ನಾಗರಕಟ್ಟೆ ಹಿಂದೂ ಗಣಪತಿ ಪ್ರತಿಷ್ಠಾಪನೆ

KannadaprabhaNewsNetwork |  
Published : Sep 16, 2026, 01:15 AM IST
0 | Kannada Prabha

ಸಾರಾಂಶ

ನಗರದ ಬಿಜಿಎಸ್ ವೃತ್ತದ ನಾಗರಕಟ್ಟೆ ಹಿಂದೂ ಮಹಾ ಗಣಪತಿಯ ಪ್ರತಿಷ್ಠಾಪನೆ ಕಾರ್ಯಕ್ರಮ ಗಣೇಶ ಚತುರ್ಥಿಯಂದು ವಿವಿಧ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಶ್ರದ್ಧಾ ಭಕ್ತಿಯಿಂದ ನೆರವೇರಿತು.

ಕನ್ನಡಪ್ರಭ ವಾರ್ತೆ, ತುಮಕೂರುನಗರದ ಬಿಜಿಎಸ್ ವೃತ್ತದ ನಾಗರಕಟ್ಟೆ ಹಿಂದೂ ಮಹಾ ಗಣಪತಿಯ ಪ್ರತಿಷ್ಠಾಪನೆ ಕಾರ್ಯಕ್ರಮ ಗಣೇಶ ಚತುರ್ಥಿಯಂದು ವಿವಿಧ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಶ್ರದ್ಧಾ ಭಕ್ತಿಯಿಂದ ನೆರವೇರಿತು. ಅಟವಿ ಸುಕ್ಷೇತ್ರದ ಅಟವಿ ಶಿವಲಿಂಗ ಸ್ವಾಮೀಜಿಗಳ ಸಾನ್ನಿಧ್ಯದಲ್ಲಿ ನಡೆದ ಪೂಜಾ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಭಾಗವಹಿಸಿದ್ದರು. ಮೂರ್ತಿ ಪ್ರತಿಷ್ಠಾಪನೆಗೂ ಮುನ್ನ ವಿವಿಧ ಹೋಮ, ಹವನ, ವಿಶೇಷ ಪೂಜೆಗಳನ್ನು ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾಧಿಕಾರಿ ಶುಭಕಲ್ಯಾಣ್, ಜಿಲ್ಲಾಪೊಲೀಸ್ ವರಿಷ್ಟಾಧಿಕಾರಿ ಅಶೋಕ್ ಕೆ.ವಿ, ಮಾಜಿ ಸಚಿವ ಸೊಗಡು ಶಿವಣ್ಣ, ಸ್ವಾಗತ ಸಮಿತಿಅಧ್ಯಕ್ಷ ಟಿ.ಬಿ. ಶೇಖರ್ ಮೊದಲಾದವರು ಹಾಜರಿದ್ದರು. ಸ್ವಾಗತ ಸಮಿತಿ ಉಪಾಧ್ಯಕ್ಷರಾದ ಮಂಜೇಶ್, ಮನು ಜಿ, ಪ್ರಧಾನ ಕಾರ್ಯದರ್ಶಿಆರ್‌ಎಲ್‌ ರಮೇಶ್ ಬಾಬು, ಕಾರ್ಯದರ್ಶಿ ಆರ್.ಕೃಷ್ಣಯ್ಯ, ಸಹ ಕಾರ್ಯದರ್ಶಿ ಮಾರಣ್ಣ ಪಾಳೇಗಾರ್, ಖಜಾಂಚಿಟಿ.ವೈ.ಯಶಸ್ ನಿರ್ದೇಶಕರುಗಳಾದ ಎಸ್.ಪಿ.ಚಿದಾನಂದ್, ಧನಿಯಕುಮಾರ್, ಮಂಜು ಭಾರ್ಗವ್, ಭಾನು ಪ್ರಕಾಶ್ ಡಿ, ಸುರೇಶ್ ಹೆಚ್.ಆರ್, ಮಹೇಶ್‌ಬಿ.ಎಸ್, ವಸಂತ್‌ಕುಮಾರ್, ನಾಗರಾಜ್ ಮೂರ್ತಿ, ಶಕುಂತಲಾ ನಟರಾಜ್, ಶ್ರುತಿ ಮಧುಕರ್, ಕಾರ್ಯಕರ್ತರು ಸೇರಿದಂತೆ ನೂರಾರು ಭಕ್ತರು ಗಣೇಶ ಪ್ರತಿಷ್ಠಾಪನಾ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಸ್ವಾಗತ ಸಮಿತಿ ಅಧ್ಯಕ್ಷ ಟಿ.ಬಿ. ಶೇಖರ್ ಮಾತನಾಡಿ, ಈ ಬಾರಿ ಸಂಪೂರ್ಣವಾಗಿ ಪರಿಸರ ಸ್ನೇಹಿಗಣಪತಿ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗಿದೆ. ಪ್ರತಿದಿನ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು. ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ನೂರಾರು ಭಕ್ತರು ಭಾಗವಹಿಸಿದ್ದರು. ಎಲ್ಲರಿಗೂ ಪ್ರಸಾದ ವಿನಿಯೋಗ, ಅನ್ನಸಂತರ್ಪಣೆ ವ್ಯವಸ್ಥೆ ಮಾಡಲಾಗಿತ್ತು.

ಫೋಟೋ : ತುಮಕೂರು ಬಿಜಿಎಸ್ ವೃತ್ತದ ನಾಗರಕಟ್ಟೆ ಹಿಂದೂ ಮಹಾ ಗಣಪತಿಯ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಾರ್ವಜನಿಕರ ಅರ್ಜಿ ಪರಿಶೀಲಿಸಿ ಸಮಸ್ಯೆ ಬಗೆಹರಿಸಿ
ಸಿಎಂ ಭೇಟಿ ಹಿನ್ನೆಲೆ: ಶಾಸಕರಿಂದ ಸ್ಥಳ ಪರಿಶೀಲನೆ