ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುಮಲ್ಲೇಗೌಡ ಸಾರ್ವಜನಿಕ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ಮಹಿಳೆಯರ ಸ್ತನ ಕ್ಯಾನ್ಸರ್ ಪತ್ತೆಗೆ ಅನುಕೂಲವಾಗುವಂತೆ ಸುಮಾರು ₹ 75 ಲಕ್ಷ ವೆಚ್ಚದಲ್ಲಿ ಮ್ಯಾಮೋಗ್ರಫಿ ಸ್ಕ್ಯಾನಿಂಗ್ ಯಂತ್ರ ಅಳವಡಿಸಲಾಗಿದೆ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.
ಜಿಲ್ಲಾಸ್ಪತ್ರೆಯಲ್ಲಿ ಮ್ಯಾಮೋಗ್ರಫಿ ಯಂತ್ರ ಪರಿಶೀಲಿಸಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಹಾಗೂ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ರಾಜ್ಯದಲ್ಲಿ ಮಹಿಳೆಯರ ಸ್ತನ ಕ್ಯಾನ್ಸರ್ ಪತ್ತೆಗೆ ಎಲ್ಲಾ ಜಿಲ್ಲಾ ಕೇಂದ್ರಗಳ ಆಸ್ಪತ್ರೆಗಳಿಗೆ ಈ ಮೆಷಿನ್ ಅಳವಡಿಸಲು ಸೂಚಿಸಿದ್ದಾರೆ. ಸಾರ್ವಜನಿಕರ ಅನುಕೂಲಕ್ಕೆ ಇಂದಿನಿಂದಲೇ ಕಾರ್ಯಾರಂಭ ಮಾಡಿದ್ದು, ಜನರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸಲು ಸರ್ಕಾರ ಹಲವಾರು ಜನಪರ ಕಾರ್ಯಕ್ರಮ ಆಯೋಜಿಸಿದೆ ಎಂದು ಹೇಳಿದರು.ಜಿಲ್ಲೆಯಲ್ಲಿ ಬ್ರೆಸ್ಟ್ ಕ್ಯಾನ್ಸರ್ ಸಂಬಂಧಿತ ಮಹಿಳೆಯರು ಪಕ್ಕದ ಜಿಲ್ಲೆಗಳಾದ ಹಾಸನ, ಶಿವಮೊಗ್ಗಕ್ಕೆ ಹೋಗಬೇಕಾಗಿದ್ದು, ಇಂದು ಸರ್ಕಾರಿ ಆಸ್ಪತ್ರೆಯಲ್ಲಿ ಮ್ಯಾಮೋಗ್ರಫಿ ಯಂತ್ರ ಅಳವಡಿಸಿರುವುದರಿಂದ ಇಲ್ಲೇ ಚಿಕಿತ್ಸೆ ಲಭ್ಯವಾಗಲಿದೆ ಎಂದು ತಿಳಿಸಿದರು. ಬ್ರೆಸ್ಟ್ ಕ್ಯಾನ್ಸರ್ ಪತ್ತೆಗೆ ಇಬ್ಬರು ರೇಡಿಯೋಲಾಜಿಸ್ಟ್ ನೇಮಕ ಮಾಡಲಾಗಿದೆ. ಸಿಎಸ್‌ಆರ್ ಅನುದಾನದಲ್ಲಿ ಸುಮಾರು ₹26 ಲಕ್ಷ ವೆಚ್ಚದಲ್ಲಿ ಹಣ ಪಾವತಿಸಿ ಉಪಯೋಗಿಸುವ ಮಹಿಳೆಯರಿಗೆ ಮತ್ತು ಪುರುಷರಿಗೆ ಪ್ರತ್ಯೇಕ ಸುಲಭ ಶೌಚಾಲಯ ಮತ್ತು ಸ್ನಾನಗೃಹ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.ಆಸ್ಪತ್ರೆಗೆ ಬರುವ ರೋಗಿಗಳಿಗೆ ಸಂಬಂಧಿಸಿದವರಿಗೆ ಈ ಪ್ರಯೋಜನ ಸಿಗಲು ಸುಲಭ ಶೌಚಾಲಯ, ಸ್ನಾನ ಗೃಹ ನಿರ್ಮಾಣಕ್ಕೆ ನಿರ್ಧರಿಸಿದ್ದು, ಇನ್ನೆರಡು ತಿಂಗಳಲ್ಲಿ ಲೋಕಾರ್ಪಣೆಯಾಗಲಿದೆ ಎಂದು ತಿಳಿಸಿದರು.ಸಿರವಾಸೆ ಮತ್ತು ಕಳಸಾಪುರ ಈ ಎರಡು ಆಸ್ಪತ್ರೆಗಳಲ್ಲಿ ಮಾತ್ರ ವೈದ್ಯರ ಕೊರತೆ ಇದ್ದು, ಈಗಾಗಲೇ ನೇಮಕ ಮಾಡಿದ್ದೇವೆ. ಉಳಿದಂತೆ ಕ್ಷೇತ್ರ ವ್ಯಾಪ್ತಿಯ ಎಲ್ಲಾ ಆಸ್ಪತ್ರೆಗಳಲ್ಲಿ ವೈದ್ಯರಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಸರ್ಜನ್ ಡಾ.ಮೋಹನ್‌ಕುಮಾರ್ ಹಾಜರಿದ್ದರು.ಪೋಟೋ ಫೈಲ್ ನೇಮ್ 22 ಕೆಸಿಕೆಎಂ 1ಜಿಲ್ಲಾಸ್ಪತ್ರೆಯಲ್ಲಿ ಅಳವಡಿಸಲಾಗಿರುವ ಮಹಿಳೆಯರ ಸ್ತನ ಕ್ಯಾನ್ಸರ್ ಪತ್ತೆ ಯಂತ್ರವನ್ನು ಶಾಸಕ ಹೆಚ್.ಡಿ. ತಮ್ಮಯ್ಯ ಅವರು ವೀಕ್ಷಿಸಿದರು. ಜಿಲ್ಲಾ ಸರ್ಜನ್ ಡಾ. ಮೋಹನ್‌ಕುಮಾರ್ ಇದ್ದರು.
--------------------------------