷ್ಟ್ರಮಟ್ಟದ ಕಾರ್ಯಾಗಾರ
ಸಮಾಜದಲ್ಲಿ ಎಲ್ಲವನ್ನೂ ಅಳೆದು ತೂಗಿ ನೋಡಬೇಕು. ಸೈಬರ್ ಮಾಧ್ಯಮವನ್ನು ಸಕಾರಾತ್ಮಕವಾಗಿ ಬಳಕೆಮಾಡುವ ಬದಲು ನಕಾರಾತ್ಮಕವಾಗಿ ಬಳಸಿ ಅಭದ್ರತೆಯನ್ನು ಸೃಷ್ಟಿಸುತ್ತಿರುವ ಸೈಬರ್ ಅಪರಾಧಿಗಳ ಬಗ್ಗೆ ಎಚ್ಚರ ವಹಿಸಬೇಕು ಎಂದು ತುಮಕೂರು ವಿ.ವಿ. ಕುಲಪತಿ ಪ್ರೊ.ಎಂ. ವೆಂಕಟೇಶ್ವರಲು ತಿಳಿಸಿದರು.
ವಿಶ್ವವಿದ್ಯಾನಿಲಯದ ವಿಜ್ಞಾನ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗವು ಮಂಗಳವಾರ ಆಯೋಜಿಸಿದ್ದ ಸೈಬರ್ ಫೊರೆನ್ಸಿಕ್ಸ್: ಡಿಜಿಟಲ್ ಡಿಟೆಕ್ಟಿವ್ ವರ್ಕ್ ಕುರಿತ ರಾಷ್ಟ್ರಮಟ್ಟದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.ಹ್ಯಾಕರ್ಸ್‌ಗಳ ಸಂಖ್ಯೆ ಹೆಚ್ಚಾಗಿ ಪ್ರಪಂಚದ ಯಾವ ಮೂಲೆಯಿಂದಲಾದರೂ ನಮ್ಮ ವೈಯಕ್ತಿಕ ಮಾಹಿತಿಯನ್ನು, ಖಾಸಗಿ ಬದುಕನ್ನು ತಮ್ಮ ವಶಕ್ಕೆ ಪಡೆಯುವಷ್ಟರ ಮಟ್ಟಿಗೆ ತಂತ್ರಜ್ಞಾನ ಬೆಳೆದಿದೆ. ಸ್ಪ್ಯಾಮ್ ಕರೆಗಳನ್ನು ಸ್ವೀಕರಿಸಿ ಬ್ಯಾಂಕ್ ಮಾಹಿತಿ ನೀಡುವುದು, ಅನಗತ್ಯವಾಗಿ ಒಟಿಪಿ ಹಂಚಿಕೊಳ್ಳುವುದು, ಸಾಮಾಜಿಕ ಜಾಲಾತಾಣಗಳಲ್ಲಿ ಖಾಸಗಿ ವಿಚಾರಗಳನ್ನು ಹಂಚಿಕೊಳ್ಳುವುದು ಸೈಬರ್ ಅಪರಾಧಿಗಳಿಗೆ ನಾವೇ ಶರಣಾದಂತೆ ಎಂದು ತಿಳಿಸಿದರು.
ವಿ.ವಿ. ಪರೀಕ್ಷಾಂಗ ಕುಲಸಚಿವ ಪ್ರೊ. ಪ್ರಸನ್ನಕುಮಾರ್ ಕೆ., ಬೆಂಗಳೂರು ವಿವಿಯ ಕಂಪ್ಯೂಟರ್ ಸೈನ್ಸ್ ವಿಭಾಗದ ಅಧ್ಯಾಪಕ ಪ್ರೊ.ಎಂ. ಹನುಮಂತಪ್ಪ, ವಿ.ವಿ. ವಿಜ್ಞಾನ ಕಾಲೇಜಿನ ಪ್ರಾಂಶುಪಾಲ ಡಾ. ಪ್ರಕಾಶ್ ಎಂ.ಶೇಟ್, ವಿಜ್ಞಾನ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥೆ ಡಾ.ಆರ್. ರಮಣಿ, ಸಹ ಪ್ರಾಧ್ಯಾಪಕ ಡಾ.ಬಿ.ಎಲ್. ಮುಕುಂದಪ್ಪ, ಎಸ್.ಐ.ಟಿ. ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದ ಸಹ ಪ್ರಾಧ್ಯಾಪಕಿ ಡಾ. ಆಶಾಗೌಡ ಕರೇಗೌಡ, ಮಲ್ನಾಡ್ ಎಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದ ಸಹಾಯಕ ಪ್ರಾಧ್ಯಾಪಕ ರವಿಕುಮಾರ್ ಡಿ., ತಿಪಟೂರಿನ ಸರ್ಕಾರಿ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದ ಡಾ. ಪ್ರಕಾಶ್ ಬಿ.ಆರ್ ಭಾಗವಹಿಸಿದ್ದರು.
ಫೋಟೊ: ಸೈಬರ್ ಫೊರೆನ್ಸಿಕ್ಸ್: ಡಿಜಿಟಲ್ ಡಿಟೆಕ್ಟಿವ್ ವರ್ಕ್ ಕುರಿತ ರಾಷ್ಟ್ರಮಟ್ಟದ ಕಾರ್ಯಾಗಾರಕ್ಕೆ ತುಮಕೂರು ವಿ.ವಿಯ ಕುಲಪತಿ ಪ್ರೊ.ಎಂ. ವೆಂಕಟೇಶ್ವರಲು ಚಾಲನೆ ನೀಡಿದರು. ಜತೆಗೆ ಕುಲಸಚಿವೆ ನಾಹಿದ ಜಮ್ ಜಮ್, ಪರೀಕ್ಷಾಂಗ ಕುಲಸಚಿವ ಪ್ರೊ. ಪ್ರಸನ್ನಕುಮಾರ್ ಕೆ. ಮತ್ತಿತರರು ಇದ್ದಾರೆ.