ಸವಣೂರು: ಪ್ರಾಥಮಿಕ ಹಂತದಲ್ಲೆ ಮಕ್ಕಳಿಗೆ ವಿಜ್ಞಾನ ಶಿಕ್ಷಣದ ಬಗ್ಗೆ ಅಭಿರುಚಿ ಬೆಳೆಸುವುದು ಅತ್ಯವಶ್ಯಕ ಎಂದು ಸಾಧನೆ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಅಧ್ಯಕ್ಷ ಗಂಗಾಧರ ಬಾಣದ ತಿಳಿಸಿದರು.ತಾಲೂಕಿನ ಯಲವಿಗಿ ಗ್ರಾಮದ ಸಾಧನೆ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಪ್ರಗತಿ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಪ್ರಯುಕ್ತ ಏರ್ಪಡಿಸಿದ್ದ ವಿಜ್ಞಾನ ವಸ್ತುಗಳ ಪ್ರದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ತಾಂತ್ರಿಕವಾಗಿ ಬೆಳೆಯುತ್ತಿರುವ ಇಂದಿನ ಯುಗವು ಜ್ಞಾನದ ಯುಗವಾಗಿದ್ದು, ಸ್ಪರ್ಧಾತ್ಮಕ ಯುಗದಲ್ಲಿ ಕೇವಲ ಅಕ್ಷರಾಭ್ಯಾಸ ಇದ್ದರೆ ಸಾಕಾಗಾದು. ಜತೆಗೆ ಜ್ಞಾನದ ಅವಶ್ಯಕತೆ ಇಂದಿನ ದಿನಗಳಲ್ಲಿ ಹೆಚ್ಚಾಗುತ್ತಿದೆ ಎಂದರು.ವಿಜ್ಞಾನ ಮತ್ತು ತಂತ್ರಜ್ಞಾನವು ಮಾನವ ಜೀವನವನ್ನು ರೂಪಿಸುವ ಮುಖ್ಯ ಅಂಶಗಳಾಗಿವೆ. ಈ ಸಂಕಲ್ಪವನ್ನು ವಿದ್ಯಾರ್ಥಿಗಳಿಗೆ ಅರಿವು ಮಾಡಿಸುವ ಉದ್ದೇಶದಿಂದ ಭವಿಷ್ಯದ ಶೈಕ್ಷಣಿಕ ಹಿತದೃಷ್ಟಿಯಿಂದ ನಮ್ಮ ಶಾಲೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನವು ಆಯೋಜಿಸಲಾಗಿದ್ದು, ವಿದ್ಯಾರ್ಥಿಗಳಲ್ಲಿನ ಉತ್ಸಾಹ, ವಿಜ್ಞಾನ ಶಿಕ್ಷಕರಲ್ಲಿನ ಕುತೂಹಲ, ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ಸಂಭ್ರಮಕ್ಕೆ ಸಾಕ್ಷಿಯಾಗಿದೆ ಎಂದರು. ಉಪನ್ಯಾಸಕಿ ಸವಿತಾ ಯಂಡಿಗೇರಿ ಮಾತನಾಡಿ, ಪಾಲಕರು ಹಾಗೂ ಶಿಕ್ಷಕರು ತಮ್ಮ ಮಕ್ಕಳಲ್ಲಿ ಅಡಗಿರುವ ಪ್ರತಿಭೆಗಳು ಅನಾವರಣಗೊಳ್ಳಲು ಪ್ರೋತ್ಸಾಹಿಸಿದಲ್ಲಿ ಆ ಮಕ್ಕಳು ಭವಿಷ್ಯದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರಗಳಲ್ಲಿ ಸಾಧನೆ ತೋರಬಹುದು ಎಂದರು. ವಿಜ್ಞಾನ ಶಿಕ್ಷಕಿ ಸಂಗೀತ ನಾಯಕ್ ವಿಜ್ಞಾನ ವಿಶ್ಲೇಷಣೆಯ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ವಿಜ್ಞಾನವಸ್ತು ಪ್ರದರ್ಶದಲ್ಲಿ, ಸುಮಾರು 80ಕ್ಕೂ ಹೆಚ್ಚು ವಿಜ್ಞಾನ ಮತ್ತು ತಂತ್ರಜ್ಞಾನ ವಿವಿಧ ಪ್ರಯೋಗಾತ್ಮಕ ಪ್ರಾತ್ಯಕ್ಷೆಯನ್ನು