ಕನ್ನಡಪ್ರಭ ವಾರ್ತೆ ವಿಜಯಪುರ
ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಕರ್ನಾಟಕ ರಾಜ್ಯ ಮಹಿಳಾ ಆಯೋಗ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ನಗರದ ಜಿಲ್ಲಾ ಪಂಚಾಯತಿಯಲ್ಲಿ ಮಂಗಳವಾರ ನಡೆದ ಮಹಿಳಾ ಸ್ಪಂದನಾ ಮತ್ತು ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಹೋಟೆಲ್, ರೆಸಾರ್ಟ್ ಮತ್ತಿತರ ಕಡೆಗಳಲ್ಲಿ ಮಹಿಳೆಯರು ಕೆಲಸ ಮಾಡುವ ಸ್ಥಳಗಳಲ್ಲಿ ಪಾಶ್ ಕಾರ್ಯನಿರ್ವಹಿಸುವಂತಾಗಲಿ. ತನ್ಮೂಲಕ ಮಹಿಳೆಯರಿಗೆ ಸುರಕ್ಷತಾ ಭಾವ ಮೂಡಿಸಲು ಎಲ್ಲರೂ ಕೈಜೋಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.ಆಗಾಗ ಪಾಶ್ ತರಬೇತಿ ಆಯೋಜಿಸಲು ಸಲಹೆ ನೀಡಿದ ಅವರು, ಪ್ರತಿ ಮೂರು ತಿಂಗಳಿಗೊಮ್ಮೆ ಸಭೆ ನಡೆಯುವಂತೆ ನೋಡಿಕೊಳ್ಳಬೇಕು. ಎಲ್ಲ ವಸತಿ ನಿಲಯಗಳಲ್ಲಿ ಮೂಲಭೂತ ಸೌಲಭ್ಯ ಕಲ್ಪಿಸಲಾಗಿದೆ. ಮಕ್ಕಳ ಭವಿಷ್ಯದ ದೃಷ್ಟಿಯಿಂದ ಎಲ್ಲ ಸೌಲಭ್ಯ ಒದಗಿಸಿರುವುದನ್ನು ಕಾಲಕಾಲಕ್ಕೆ ವಸತಿ ನಿಲಯಕ್ಕೆ ಭೇಟಿ ನೀಡಿ ಪರಿಶೀಲಿಸಲಾಗುತ್ತಿದೆ ಎಂದು ಅಧಿಕಾರಿಗಳು ವಿವರಿಸಿದರು.
ಆಗ ಮಧ್ಯೆ ಪ್ರವೇಶಿಸಿದ ಡಾ.ನಾಗಲಕ್ಷ್ಮಿ ಚೌಧರಿ, ವಸತಿ ನಿಲಯಗಳಲ್ಲಿ ಬಾಲಕಿಯರಿಗಾಗಿ ಬೇಡಿಕೆ ಬಂದಾಗ ಅವಕಾಶ ಕಲ್ಪಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದ ಅವರು, ಮೂಲ ಸೌಲಭ್ಯಗಳಾದ ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಒದಗಿಸಿ ಹೆಣ್ಣುಮಕ್ಕಳಿಗೆ ಉತ್ತಮ ಶಿಕ್ಷಣ ಒದಗಿಸಬೇಕು. ಜೊತೆಗೆ ವಸತಿ ನಿಲಯದಲ್ಲಿ ಮೆನ್ಯೂ ಪ್ರಕಾರ ಆಹಾರ ಒದಗಿಸಬೇಕು. ವಸತಿ ನಿಲಯಗಳ ಸುಧಾರಣೆಗಾಗಿ ಬೇರೆ ಬೇರೆ ಇಲಾಖೆಯ ಅನುದಾನ ಬಳಸಿಕೊಳ್ಳಿ ಎಂದೂ ಸಲಹೆ ನೀಡಿದರು. ವಿದ್ಯಾಸಿರಿ ವಿದ್ಯಾರ್ಥಿ ವೇತನ ಯೋಜನೆ ಬಗ್ಗೆ ಅರಿವು ಮೂಡಿಸಬೇಕು, ಮಕ್ಕಳೊಂದಿಗೆ ಇತ್ತೀಚೆಗೆ ಸಂವಾದ ಮಾಡಿದಾಗ ಅನೇಕ ಮಕ್ಕಳು ತಮ್ಮ ಅಹವಾಲು ಹೇಳಿಕೊಂಡಿದ್ದಾರೆ. ಹಾಗಾಗಿ ಮಕ್ಕಳ ಫಲಿತಾಂಶ ಹೆಚ್ಚಳಕ್ಕೆ ಪ್ರಯತ್ನಿಸಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ವೈಯಕ್ತಿಕವಾಗಿ ಶಾಲಾ-ಕಾಲೇಜ್ ಗೆ ತೆರಳಿ ಮಾಹಿತಿ ನೀಡಿ, ಜಾಗೃತಿ ಮೂಡಿಸಬೇಕು. ಜೊತೆಗೆ ಪ್ರಚಾರ ಕೈಗೊಳ್ಳಬೇಕು. ಎಲ್ಲಾ ಕಾಲೇಜಿನಲ್ಲಿ ಮಾಹಿತಿ ಫಲಕ ಅಳವಡಿಸಿ ಬೇರೆ ಬೇರೆ ಇಲಾಖೆಯ ಮಾಹಿತಿಯನ್ನು ಪ್ರಚಾರ ಮಾಡಬೇಕು. ಸರ್ಕಾರಿ ಶಾಲೆಗಳಲ್ಲಿ ಹೆಣ್ಣುಮಕ್ಕಳ ಶಿಕ್ಷಣ ಕುರಿತು ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.ಕೆರೆಗಳಿಗೆ ನೀರು ಹರಿಸಿ: ಪಾಂಗ್ರೂನ್ ದೊಡ್ಡಿಯಲ್ಲಿ ವಾಸವಾಗಿರುವ ಜನರು ಹಾಗೂ ಸುತ್ತಲಿನವರಿಗೆ ಆ ಭಾಗದ ಕೆರೆಗಳಿಗೆ ನೀರು ಹರಿಸಿ, ಕುರಿಗಳಿಗೆ ಕುಡಿಯಲು ನೀರು ಕಲ್ಪಿಸಲು ಅನುಕೂಲ ಮಾಡಿಕೊಡಿ. ಸರ್ಕಾರದ ಯೋಜನೆಗಳ ಬಗ್ಗೆ ಅಲ್ಲಿನ ಜನತೆಗೆ ತಿಳುವಳಿಕೆ ನೀಡಬೇಕು. ಅಲ್ಲಿನ ಜನರಿಗೆ ಸಾರಿಗೆ ಸೌಕರ್ಯ ಕಲ್ಪಿಸಬೇಕು. ದೊಡ್ಡಿಯ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕು, ಒಟ್ಟಾರೆ ಕುಡಿಯುವ ನೀರು, ಶೌಚಾಲಯ, ಸಮುದಾಯ ಶೌಚಾಲಯಕ್ಕೆ ಆದ್ಯತೆ ನೀಡುಂತೆ ತಿಳಿಸಿದರು.ಸಭೆ ಬಳಿಕ, ಆಗಮಿಸಿದ ಮಹಿಳೆಯರ ಕುಂದುಕೊರತೆ ಆಲಿಸಿ, ಅವರ ಸಮಸ್ಯೆಗಳಿಗೆ ಸ್ಪಂದಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ಆನಂದ.ಕೆ ಇದ್ದು ಮಹಿಳೆಯರ ಕುಂದು ಕೊರತೆ ಆಲಿಸಿ, ಮಹಿಳಾ ಆಯೋಗದ ಅಧ್ಯಕ್ಷರೊಂದಿಗೆ ಪರಿಹರಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಬಾಕ್ಸ್ಅಕ್ರಮ ಮದ್ಯ ಮಾರಾಟ ಕೇಸ್ ದಾಖಲಿಸಿ
-----