ಕಾರ್ಖಾನೆಗಳಲ್ಲಿ ಎಲೆಕ್ಟ್ರಾನಿಕ್ ತೂಕ ಮಷಿನ್ ಅಳವಡಿಕೆ ಕಡ್ಡಾಯ

KannadaprabhaNewsNetwork |  
Published : Dec 14, 2023, 01:30 AM IST
13ಸಿಎಚ್‌ಎನ್53ಬೆಳಗಾವಿಯ ಸುವರ್ಣ ಸೌಧದಲ್ಲಿ ಆಹಾರ ಮತ್ತು ಕಾನೂನು ಮಾಪನ ಶಾಸ್ತ್ರ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯನ್ನು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಅವರು ನಡೆಸಿದರು. | Kannada Prabha

ಸಾರಾಂಶ

ಚಾಮರಾಜನಗರ: ರೈತರಿಗೆ ತೂಕದಲ್ಲಿ ಮೋಸ ಆಗದಂತೆ ತಡೆಯಲು ಕಾರ್ಖಾನೆಗಳಲ್ಲಿ ಕಡ್ಡಾಯವಾಗಿ ಎಲೆಕ್ಟ್ರಾನಿಕ್ ಆಧಾರಿತ ತೂಕ ಮಷಿನ್ ಅಳವಡಿಸಲು ಕ್ರಮವಹಿಸಿ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆ ಉಸ್ತುವಾರಿ ಸಚಿವ ಕೆ.ಹೆಚ್. ಮುನಿಯಪ್ಪ ಅವರು ಕಾನೂನು ಮಾಪನ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.ಬೆಳಗಾವಿಯ ಸುವರ್ಣ ಸೌಧದಲ್ಲಿ ಆಹಾರ ಮತ್ತು ಕಾನೂನು ಮಾಪನ ಶಾಸ್ತ್ರ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಚಾಮರಾಜನಗರ: ರೈತರಿಗೆ ತೂಕದಲ್ಲಿ ಮೋಸ ಆಗದಂತೆ ತಡೆಯಲು ಕಾರ್ಖಾನೆಗಳಲ್ಲಿ ಕಡ್ಡಾಯವಾಗಿ ಎಲೆಕ್ಟ್ರಾನಿಕ್ ಆಧಾರಿತ ತೂಕ ಮಷಿನ್ ಅಳವಡಿಸಲು ಕ್ರಮವಹಿಸಿ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆ ಉಸ್ತುವಾರಿ ಸಚಿವ ಕೆ.ಹೆಚ್. ಮುನಿಯಪ್ಪ ಅವರು ಕಾನೂನು ಮಾಪನ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬೆಳಗಾವಿಯ ಸುವರ್ಣ ಸೌಧದಲ್ಲಿ ಆಹಾರ ಮತ್ತು ಕಾನೂನು ಮಾಪನ ಶಾಸ್ತ್ರ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಬೆಳಗಾವಿ ಜಿಲ್ಲೆಯ ಎಲ್ಲಾ ತಾಲೂಕಿನ ಆಯ್ದ 100 ಜನ ಅಂಗಡಿಕಾರರ ಕುಂದು ಕೊರತೆ ಆಲಿಸಿದ ಸಚಿವರು ಸಾರ್ವಜನಿಕರ ದೂರು ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಬೇಕು. ಪಡಿತರ ಅಕ್ಕಿ ಜೊತೆಗೆ, ಡಿಬಿಟಿ ಮೊತ್ತ ಫಲಾನುಭವಿಗಳಿಗೆ ನಿಯಮಾನುಸಾರ ಪ್ರತಿ ಮಾಹೆ ಜಮೆ ಮಾಡಿಸಬೇಕು. ಅರ್ಹ ಫಲಾನುಭವಿಗಳಿಗೆ ನಿಯಮಾನುಸಾರ ಪಡಿತರ ಚೀಟಿ ಅನುಮೋದನೆ ಮಾಡಲು ಆಹಾರ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಕ್ಕರೆ ಸಚಿವ ಶಿವಾನಂದ ಎಸ್ ಪಾಟೀಲ್, ಬೆಳಗಾವಿ ಜಿಲ್ಲೆಯ ಅಥಣಿ ಕ್ಷೇತ್ರದ ಶಾಸಕ ಲಕ್ಷಣ ಸವದಿ ಹಾಗೂ ಬೀಳಗಿ ಕ್ಷೇತ್ರದ ಶಾಸಕ ಜೆ.ಟಿ. ಪಾಟೀಲ್, ಆಹಾರ ಇಲಾಖೆಯ ಕಾರ್ಯದರ್ಶಿ, ಆಯುಕ್ತರು, ಕರ್ನಾಟಕ ಆಹಾರ ನಿಗಮ ವ್ಯವಸ್ಥಾಪಕ ನಿರ್ದೇಶಕರು, ಕಾನೂನು ಮಾಪನ ಶಾಸ್ತ್ರ ಇಲಾಖೆ ನಿಯಂತ್ರಕರು, ಆಹಾರ ಇಲಾಖೆ ಸಚಿವರ ಆಪ್ತ ಕಾರ್ಯದರ್ಶಿ, ವಿಶೇಷ ಅಧಿಕಾರಿಗಳು ಹಾಗೂ ಬೆಳಗಾವಿ, ಕಲಬುರ್ಗಿ ವಿಭಾಗದ ಆಹಾರ ಇಲಾಖೆಯ ಕಾನೂನು ಮಾಪನ ಶಾಸ್ತ್ರ ಇಲಾಖೆ ಅಧಿಕಾರಿಗಳು ಹಾಗೂ ಜಿಲ್ಲಾ ವ್ಯವಸ್ಥಾಪಕರು ಸಭೆಯಲ್ಲಿ ಉಪಸ್ಥಿತರಿದ್ದರು.

--------------

13ಸಿಎಚ್‌ಎನ್53

ಬೆಳಗಾವಿಯ ಸುವರ್ಣ ಸೌಧದಲ್ಲಿ ಆಹಾರ ಮತ್ತು ಕಾನೂನು ಮಾಪನ ಶಾಸ್ತ್ರ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯನ್ನು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ನಡೆಸಿದರು.

PREV

Recommended Stories

ಸರ್ಕಾರಿ ಶಾಲೆ ಕುಡಿವ ನೀರಿಗೆ ವಿಷ ಬೆರೆಸಿದ್ದಕ್ಕೆ ಸಿಎಂ ಗರಂ
ಡಾ.ರಾಜ್‌ಕುಮಾರ್‌ರ ನೆಚ್ಚಿನ ಸಹೋದರಿ ನಾಗಮ್ಮ ನಿಧನ