ಹೊಸಪೇಟೆ: ತುಂಗಭದ್ರಾ ಜಲಾಶಯದ ಹೊಸ 18ನೇ ಕ್ರಸ್ಟ್‌ಗೇಟ್ ಅಳವಡಿಕೆ ಕಾರ್ಯ ಬುಧವಾರ ಯಶಸ್ವಿ ಆಗಿದ್ದು, ತುಂಗಭದ್ರಾ ಮಂಡಳಿ ಹಾಗೂ ನೀರಾವರಿ ಇಲಾಖೆ ಅಧಿಕಾರಿಗಳ ಮೊಗದಲ್ಲಿ ಹರ್ಷ ತಂದಿದೆ. ಈ ವಿಚಾರ ತಿಳಿದು ಜಲಾಶಯ ನೆಚ್ಚಿರುವ ರೈತರು ಕೂಡ ಸಂಭ್ರಮಿಸಿದ್ದಾರೆ.
ಏತನ್ಮಧ್ಯೆ, ಜಲಾಶಯದ 20ನೇ ಕ್ರಸ್ಟ್ ಗೇಟ್ ಮತ್ತು 27ನೇ ಕ್ರಸ್ಟ್‌ಗೇಟ್ ಅಳವಡಿಕೆ ಕಾರ್ಯ ಕೂಡ ಪ್ರಗತಿಯಲ್ಲಿದೆ. ಈ ಗೇಟ್‌ಗಳನ್ನು ಅಳವಡಿಸಿದರೆ ಮೂರು ಗೇಟ್‌ಗಳನ್ನು ಹೊಸದಾಗಿ ಅಳವಡಿಕೆ ಮಾಡಿದಂತಾಗಲಿದೆ ಎಂದು ತುಂಗಭದ್ರಾ ಮಂಡಳಿ ಅಧಿಕಾರಿಗಳು ತಿಳಿಸಿದ್ದಾರೆ.
ಮುಂಬರುವ ಜೂನ್ ತಿಂಗಳೊಳಗೆ ಎಲ್ಲ ಕ್ರಸ್ಟ್ ಗೇಟ್‌ಗಳನ್ನು ಅಳವಡಿಕೆ ಮಾಡುವ ಇರಾದೆಯೊಂದಿಗೆ ಕೆಲಸ ಆರಂಭಿಸಲಾಗಿದೆ. ಈಗ 18ನೇ ಕ್ರಸ್ಟ್‌ಗೇಟ್ ಅಳವಡಿಕೆ ಕಾರ್ಯ ಯಶಸ್ವಿ ಆಗಿದ್ದು, ಹಂತ ಹಂತವಾಗಿ ಉಳಿದ ಗೇಟ್‌ಗಳನ್ನು ಹೊಸದಾಗಿ ಅಳವಡಿಕೆ ಮಾಡಲಾಗುವುದು. 33 ಕ್ರಸ್ಟ್‌ಗೇಟ್‌ಗಳನ್ನು ಅಳವಡಿಕೆ ಮಾಡುವ ಕಾರ್ಯ ಮಾಡಲಾಗುತ್ತಿದೆ ಎಂದು ಮಂಡಳಿ ಕಾರ್ಯದರ್ಶಿ ಓಆರ್‌ಕೆ ರೆಡ್ಡಿ, ಅಧೀಕ್ಷಕ ಎಂಜನಿಯರ್ ನಾರಾಯಣ ನಾಯ್ಕ ತಿಳಿಸಿದ್ದಾರೆ.ಹೊಸಪೇಟೆಯ ತುಂಗಭದ್ರಾ ಜಲಾಶಯದ 18ನೇ ಕ್ರಸ್ಟ್‌ಗೇಟ್ ಅಳವಡಿಕೆ ಕಾರ್ಯ ಯಶಸ್ವಿಯಾಗಿ ಬುಧವಾರ ಪೂರ್ಣಗೊಂಡಿದೆ.