ಮಿಡಲ್‌ ಕೆಳಗೆ..... ವೇತನ ಕಡಿತ ಆದೇಶ ವಾಪಸ್‌ ಪಡೆಯಲು ಪಟ್ಟು

KannadaprabhaNewsNetwork |  
Published : Aug 12, 2026, 01:15 AM IST
ಗ್ರಾಮ ಪಂಚಾಯಿತಿ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ, ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಜುಲೈ 9ರಂದು ನಡೆದ ರಾಜ್ಯಮಟ್ಟದ ಹೋರಾಟದಲ್ಲಿ ಭಾಗವಹಿಸಿದ್ದ ನೌಕರರ ವಿರುದ್ಧ ಯಾದಗಿರಿ ಜಿಲ್ಲಾ ಪಂಚಾಯತ್ ಆಡಳಿತ ಕೈಗೊಂಡಿರುವ ಕ್ರಮಗಳನ್ನು ಖಂಡಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ (ಸಿಐಟಿಯು ಸಂಯೋಜಿತ) ರಾಜ್ಯ ಸಮಿತಿ ವತಿಯಿಂದ ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಎದುರು ಬೃಹತ್‌ ಪ್ರತಿಭಟನೆ ನಡೆಸಲಾಯಿತು. | Kannada Prabha

ಸಾರಾಂಶ

Regarding the actions taken by the Yadgir Zilla Panchayat administration against employees who participated in the state-level protest held at Freedom Park in Bengaluru on July 9, demanding the fulfillment of various demands of Gram Panchayat employees

-ಗ್ರಾಮ ಪಂಚಾಯಿತಿ ನೌಕರರ ಸಂಘದಿಂದ ಬೃಹತ್‌ ಪ್ರತಿಭಟನೆಕನ್ನಡಪ್ರಭ ವಾರ್ತೆ ಯಾದಗಿರಿ

ಗ್ರಾಮ ಪಂಚಾಯಿತಿ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ, ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಜುಲೈ 9 ರಂದು ನಡೆದ ರಾಜ್ಯಮಟ್ಟದ ಹೋರಾಟದಲ್ಲಿ ಭಾಗವಹಿಸಿದ್ದ ನೌಕರರ ವಿರುದ್ಧ ಯಾದಗಿರಿ ಜಿಲ್ಲಾ ಪಂಚಾಯಿತಿ ಆಡಳಿತ ಕೈಗೊಂಡಿರುವ ಕ್ರಮಗಳನ್ನು ಖಂಡಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ (ಸಿಐಟಿಯು ಸಂಯೋಜಿತ) ರಾಜ್ಯ ಸಮಿತಿ ವತಿಯಿಂದ ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಎದುರು ಬೃಹತ್‌ ಪ್ರತಿಭಟನೆ ನಡೆಸಲಾಯಿತು.

ಯಾದಗಿರಿ ಜಿಲ್ಲೆಯ ಗ್ರಾಮ ಪಂಚಾಯಿತಿ ನೌಕರರ ಎರಡು ಪಟ್ಟು ವೇತನ ಕಡಿತಗೊಳಿಸುವಂತೆ ಜುಲೈ 22ರಂದು ಜಿಲ್ಲೆಯ ಎಲ್ಲ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿಯವರು ಆಡಳಿತ ಸುತ್ತೋಲೆ ಹೊರಡಿಸಿರುವುದು ನೌಕರರ ಹಕ್ಕುಗಳ ಮೇಲಿನ ದಾಳಿ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಕರ ವಸೂಲಿಗಾರರು ಹಾಗೂ ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್‌ಗಳ ಆರು ವರ್ಷಗಳ ಸೇವೆ ಪೂರ್ಣಗೊಂಡಿರುವ ನೌಕರರ ಜೇಷ್ಠತಾ ಪಟ್ಟಿ ಸಿದ್ಧಪಡಿಸುವ ಸಂದರ್ಭ ಗ್ರಾಮ ಪಂಚಾಯಿತಿ ಸಭಾ ನಡಾವಳಿ, ಹಾಜರಾತಿ, ವೇತನ ಬಟಾವಡೆ ಹಾಗೂ ಆಡಿಟ್ ವರದಿಗಳನ್ನು ಆರಂಭದಿಂದ ಅಂತ್ಯದವರೆಗೆ ಪರಿಶೀಲಿಸುವ ಮೂಲಕ ಸರ್ಕಾರದ ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂದು ಸಂಘದ ಮುಖಂಡರು ಆರೋಪಿಸಿದರು.

