ವಿಪಕ್ಷ ಟೀಕಿಸುವ ಬದಲು ಕಾಂಗ್ರೆಸ್‌ ಕಾರ್ಯಕ್ರಮಗಳ ಮತದಾರರಿಗೆ ತಲುಪಿಸಿ-ಶಾಸಕ ಶಿವಣ್ಣನವರ

KannadaprabhaNewsNetwork | Published : Mar 20, 2024 1:21 AM

ಸಾರಾಂಶ

ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ರಾಷ್ಟ್ರದಲ್ಲಿ ರಾಹುಲ್ ಗಾಂಧಿ, ರಾಜ್ಯದಲ್ಲಿ ಸಿದ್ಧರಾಮಯ್ಯನವರ ಗೌರವ ಹೆಚ್ಚಿಸಬೇಕಾಗಿದೆ ಎಂದು ಶಾಸಕ ಬಸವರಾಜ ಶಿವಣ್ಣನವರ ಹೇಳಿದರು.

ಬ್ಯಾಡಗಿ: ರಾಜ್ಯದಲ್ಲಿ ನಮ್ಮದೇ ಸರ್ಕಾರ ಇರುವುದರಿಂದ ಲೋಕಸಭೆ ಚುನಾವಣೆ ಪ್ರತಿಷ್ಠೆಯ ಕಣವಾಗಿದೆ, ವಿರೋಧ ಪಕ್ಷದ ಅಭ್ಯರ್ಥಿ ಟೀಕಿಸುವ ಬದಲು ಕಾಂಗ್ರೆಸ್ ಜನರಿಗೆ ನೀಡಿದ ಕಾರ್ಯಕ್ರಮಗಳನ್ನು ಮತದಾರರಿಗೆ ತಲುಪಿಸುವ ಕೆಲಸವಾಗಬೇಕು, ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ರಾಷ್ಟ್ರದಲ್ಲಿ ರಾಹುಲ್ ಗಾಂಧಿ, ರಾಜ್ಯದಲ್ಲಿ ಸಿದ್ಧರಾಮಯ್ಯನವರ ಗೌರವ ಹೆಚ್ಚಿಸಬೇಕಾಗಿದೆ ಎಂದು ಶಾಸಕ ಬಸವರಾಜ ಶಿವಣ್ಣನವರ ಹೇಳಿದರು.

ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಚುನಾವಣಾ ಪ್ರಚಾರದ ಹಿನ್ನೆಲೆಯಲ್ಲಿ ಪಟ್ಟಣದ ತಮ್ಮ ನಿವಾಸದಲ್ಲಿ ಆಯೋಜಿಸಿದ್ದ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.

ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಸದೃಢವಾಗಿ ಬೆಳೆದಿದೆ. ‘ಭಾರತ್ ಜೋಡೋ’ ಯಾತ್ರೆ ಬಳಿಕ ದೇಶದ ಚಿತ್ರಣ ಬದಲಾಗಿದೆ. ರಾಷ್ಟ್ರವ್ಯಾಪಿ ಕಾಂಗ್ರೆಸ್ ಪರವಾದ ಅಲೆಯಿದೆ, ಬಿಜೆಪಿ ದುರಾಡಳಿತದಿಂದ ಬೇಸತ್ತ ಜನರು ಪ್ರಸ್ತುತ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲ್ಲಿಸಲು ತೀರ್ಮಾನಿಸಿದ್ದಾರೆ ಎಂದರು.

ಕಾಂಗ್ರೆಸ್ ಗೆಲ್ಲಿಸಿಕೊಳ್ಳೋಣ: ಕಾಂಗ್ರೆಸ್ ಅಭ್ಯರ್ಥಿ ಗಡ್ಡದೇವರಮಠ ಒಬ್ಬ ಸಹೃದಯಿ ಮತ್ತು ಅನುಭವಿ ಅಭ್ಯ ರ್ಥಿಯಾಗಿದ್ದಾರೆ, ಅವರಿಂದ ಜಿಲ್ಲೆಯ ಅಭಿವೃದ್ಧಿ ನಿರೀಕ್ಷೆಯನ್ನಿಟ್ಟುಕೊಂಡಿದ್ದೇವೆ. ಹಾವೇರಿ ಲೋಕಸಭೆ ಕ್ಷೇತ್ರದಲ್ಲಿ ಅವರನ್ನು ಗೆಲ್ಲಿಸಿಕೊಂಡು ಬರೋಣ, ತಾವೆಲ್ಲರೂ ಸನ್ನದ್ಧರಾಗುವಂತೆ ಕಾರ್ಯಕರ್ತರಿಗೆ ಕರೆ ನೀಡಿದರು.

ಲೋಕಸಭೆ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಮಾತನಾಡಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದಲ್ಲಿ, ದೇಶಕ್ಕೆ ಅನ್ನ ನೀಡುತ್ತಿರುವ ಅನ್ನದಾತರ ಎಲ್ಲಾ ರೀತಿಯ ಸಾಲಮನ್ನಾ ಮಾಡುವ ಭರವಸೆಯನ್ನು ಪಕ್ಷವು ನೀಡಿದೆ. ಇದರಲ್ಲಿ ಯಾವುದೇ ಸಂಶಯವಿಲ್ಲ, ಈ ಬಾರಿ ಬಿಜೆಪಿ ದುರಾಡಳಿತದ ವಿರುದ್ಧ ಮತಗಳನ್ನು ಪಡೆದು ಅಧಿಕಾರಕ್ಕೆ ಬರಲಿದ್ದೇವೆ ಎಂಬ ಭರವಸೆ ವ್ಯಕ್ತಪಡಿಸಿದರು.

ದಾನಪ್ಪ ಚೂರಿ, ಮಲ್ಲಿಕಾರ್ಜುನ ಕರಲಿಂಗಣ್ಣನವರ, ವೀರನಗೌಡ ಪೊಲೀಸ್‌ಪಾಟೀಲ, ಡಾ.ಎ.ಎಂ. ಸೌದಾಗರ, ಶಿವನ ಗೌಡ ಪಾಟೀಲ, ಸುಭಾಷ ಕೆಂಗಲ್, ಖಾದರಸಾಬ್ ದೊಡ್ಮನಿ, ದಾನಪ್ಪ ತೋಟದ, ರಾಜಣ್ಣ ಕಳ್ಯಾಳ, ಲಕ್ಷ್ಮೀ ಜಿಂಗಾಡೆ, ಮಾದೇವಪ್ಪ ಓಲೇಕಾರ, ಮಂಜಣ್ಣ ಎಲಿ, ಹುಚ್ಚಯ್ಯ ಹಮ್ಮಗಿ, ರವಿ ಪೂಜಾರ, ಬಸವರಾಜ ಬಳ್ಳಾರಿ, ಬಸವಣ್ಣೆಪ್ಪ ಪರ್ವತೇರ, ಮಾರುತಿ ಅಚ್ಚಿಗೇರಿ, ಶ್ರೀನಿವಾಸ್ ಕುರಕುಂದಿ ಸೇರಿದಂತೆ ಹಲವರು ಭಾಗವಹಿಸಿದ್ದರು.

Share this article