ಕನ್ನಡಪ್ರಭ ವಾರ್ತೆ ಮೈಸೂರು
ಮೈಸೂರು ಅರಮನೆ ಆವರಣದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವರ್ಷದಿಂದ ವರ್ಷಕ್ಕೆ ದಸರಾಗೆ ಬರುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿದೆ. ಟಿಕೆಟ್, ಪಾಸ್ ತೆಗೆದುಕೊಂಡವರು ಆಸನ ಸಿಗದೆ ಸಮಸ್ಯೆ ಎದುರಿಸಿದ್ದಾರೆ. ಇದನ್ನು ಗಮನದಲ್ಲಿಟ್ಟುಕೊಂಡು ಈ ಬಾರಿ ಅರಮನೆಯಲ್ಲಿ ಆಸನಗಳ ಸಂಖ್ಯೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದರು.
ಅರಮನೆ ಆವರಣದಲ್ಲಿ ಜಂಬೂಸವಾರಿ ಸಾಗುವ ಮಾರ್ಗದಲ್ಲಿ ಕೆಲವು ಮಾರ್ಪಾಡು ಮಾಡಲು ನಿರ್ಧರಿಸಿದ್ದು, ಸುಮಾರು 500 ಮೀಟರ್ ಹೆಚ್ಚಾಗಲಿದೆ. ಇದರಿಂದ ಆಸನಗಳ ಸಂಖ್ಯೆಯೂ ಹೆಚ್ಚಾಗಲಿದ್ದು, ಅರಮನೆ ಆವರಣದಲ್ಲಿ 35 ರಿಂದ 40 ಸಾವಿರ ಆಸನಗಳ ವ್ಯವಸ್ಥೆ ಮಾಡಬಹುದಾಗಿದೆ ಎಂದರು.ದಸರಾ ಆಚರಣೆಗೆ 19 ಉಪಸಮಿತಿಗಳನ್ನು ರಚಿಸಲಾಗಿದೆ. ಯಾವುದೇ ತೊಂದರೆಯಾಗದಂತೆ ಅಚ್ಚುಕಟ್ಟಾಗಿ ಉತ್ಸವ ನಡೆಸಲು ಜವಾಬ್ದಾರಿಯುತವಾಗಿ, ಎಚ್ಚರಿಕೆಯಿಂದ ಕೆಲಸ ಮಾಡುವಂತೆ ಸೂಚಿಸಿದ್ದೇನೆ. ಇಷ್ಟು ದೊಡ್ಡ ಹಬ್ಬ ಆಚರಣೆ ಮಾಡುವಾಗ ಸಣ್ಣಪುಟ್ಟ ವ್ಯತ್ಯಾಸಗಳಾಗುವುದು ಸಹಜ. ಎಲ್ಲವನ್ನು ಸರಿದೂಗಿಸಿಕೊಂಡು ಅದ್ಧೂರಿಯಾಗಿ ದಸರಾ ಆಚರಣೆ ಮಾಡುತ್ತೇವೆ. ಮುಖ್ಯಮಂತ್ರಿಗಳು ಕೇಂದ್ರ ರಕ್ಷಣಾ ಸಚಿವರೊಂದಿಗೆ ಮಾತುಕತೆ ನಡೆಸಲಿದ್ದು ಅನುಮತಿ ದೊರೆತರೆ ಏರ್ ಶೋ ಮಾಡುತ್ತೇವೆ ಎಂದರು.
ದಸರಾ ಉದ್ಘಾಟಕರಾಗಿ ವಿದ್ವಾಂಸ ಡಾ. ಹಂಪ ನಾಗರಾಜಯ್ಯ ಅವರನ್ನು ಆಯ್ಕೆ ಮಾಡಿರುವುದನ್ನು ಕಸಾಪ ಮಾಜಿ ಅಧ್ಯಕ್ಷ ಡಾ.ವೈ.ಡಿ. ರಾಜಣ್ಣ ಸ್ವಾಗತಿಸಿದ್ದಾರೆ.