ದೊಡ್ಡಬಳ್ಳಾಪುರ: ಸಮಾಜದಲ್ಲಿ ಭ್ರಷ್ಟಾಚಾರವನ್ನು ಹೋಗಲಾಡಿಸಿ ಪಾರದರ್ಶಕತೆ ಹಾಗೂ ಹೊಣೆಗಾರಿಕೆಯನ್ನು ಮೂಡಿಸಲು ಯುವಸಮುದಾಯ ಪ್ರಶ್ನಿಸುವ ಮನೋಭಾವ ಬೆಳೆಸಿಕೊಳ್ಳಬೇಕಿದೆ ಎಂದು ಸಂಪನ್ಮೂಲ ವ್ಯಕ್ತಿ ವೆಂಕಟೇಶ್ ಕೊನಘಟ್ಟ ಹೇಳಿದರು.
ನಾವು ಬಯಸುವ ಬದಲಾವಣೆ ನಮ್ಮಿಂದಲೇ ಕಾಣುವಂತಾಗಬೇಕು. ಈ ಮೂಲಕ ಸಮಾಜವನ್ನು ಬದಲಿಸಬಹುದು. ವಿವಿಧ ಇಲಾಖೆಗಳಲ್ಲಿನ ಕಾರ್ಯಕ್ರಮಗಳನ್ನು ಅರಿತುಕೊಳ್ಳುವುದರಿಂದ ಸಂಬಂಧಿಸಿದ ಫಲಾನುಭವಿಗಳಿಗೆ ಸಹಕರಿಸಲು ಅನುಕೂಲವಾಗುತ್ತದೆ ಈ ಪ್ರಕ್ರಿಯೆಯಿಂದ ಯುವ ಸಮುದಾಯವು ಹಿರಿಯ ನಾಗರೀಕರಿಗೆ, ಮಹಿಳೆಯರಿಗೆ ಮತ್ತು ಮಕ್ಕಳಿಗೆ ಅಗತ್ಯವಿರುವ ಸಹಾಯ ಹಸ್ತ ನೀಡಲು ಸಹಕಾರಿಯಾಗುತ್ತದೆ ಎಂದು ಹೇಳಿದರು.
ಸಮಾಜದಲ್ಲಿನ ದುಶ್ಚಟಗಳಿಗೆ ಯುವ ಸಮುದಾಯ ಬಲಿಯಾಗದೆ ದೇಶದ ಮಾನವ ಸಂಪನ್ಮೂಲವನ್ನು ಸದೃಢಗೊಳಿಸಲು ಉನ್ನತ ಶಿಕ್ಷಣದೊಂದಿಗೆ ವಿವಿಧ ಕೌಶಲ್ಯಗಳನ್ನು ಅಳವಡಿಸಿಕೊಳ್ಳುವ ಅಗತ್ಯವಿದೆ ಇದರಿಂದ ಮುಂದಿನ ದಿನಗಳಲ್ಲಿ ಜೀವನವನ್ನು ರೂಪಿಸಿಕೊಳ್ಳಲು ಮತ್ತು ತಮ್ಮ ಸುತ್ತಲಿನ ಸಮಾಜಕ್ಕೆ ಮಹತ್ವವಾದ ಅಂತಹ ಕೊಡುಗೆ ನೀಡಲು ಸಹಕಾರಿಯಾಗುತ್ತದೆ ಎಂದರು.ರಾಷ್ಟ್ರೀಯ ಸೇವಾ ಯೋಜನಾಧಿಕಾರಿಗಳಾದ ಪ್ರೊ.ನೀರಜಾದೇವಿ ಹಾಗೂ ಡಾ.ಪ್ರಕಾಶ್ ಮಂಟೇದ ಹಾಜರಿದ್ದರು.
24ಕೆಡಿಬಿಪಿ2-ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆಯಲ್ಲಿ ನಡೆದ ಸರ್ಕಾರಿ ಕಾಲೇಜಿನ ಎನ್‌ಎಸ್‌ಎಸ್ ಶಿಬಿರದಲ್ಲಿ ಉಪನ್ಯಾಸ ಕಾರ್ಯಕ್ರಮ ನಡೆಯಿತು.