ಅಂಬಾದೇವಿ ಮೂರ್ತಿ ಪ್ರತಿಷ್ಠಾಪನೆ ಸಂಪನ್ನ

KannadaprabhaNewsNetwork |  
Published : Oct 31, 2026, 01:30 AM IST
ಫೋಟೋ:30ಕೆಪಿಎಸ್ಎನ್ಡಿ3ಎ:  | Kannada Prabha

ಸಾರಾಂಶ

ತಾಲೂಕಿನ ಸುಕ್ಷೇತ್ರ ಅಂಬಾಮಠದ ಅಂಬಾದೇವಿ ದೇವಸ್ಥಾನದ ನೂತನ ಶಿಲಾ ಮಂಟಪ ಲೋಕಾರ್ಪಣೆ ಹಾಗೂ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ಶುಕ್ರವಾರ ಭಕ್ತಿಭಾವದಿಂದ ನಡೆಯಿತು.

ಕನ್ನಡಪ್ರಭ ವಾರ್ತೆ ಸಿಂಧನೂರು

ತಾಲೂಕಿನ ಸುಕ್ಷೇತ್ರ ಅಂಬಾಮಠದ ಅಂಬಾದೇವಿ ದೇವಸ್ಥಾನದ ನೂತನ ಶಿಲಾ ಮಂಟಪ ಲೋಕಾರ್ಪಣೆ ಹಾಗೂ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ಶುಕ್ರವಾರ ಭಕ್ತಿಭಾವದಿಂದ ನಡೆಯಿತು.

ಬೆಳಿಗ್ಗೆ ಬ್ರಾಹ್ಮೀ ಮುಹೂರ್ತದಲ್ಲಿ ಶ್ರೀಶೈಲ-ಯಡೂರು ಜಗದ್ಗುರು ಡಾ.ಚನ್ನಬಸವ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮೀಜಿ ದಿವ್ಯ ಸಾನ್ನಿಧ್ಯದಲ್ಲಿ, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ಹಾಗೂ ಶಿವಮೊಗ್ಗ ವೀರಾಪುರ ಹಿರೇಮಠದ ಡಾ.ಮರುಳಸಿದ್ದ ಪಂಡಿತಾರಾಧ್ಯ ಶಿವಾಚಾರ್ಯ ಆರಾದ್ರಿಮಠ, ಬೈಲಹೊಂಗಲದ ವೇದಮೂರ್ತಿ ಡಾ.ಮಹಾಂತೇಶ ಶಾಸ್ತ್ರಿಗಳು, ಅಂಬಾಮಠ ಅಂಬಾದೇವಿ ದೇವಸ್ಥಾನದ ಪ್ರಧಾನ ಅರ್ಚಕ ಗುರುದತ್ತ ನೇತೃತ್ವದಲ್ಲಿ ಅಂಬಾದೇವಿ ಮೂರ್ತಿ ಪ್ರತಿಷ್ಠಾಪನೆ ಹಾಗೂ ದೇವಸ್ಥಾನಕ್ಕೆ ಕುಂಭ ಕಳಶೋತ್ಸವ ವಿಜೃಂಭಣೆಯಿಂದ ನಡೆಯಿತು.

ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಅಜಯ್ ಧರ್ಮಸಿಂಗ್ ಅವರು ಅಂಬಾದೇವಿ ದೇವಸ್ಥಾನದ ನೂತನ ಶಿಲಾ ಮಂಟಪವನ್ನು ಲೋಕಾರ್ಪಣೆ ಮಾಡಿ ಅಂಬಾದೇವಿಗೆ ವಿಶೇಷ ಪೂಜೆ ಸಲ್ಲಿಸಿ ದರ್ಶನ ಪಡೆದರು. ಶಾಸಕ ಹಂಪನಗೌಡ ಬಾದರ್ಲಿ, ಮಸ್ಕಿ ಶಾಸಕ ಆರ್.ಬಸನಗೌಡ ತುರ್ವಿಹಾಳ, ವಿಧಾನ ಪರಿಷತ್ ಸದಸ್ಯ ಬಸನಗೌಡ ಬಾದರ್ಲಿ, ಮಾಜಿ ಸಚಿವ ವೆಂಕಟರಾವ್ ನಾಡಗೌಡ, ತಹಸೀಲ್ದಾರ್ ಅರುಣ್ ಎಚ್.ದೇಸಾಯಿ, ಅಂಬಾದೇವಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಂಗನಗೌಡ ಗೊರೇಬಾಳ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ, ತಾ.ಪಂ ಇಓ ಚಂದ್ರಶೇಖರ, ಸಹಾಯಕ ಕೃಷಿ ನಿರ್ದೇಶಕ ರುದ್ರಗೌಡ ಮಾ.ಪಾ, ಮುಖಂಡರಾದ ಮಲ್ಲನಗೌಡ ಕಾನಿಹಾಳ, ದೊಡ್ಡಬಸವನಗೌಡ ಬಾದರ್ಲಿ, ಆರ್.ಸಿ.ಪಾಟೀಲ್, ಬಸವರಾಜ ಹಿರೇಗೌಡರ್, ಧರ್ಮನಗೌಡ ಮಲ್ಕಾಪುರ ಭಾಗವಹಿಸಿದ್ದರು.

ಅದ್ದೂರಿ ಮೆರವಣಿಗೆ: ಶುಕ್ರವಾರ ಮಧ್ಯಾಹ್ನ 4 ಗಂಟೆ ಸುಮಾರಿಗೆ 1008 ಕುಂಭ ಕಳಸ ಹಿಡಿದುಕೊಂಡು ಡೊಳ್ಳು ಕುಣಿತ, ವೀರಗಾಸೆ, ಕೋಲು ಕುಣಿತ ಸೇರಿದಂತೆ ವಿವಿಧ ವಾದ್ಯಮೇಳಗಳೊಂದಿಗೆ ದ್ವಾರ ಬಾಗಿಲಿನಿಂದ ಆರಂಭಗೊಂಡ ಮೆರವಣಿಗೆ ದೇವಸ್ಥಾನದವರೆಗೆ ಅದ್ಧೂರಿಯಾಗಿ ನಡೆಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ತಡೆಯಾಜ್ಞೆ ಇದ್ದರೂ ಪೊಲೀಸರಿಂದ ಚಾರ್ಜ್‌ಶೀಟ್‌: ಹೈಕೋರ್ಟ್‌ ಗರಂ
ಪ್ರೀತಿಗೆ ಪೋಷಕರು ವಿರೋಧ: ಪ್ರೇಮಿಗಳಿಂದ ಆತ್ಮಹತ್ಯೆ ಯತ್ನ