ಘನತ್ಯಾಜ್ಯ ನಿರ್ವಹಣೆ, ಬೂದು ನೀರು ಕಾಮಗಾರಿ ಪರಿಶೀಲನೆ

KannadaprabhaNewsNetwork |  
Published : Jan 24, 2025, 12:46 AM IST
ಚಿತ್ರದುರ್ಗ ಎರಡನೇ ಪುಟದ ಮಿಡ್ಲ್   | Kannada Prabha

ಸಾರಾಂಶ

ಚಿತ್ರದುರ್ಗ ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಆರ್‌ಡಿಪಿಆರ್ ಉಪ ಕಾರ್ಯದರ್ಶಿ ಎಸ್.ಸಿ.ಮಹೇಶ್ ಭೇಟಿ ಪರಿಶೀಲಿಸಿದರು.

ಕನ್ನಡಪ್ರಭ ವಾರ್ತೆ ಚಿತ್ರದುರ್ಗ

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಸರ್ಕಾರದ ಉಪ ಕಾರ್ಯದರ್ಶಿ ಎಸ್.ಸಿ.ಮಹೇಶ್ ಜಿಲ್ಲೆಯ ವಿವಿಧ ಗ್ರಾಪಂಗಳಿಗೆ ಭೇಟಿ ನೀಡಿ, ಸ್ವಚ್ಛ ಸಂಕೀರ್ಣ ಘಟಕಗಳಲ್ಲಿ ಘನತ್ಯಾಜ್ಯ ನಿರ್ವಹಣೆ, ಬೂದು ನೀರು ಕಾಮಗಾರಿಗಳ ಪರಿಶೀಲನೆ ನಡೆಸಿದರು.

ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ರಾಂಪುರ, ಹಾನಗಲ್ ಗ್ರಾಮ ಪಂಚಾಯಿತಿ ವ್ಯಾಪ್ತಿ ಹಾಗೂ ಚಳ್ಳಕೆರೆ ತಾಲೂಕಿನ ನಗರಂಗೆರೆ ಗ್ರಾಮ ಪಂಚಾಯಿತಿ ಹಾಗೂ ಹಿರಿಯೂರು ತಾಲೂಕಿನ ವಾಣಿವಿಲಾಸಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆಯ ಘಟಕಾಂಶಗಳ ಪ್ರಗತಿ ಪರಿಶೀಲನೆ ನಡೆಸಿದರು.

ಮೊಳಕಾಲ್ಮುರು ತಾಲೂಕಿನ ಕೆರೆಕೊಂಡಾಪುರ ಗ್ರಾಮದಲ್ಲಿ ಸ್ವಚ್ಛ ಸಂಕೀರ್ಣ ಘಟಕದಲ್ಲಿ ಘನತ್ಯಾಜ್ಯ ನಿರ್ವಹಣೆ ಹಾಗೂ ಕಾರ್ಯಚರಣೆ ಬಗ್ಗೆ ಪರಿಶೀಲಿಸಿದರು. ಅನಂತರ ಮಲತ್ಯಾಜ್ಯ ಸಂಸ್ಕರಣಾ ಘಟಕ ಸ್ಥಳ ಪರಿಶೀಲನೆ ಹಾಗೂ ಹಾನಗಲ್ ಗ್ರಾಮದಲ್ಲಿ ಬೂದು ನೀರು ನಿರ್ವಹಣೆಗಾಗಿ ಚರಂಡಿಯಲ್ಲಿ ಸಂಸ್ಕರಿಸುವ ವಿಧಾನ ನಿರ್ಮಾಣದ ಕಾಮಗಾರಿ ಪರಿಶೀಲನೆ ನಡೆಸಿದರು.

ಬಳಿಕ ನಂತರ ಮೊಳಕಾಲ್ಮೂರು ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಸ್ವಚ್ಛ ಭಾರತ್ ಮಿಷನ್ (ಗ್ರಾ) ವಿವಿಧ ಘಟಕಾಂಶಗಳ ಕುರಿತು ಸಭೆ ನಡೆಸಿ ಹಾಗೂ ತ್ವರಿತ ಕಾಮಗಾರಿ ಪೂರ್ಣಗೊಳಿಸಲು ಗುರಿ ನಿಗದಿಪಡಿಸುವಂತೆ ಸೂಚನೆ ನೀಡಿದರು.