ಇಂತಹ ಧೋರಣೆಗಳಿಂದ ನೌಕರರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಸಂಘ ಕಟ್ಟಿಕೊಳ್ಳುವ, ಹೋರಾಟ ನಡೆಸುವ ಹಾಗೂ ಪ್ರಜಾಸತ್ತಾತ್ಮಕವಾಗಿ ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುವ ಹಕ್ಕನ್ನು ಮೊಟಕುಗೊಳಿಸುವ ಕ್ರಮಗಳನ್ನು ಕೈಬಿಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಜು.22 ರಂದು ಹೊರಡಿಸಿರುವ ವೇತನ ಕಡಿತದ ಆದೇಶ ಸೇರಿದಂತೆ ನೌಕರರ ಹಕ್ಕುಗಳಿಗೆ ಧಕ್ಕೆ ತರುವ ಸುತ್ತೋಲೆಗಳನ್ನು ಹಿಂಪಡೆದು, ಗ್ರಾಮ ಪಂಚಾಯಿತಿ ನೌಕರರಿಗೆ ಪ್ರಜಾಸತ್ತಾತ್ಮಕವಾಗಿ ಸಂಘಟಿತರಾಗಿ ಹೋರಾಟ ನಡೆಸಲು ಅವಕಾಶ ಕಲ್ಪಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಸಂಘದ ರಾಜ್ಯಾಧ್ಯಕ್ಷ ಎಂ.ಬಿ. ನಾಡಗೌಡ,ಜಿಲ್ಲಾಧ್ಯಕ್ಷ ಬಸವರಾಜ ದೊರೆ, ಜಿ. ರಾಮಕೃಷ್ಣ ಮಂಡ್ಯ, ಆರ್. ಎಸ್. ಬಸವರಾಜ, ಮಾರುತಿ ಸುಗ್ಲಾ ಸೇರಿದಂತೆ ಜಿಲ್ಲೆಯ ಗ್ರಾಮ ಪಂಚಾಯಿತಿ ನೌಕರರು ಭಾಗವಹಿಸಿದ್ದರು.

----ಫೋಟೊ-----

11ವೈಡಿಆರ್14

ಗ್ರಾಮ ಪಂಚಾಯಿತಿ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ರಾಜ್ಯಮಟ್ಟದ ಹೋರಾಟದಲ್ಲಿ ಭಾಗವಹಿಸಿದ್ದ ನೌಕರರ ವಿರುದ್ಧ ಯಾದಗಿರಿ ಜಿಲ್ಲಾ ಪಂಚಾಯಿತಿ ಆಡಳಿತ ಕೈಗೊಂಡಿರುವ ಕ್ರಮಗಳನ್ನು ಖಂಡಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ (ಸಿಐಟಿಯು ಸಂಯೋಜಿತ) ರಾಜ್ಯ ಸಮಿತಿ ವತಿಯಿಂದ ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಎದುರು ಬೃಹತ್‌ ಪ್ರತಿಭಟನೆ ನಡೆಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿರುವುದು ಕಡ್ಡಾಯ
ಕೈ ಮುಗಿತಿವಿ, ಸಾಮಾಜಿಕ ಬಹಿಷ್ಕಾರ ತೆರವುಗೊಳಿಸಿ