ಪ್ರದರ್ಶಿಸಿದರು. ಆಡಳಿತ ಮಂಡಳಿಯ ಸದಸ್ಯರಾದ ಸ್ವಾತಿ ಜಠಾರ ಹಾಗೂ ಮುಖ್ಯೋಪಾಧ್ಯಾಯರಾದ ರಾಜೇಶ್ವರಿ ಹಡಪದ ಸೇರಿದಂತೆ ವಿವಿಧ ಶಾಲೆಯ ಶಿಕ್ಷಕರು, ಮಕ್ಕಳ ಪಾಲಕರು ಸೇರಿದಂತೆ ಇತರರು ಇದ್ದರು. ಶಿಕ್ಷಕಿಯರಾದ ಸುಮಿತ್ರ ಮರಿಗಬ್ಬಿನವರ ಪ್ರಾರ್ಥಿಸಿದರು. ಜಯಶ್ರೀ ನಾಯಕ್ ಸ್ವಾಗತಿಸಿ, ನಿರ್ವಹಿಸಿದರು. ದಾಖಲೆಗಳ ಗಣಕೀಕರಣ ಕಾಲಮಿತಿಯೊಳಗೆ ಪೂರ್ಣಗೊಳಿಸಿ: ಡಿಸಿ ಡಾ.ವಿಜಯಮಹಾಂತೇಶ ಭೇಟಿ
ಹಾವೇರಿ: ಬ್ಯಾಡಗಿ ತಹಸೀಲ್ದಾರ್ ಕಚೇರಿಗೆ ಹಾಗೂ ಕಾಗಿನೆಲೆ ನಾಡ ಕಚೇರಿಗೆ ಅನಿರೀಕ್ಷಿತ ಭೇಟಿ ನೀಡಿದ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ, ಕಂದಾಯ ದಾಖಲೆಗಳ ಗಣಕೀರಣ ಕಾರ್ಯದ ಪ್ರಗತಿಸಿದ ಪರಿಶೀಲಿಸಿ, ನಿಗದಿತ ಕಾಲಮಿತಿಯೊಳಗೆ ಗುರಿ ಸಾಧನೆ ಅಧಿಕಾರಿ ಹಾಗೂ ಸಿಬ್ಬಂದಿಗೆ ಸೂಚನೆ ನೀಡಿದರು.ಕೆಲಸದಲ್ಲಿ ಅನಗತ್ಯ ವಿಳಂಬವಾಗದಂತೆ ಕೆಲಸ ನಿರ್ವಹಿಸಬೇಕು. ಸಾರ್ವಜನಿಕ ದೂರುಗಳಿಗೆ ಅವಕಾಶ ನೀಡದಂತೆ ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಸೂಚಿಸಿದರು.
ಇದೇ ಸಂದರ್ಭದಲ್ಲಿ ಕಚೇರಿಗೆ ಬಂದ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ, ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿದರು.
ಸಾರ್ವಜನಿಕ ಸೇವೆ ಒದಗಿಸುವ ಎಲ್ಲ ಕಚೇರಿಗಳು ಸರ್ಕಾರದ ಸೌಲಭ್ಯಗಳನ್ನು ತ್ವರಿತವಾಗಿ ಸಾರ್ವಜನಿಕರಿಗೆ ತಲುಪಿಸಬೇಕು. ಪ್ರತಿ 15 ದಿನಕ್ಕೊಮ್ಮೆ ಕಚೇರಿ ಸಿಬ್ಬಂದಿಗಳೊಂದಿಗೆ ಸಭೆ ನಡೆಸಿ ಅವರಿಗೆ ಹಂಚಿಕೆ ಮಾಡಿರುವ ಕೆಲಸಗಳನ್ನು ಪರಿಶೀಲಿಸಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.ಅಧಿಕಾರಿಗಳು ತಮ್ಮ ಕಚೇರಿ ಸಿಬ್ಬಂದಿಗಳೊಂದಿಗೆ ಸೌಜನ್ಯಯುತವಾಗಿ ನಡೆದುಕೊಳ್ಳಬೇಕು. ಇದು ಅವರಲ್ಲಿ ಇನ್ನೂ ಹೆಚ್ಚು ಕೆಲಸ ಮಾಡುವ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ. ಕಡತಗಳನ್ನು ಅನಗತ್ಯ ವಿಳಂಬ ಮಾಡದೇ ಶೀಘ್ರ ವಿಲೇವಾರಿ ಮಾಡಬೇಕು. ಸಾರ್ವಜನಿಕರ ಕುಂದುಕೊರತೆಗಳನ್ನು ಆದಷ್ಟು ತುರ್ತಾಗಿ ಪರಿಹರಿಸಬೇಕು ಎಂದು ಸಲಹೆ ನೀಡಿದ್ದಾರೆ.