ಚಳ್ಳಕೆರೆ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಸ್ವಚ್ಛ ಭಾರತ್ ಮಿಷನ್ (ಗ್ರಾ) ವಿವಿಧ ಘಟಕಾಂಶಗಳ ಕುರಿತು ಸಭೆ ನಡೆಸಿ, ಹಾಗೂ ತ್ವರಿತವಾಗಿ ಕಾಮಗಾರಿ ಪೂರ್ಣಗೊಳಿಸಲು ಗುರಿ ನಿಗದಿಪಡಿಸಿ ಪೂರ್ಣಗೊಳಿಸಲು ಸೂಚನೆ ನೀಡಿದರು. ನಗರಂಗೆರೆ ಗ್ರಾಮ ಪಂಚಾಯಿತಿಯ ಶಾಲಾ ಸಮುದಾಯ ಶೌಚಾಲಯ, ಹಳೆಯ ಸ್ವಚ್ಛ ಸಂಕೀರ್ಣ ಘಟಕ, ಹೊಸ ಸ್ವಚ್ಛ ಸಂಕೀರ್ಣ ಘಟಕ ಮತ್ತುಮಲ ತ್ಯಾಜ್ಯ ಸಂಸ್ಕರಣ ಘಟಕ ಕಾಮಗಾರಿ ಸ್ಥಳ ಪರಿಶೀಲನೆ ನಡೆಸಿದರು.

ಹಿರಿಯೂರು ತಾಲೂಕಿನ ವಿ.ವಿ.ಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿ.ವಿ.ಪುರ ಗ್ರಾಮಕ್ಕೆ ಭೇಟಿ ನೀಡಿ ಸ್ವಚ್ಛ ಸಂಕೀರ್ಣ ಘಟಕ ಹಾಗೂ ಮಲತ್ಯಾಜ್ಯ ಸಂಸ್ಕರಣಾ ಘಟಕ ನಿರ್ವಹಣೆ ಮತ್ತು ಕಾರ್ಯಚರಣೆ ಪರಿಶೀಲಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಸಿ.ಎನ್.ಗಾಯತ್ರಿ, ಸಹಾಯಕ ಯೋಜನಾಧಿಕಾರಿ ಡಿ.ಎಸ್.ಸುಮಾ, ಮೊಳಕಾಲ್ಮೂರು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಹನುಮಂತಪ್ಪ, ಚಳ್ಳಕೆರೆ ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ಹರೀಶ್ ಚಂದ್, ಹುಸೇನ್ ಭಾಷಾ, ದಯಾನಂದ ಸ್ವಾಮಿ, ಕಿರಿಯ ಅಭಿಯಂತರರಾದ ತಿಪ್ಪೇಸ್ವಾಮಿ, ಮಲ್ಲಿಕಾರ್ಜುನ, ಸಹಾಯಕ ನಿರ್ದೇಶಕರಾದ ಯಶವಂತ್, ಗಣೇಶ್, ರೇಖಾ, ಸಪೋರ್ಟ್ ಎಂಜಿನಿಯರ್ಸ್ ಯತೀಶ್, ಪ್ರಜ್ವಲ್, ಆಕಾಶ್, ಸ್ವಚ್ಛ ಭಾರತ್ ಮಿಷನ್ ಜಿಲ್ಲಾ ಸಮಾಲೋಚಕರಾದ ಬಿ.ಸಿ. ನಾಗರಾಜು, ವಿನಯ್ ಕುಮಾರ್, ಪ್ರಮೀಳ, ಶಶಿಧರ್ ಇದ್ದರು.

PREV

Recommended Stories

ವೈದ್ಯರ ಕೊರತೆಗೆ ನಲುಗಿದ ಸಾರ್ವಜನಿಕ ಆಸ್ಪತ್ರೆ
ಸತ್ಯಕಾಮರ ಸುಮ್ಮನೆಯಲ್ಲಿ ಕಸಾಪ ವಾರ್ಷಿಕ ಸಭೆ: ಡಾ.ಮಹೇಶ ಜೋಷಿ